Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:9 - ಕನ್ನಡ ಸತ್ಯವೇದವು J.V. (BSI)

9 ಮತ್ತು ನಾನು ದೇವರನ್ನು ಪ್ರಾರ್ಥಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮತ್ತು ನಿಮ್ಮ ಪ್ರೀತಿಯು ಇನ್ನೂ ಅಧಿಕವಾಗಿ ಹೆಚ್ಚುತ್ತಾ ಪೂರ್ಣ ಜ್ಞಾನ ವಿವೇಕಗಳಿಂದ ಕೂಡಿರಬೇಕೆಂದು ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀವು ಪ್ರೀತಿಯಲ್ಲಿ ಪ್ರವರ್ಧಿಸುತ್ತಾ, ಪೂರ್ಣ ಜ್ಞಾನ ಹಾಗೂ ವಿವೇಕದಿಂದ ಕೂಡಿದವರಾಗಬೇಕೆಂಬುದೇ ನನ್ನ ಪ್ರಾರ್ಥನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿಮಗಾಗಿ ನಾನು ಪ್ರಾರ್ಥಿಸುವುದೇನೆಂದರೆ: ನೀವು ಪ್ರೀತಿಯಲ್ಲಿ ವೃದ್ಧಿಯಾಗುತ್ತಾ ಜ್ಞಾನವಂತರೂ ತಿಳುವಳಿಕೆಯುಳ್ಳವರೂ ಆಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿಮ್ಮ ಪ್ರೀತಿಯು ಹೆಚ್ಚುತ್ತಾ ಜ್ಞಾನದಲ್ಲಿಯೂ ಒಳನೋಟದಲ್ಲಿಯೂ ಬಹು ಹೆಚ್ಚಾಗಿ ಸಮೃದ್ಧಿಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತುಮ್ಚೊ ಪ್ರೆಮ್ ಅನಿಬಿ ಲೈ ಜಾಸ್ತಿ ಹೊವ್ನ್ಗೆತ್ ಫುರಾ ಬುದ್ಧಿನ್ ಅನಿ ಶಾನೆಪಾನ್ ಭರುನ್ ರ್‍ಹಾವ್ಚೆ ಮನುನ್ ಮಿಯಾ ತುಮ್ಚ್ಯಾ ಸಾಟ್ನಿ ಮಾಗ್ನಿ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:9
19 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ನಮ್ಮ ಪ್ರೀತಿಯು ಹೇಗೋ ಹಾಗೆಯೇ ನಿಮ್ಮ ಪ್ರೀತಿಯೂ ಒಬ್ಬರೊಬ್ಬರ ಮೇಲೆಯೂ ಎಲ್ಲಾ ಮನುಷ್ಯರ ಮೇಲೆಯೂ ಅಭಿವೃದ್ಧಿಹೊಂದಿ ಅತ್ಯಧಿಕವಾಗುವಂತೆ ಕರ್ತನು ಅನುಗ್ರಹಿಸಲಿ.


ಆದಕಾರಣ ನಾವು ನಿಮ್ಮ ಸುದ್ದಿಯನ್ನು ಕೇಳಿದ ದಿವಸದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲ ಆತ್ಮೀಯ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ


ಕ್ರಿಸ್ತನಲ್ಲಿ ನಮಗೆ ದೊರಕಿರುವ ಎಲ್ಲಾ ಸುವರಗಳನ್ನು ಕುರಿತು ನೀನು ತಿಳುವಳಿಕೆಯನ್ನು ಹೊಂದುತ್ತಿರುವಲ್ಲಿ ಕ್ರಿಸ್ತ ನಂಬಿಕೆಯಲ್ಲಿರುವ ನಿನ್ನ ಅನ್ಯೋನ್ಯತೆಯು ಕ್ರಿಸ್ತನಿಗೆ ಹೆಚ್ಚಾದ ಮಹಿಮೆಯನ್ನು ಉಂಟುಮಾಡಬೇಕೆಂದು ಪ್ರಾರ್ಥಿಸುತ್ತೇನೆ.


ಈ ಸ್ವಭಾವವು ಅದನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ದಿನೇದಿನೇ ನೂತನವಾಗುತ್ತಾ ಪೂರ್ಣಜ್ಞಾನವನ್ನು ಉಂಟುಮಾಡುತ್ತದೆ.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ನೀವು ದೇವರ ಮೇಲಣ ನಂಬಿಕೆ ವಾಕ್ಚಾತುರ್ಯ ಜ್ಞಾನ ಸಕಲವಿಧವಾದ ಆಸಕ್ತಿ ನಮ್ಮ ಪ್ರೇರಣೆಯಿಂದ ನಿಮ್ಮಲ್ಲಿ ಹುಟ್ಟಿದ ಪ್ರೀತಿ ಇವೇ ಮೊದಲಾದ ಎಲ್ಲಾ ವಿಷಯಗಳಲ್ಲಿ ಹೇಗೆ ಸಮೃದ್ಧರಾಗಿದ್ದೀರೋ ಹಾಗೆಯೇ ಈ ಧರ್ಮಕಾರ್ಯದಲ್ಲಿಯೂ ಸಮೃದ್ಧರಾಗಿರಿ.


ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.


ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಬರುತ್ತದೆ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚುತ್ತಾ ಬರುತ್ತದೆ.


ನೀವು ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಅಭಿವೃದ್ಧಿಯನ್ನು ಹೊಂದುತ್ತಾ ಇರ್ರಿ. ಆತನಿಗೆ ಈಗಲೂ ಸದಾಕಾಲವೂ ಸ್ತೋತ್ರ. ಆಮೆನ್.


ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೋಸ್ಕರ ಅಂದರೆ ಜ್ಞಾನೇಂದ್ರಿಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಇದು ಒಳ್ಳೇದು ಅದು ಕೆಟ್ಟದ್ದು ಎಂಬ ಭೇದವನ್ನು ತಿಳಿದವರಿಗೋಸ್ಕರವಾಗಿದೆ.


ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ.


ನೀತಿವಂತರ ಮಾರ್ಗವು ಮಧ್ಯಾಹ್ನದವರೆಗೂ ಹೆಚ್ಚುತ್ತಾ ಬರುವ ಬೆಳಗಿನ ಬೆಳಕಿನಂತಿದೆ.


ಕಡೇ ಮಾತೇನಂದರೆ, ಸಹೋದರರೇ, ನಾವು ಕರ್ತನಾದ ಯೇಸುವಿನ ಅಧಿಕಾರದಿಂದ ನಿಮಗೆ ಕೊಟ್ಟ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ಹೀಗಾದರೂ ಶಿಷ್ಟನು ತನ್ನ ಮಾರ್ಗವನ್ನೇ ಹಿಡಿದು ನಡೆಯುವನು, ಶುದ್ಧಹಸ್ತನು ಬಲಗೊಳ್ಳುತ್ತಲೇ ಇರುವನು.


ಉತ್ಕೃಷ್ಟವಾದ ಜ್ಞಾನವಿವೇಕಗಳನ್ನು ನನಗೆ ಹೇಳಿಕೊಡು; ನಿನ್ನ ಆಜ್ಞೆಗಳನ್ನು ನಂಬಿಕೊಂಡಿದ್ದೇನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು