ಫಿಲಿಪ್ಪಿಯವರಿಗೆ 1:18 - ಕನ್ನಡ ಸತ್ಯವೇದವು J.V. (BSI)18 ಹೇಗಾದರೇನು? ಯಾವ ರೀತಿಯಿಂದಾದರೂ ಕಪಟದಿಂದಾಗಲಿ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವದುಂಟು; ಇದಕ್ಕೆ ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಹೇಗಾದರೇನು? ಯಾವ ರೀತಿಯಿಂದಾದರೂ ಸರಿಯೇ ಕಪಟದಿಂದಾಗಲಿ ಅಥವಾ ಸತ್ಯದಿಂದಾಗಲಿ ಕ್ರಿಸ್ತನನ್ನು ಪ್ರಸಿದ್ಧಿಪಡಿಸುವುದುಂಟು, ಇದಕ್ಕೆ ನಾನು ಸಂತೋಷಿಸುತ್ತೇನೆ, ಮುಂದೆಯೂ ಸಂತೋಷಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅವರ ಉದ್ದೇಶ ಏನೇ ಆಗಿರಲಿ, ನನಗದು ಮುಖ್ಯವಲ್ಲ. ಕ್ರಿಸ್ತಯೇಸುವನ್ನು ಅವರು ಸಾರುತ್ತಿರುವುದೇ ನನಗೆ ಸಂತೋಷ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವರು ನನಗೆ ತೊಂದರೆ ಮಾಡಿದರೂ ನಾನು ಚಿಂತಿಸುವುದಿಲ್ಲ. ಅವರ ಉದ್ದೇಶವು ಯಥಾರ್ಥವಾಗಿದ್ದರೂ ಯಥಾರ್ಥವಾಗಿಲ್ಲದಿದ್ದರೂ ನನಗದು ಮುಖ್ಯವಲ್ಲ. ಅವರು ಕ್ರಿಸ್ತನ ವಿಷಯವಾಗಿ ಜನರಿಗೆ ಬೋಧಿಸುತ್ತಿರುವುದರಿಂದ ನಾನು ಉಲ್ಲಾಸಿಸುತ್ತೇನೆ, ಇನ್ನು ಮುಂದೆಯೂ ಉಲ್ಲಾಸಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಹೇಗಾದರೇನು? ಕಪಟದಿಂದಾಗಲಿ, ಸತ್ಯದಿಂದಾಗಲಿ ಯಾವ ರೀತಿಯಿಂದಾದರೂ ಕ್ರಿಸ್ತನನ್ನು ಅವರು ಸಾರುತ್ತಿರುವುದೇ ನನಗೆ ಸಂತೋಷ. ಹೌದು ಮುಂದೆಯೂ ಸಂತೋಷಿಸುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಕಶೆಬಿ ಹೊಂವ್ದಿ, ಕುಸ್ಡೆಪಾನ್ ನಾ ತರ್ ಬರೆಪಾನಾನ್ ಕ್ರಿಸ್ತಾಕ್ ಪರ್ಗಟ್ ಕರುಲಾಗಲೆ ಮಾಕಾ ಖುಶಿ ಹಾಯ್, ಅನಿ ಫಿಡೆ ಮಿಯಾ ಖುಶಿ ಹೊತಾ. ಅಧ್ಯಾಯವನ್ನು ನೋಡಿ |