Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:21 - ಕನ್ನಡ ಸತ್ಯವೇದವು J.V. (BSI)

21 ನನಗಂತೂ ಬದುಕುವದಂದರೆ ಕ್ರಿಸ್ತನೇ, ಸಾಯುವದು ಲಾಭವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನನಗಂತೂ ಬದುಕುವುದೆಂದರೆ ಕ್ರಿಸ್ತಯೇಸುವೇ; ಸಾಯುವುದು ಲಾಭವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದೆಂದರೆ ಲಾಭವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಮಿಯಾ ಝಿತ್ತೊ ರ್‍ಹಾತಲೊ ಮಟ್ಲ್ಯಾರ್ ಕ್ರಿಸ್ತುಚ್, ಮರಾನ್ಬಿ ಮಾಕಾ ಫಾಯ್ದೊಚ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:21
16 ತಿಳಿವುಗಳ ಹೋಲಿಕೆ  

ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ಹೇಗಂದರೆ ದೇವಕುಮಾರನ ಮೇಲಣ ನಂಬಿಕೆಯಲ್ಲಿಯೇ. ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನು ಒಪ್ಪಿಸಿಬಿಟ್ಟನು.


ಇದನ್ನು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿರುವದೇ ಉತ್ತಮವೆಂದು ಎಣಿಸುತ್ತೇವೆ.


ಭೂವಿುಯ ಮೇಲಿರುವ ನಮ್ಮ ಮನೆಯು ಅಂದರೆ ನಮ್ಮ ದೇಹವೆಂಬ ಗುಡಾರವು ಕಿತ್ತುಹಾಕಲ್ಪಟ್ಟರೂ ದೇವರಿಂದುಂಟಾದ ಒಂದು ಕಟ್ಟಡವು ಪರಲೋಕದಲ್ಲಿ ನಮಗುಂಟೆಂದು ಬಲ್ಲೆವು. ಅದು ಕೈಯಿಂದ ಕಟ್ಟಿದ ಮನೆಯಾಗಿರದೆ ನಿತ್ಯವಾಗಿರುವಂಥದಾಗಿದೆ.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ;


ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷರಾಗುವಿರಿ.


ಹೀಗಿರುವದರಿಂದ ನಾವು ಯಾವಾಗಲೂ ಧೈರ್ಯವುಳ್ಳವರಾಗಿದ್ದೇವೆ.


ಹೇಗಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯದೆ; ಹಾಗೆಯೇ ಆಗುವದೆಂದು ಭರವಸವುಂಟು.


ಪರಲೋಕದಿಂದ ಒಂದು ಶಬ್ದವು ನನಗೆ ಕೇಳಿಸಿತು. ಅದು - ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು - ಹೌದು, ಅವರು ಧನ್ಯರೇ; ಅವರ ಕಷ್ಟ ತೀರಿತು, ಅವರಿಗೆ ವಿಶ್ರಾಂತಿಯಾಗುವದು; ಅವರ ಸುಕೃತ್ಯಗಳು ಅವರೊಡನೆ ಬರುವವು ಎಂದು ಹೇಳುತ್ತಾನೆ.


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ಶಿಲುಬೆಗೆ ಹಾಕಿಸಿಕೊಂಡು ನನ್ನ ಪಾಲಿಗೆ ಸತ್ತಿತು, ನಾನು ಶಿಲುಬೆಗೆ ಹಾಕಿಸಿಕೊಂಡು ಲೋಕದ ಪಾಲಿಗೆ ಸತ್ತೆನು.


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.


ಪೌಲನಾಗಲಿ ಅಪೊಲ್ಲೋಸನಾಗಲಿ ಕೇಫನಾಗಲಿ, ಲೋಕವಾಗಲಿ ಜೀವವಾಗಲಿ ಮರಣವಾಗಲಿ, ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ;


ಶರೀರದಲ್ಲಿಯೇ ಬದುಕಬೇಕಾದಲ್ಲಿ ಕೆಲಸಮಾಡಿ ಫಲ ಹೊಂದಲು ನನಗೆ ಅನುಕೂಲವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು