Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:1 - ಕನ್ನಡ ಸತ್ಯವೇದವು J.V. (BSI)

1 ಕ್ರಿಸ್ತನಿಂದ ಉತ್ತೇಜನ, ಪ್ರೀತಿಯ ಪ್ರೇರಣೆ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವವಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕ್ರಿಸ್ತನಿಂದ ಪ್ರೋತ್ಸಾಹ, ಪ್ರೀತಿಯ ಸಾಂತ್ವನ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕ್ರಿಸ್ತಯೇಸುವಿನಲ್ಲಿ ನಿಮಗೆ ಉತ್ಸಾಹ, ಉತ್ತೇಜನ, ಪ್ರೀತಿ, ಪ್ರೇರಣೆ, ಪವಿತ್ರಾತ್ಮ ಅವರ ಅನ್ಯೋನ್ಯತೆ, ದೀನದಯಾಳತೆ ಇರುವುದಾದರೆ ಐಕಮತ್ಯದಿಂದ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಿಮ್ಮಲ್ಲಿ ಕ್ರಿಸ್ತನಿಂದಾದ ಉತ್ತೇಜನ, ಪ್ರೀತಿಯ ಪ್ರೇರಣೆ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯ ದಯಾರಸಗಳು ಇವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೀವು ಕ್ರಿಸ್ತನೊಂದಿಗೆ ಐಕ್ಯವಾಗಿರುವುದರಿಂದ ಉತ್ತೇಜನ, ಅವರ ಪ್ರೀತಿಯಿಂದ ಸಂತೈಸುವಿಕೆ, ಆತ್ಮನಲ್ಲಿ ಅನ್ಯೋನ್ಯತೆ, ಕನಿಕರದ ವಾತ್ಸಲ್ಯಗಳು ಇರುವುದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತುಮ್ಚೊ ಕ್ರಿಸ್ತಾಚೊ ಜಿವನ್ ಘಟ್ ಕರುನ್ ಘೆವಾ, ಅನಿ ತೆಜೆ ಪ್ರೆಮ್ ತುಮ್ಕಾ ಆರಾಮ್ ಥವ್ತಾ ತುಮಿ ಪವಿತ್ರ್ ಆತ್ಮ್ಯಾ ವಾಂಗ್ಡಾ ಎಕ್ ಹೊವ್ನ್, ಎಕಾಮೆಕಾಕ್ ಕಾಳ್ಜಿ ಅನಿ ದಯಾ ದಾಕ್ವುಲೆ ಹೊವ್ನ್ ಹಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:1
42 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ನೀವು ದೇವರಿಂದ ಆರಿಸಿಕೊಂಡವರೂ ಪ್ರತಿಷ್ಠಿತರೂ ಪ್ರಿಯರೂ ಆಗಿರುವದರಿಂದ ಕನಿಕರ ದಯೆ ದೀನಭಾವ ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.


ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನಿಂದಾಗುವ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮನ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡವಿರಲಿ.


ಹೇಗಂದರೆ ನೀವೆಲ್ಲರು ಪ್ರೀತಿಯಿಂದ ಹೊಂದಿಕೆಯಾಗಿದ್ದು ಬುದ್ಧಿಪೂರ್ವಕ ನಿಶ್ಚಯವೆಂಬ ಭಾಗ್ಯವನ್ನು ಪಡೆದು ದೇವರು ತಿಳಿಸಿರುವ ಮರ್ಮವನ್ನು ಅಂದರೆ ತನ್ನಲ್ಲೇ ಜ್ಞಾನವಿದ್ಯಾಸಂಬಂಧವಾದ ನಿಕ್ಷೇಪಗಳನ್ನೆಲ್ಲಾ ಅಡಗಿಸಿಕೊಂಡಿರುವ ಕ್ರಿಸ್ತನನ್ನು ತಿಳುಕೊಂಡವರಾಗಿ ಹೃದಯದಲ್ಲಿ ದೃಢವಾಗಿರಬೇಕೆಂಬ ಕುತೂಹಲವು ನನಗುಂಟು.


ಯೆಹೂದ್ಯರಾಗಲಿ ಗ್ರೀಕರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗುವದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು; ಒಂದೇ ಆತ್ಮ ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿತು.


ಆಹಾ, ಸಹೋದರರು ಒಂದಾಗಿರುವದು ಎಷ್ಟೋ ಒಳ್ಳೇದು, ಎಷ್ಟೋ ರಮ್ಯವಾದದ್ದು!


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ - ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ದಯೆ ಉಪಕಾರ ನಂಬಿಕೆ ಸಾಧುತ್ವ ಶಮೆದಮೆ ಇಂಥವುಗಳೇ.


ನೀವು ಪುತ್ರರಾಗಿರುವದರಿಂದ ದೇವರು ಅಪ್ಪಾ ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು.


ನಂಬಿದ್ದ ಮಂಡಲಿಯವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಇದಲ್ಲದೆ ಒಬ್ಬನಾದರೂ ತನಗಿದ್ದ ಆಸ್ತಿಯಲ್ಲಿ ಯಾವದೊಂದನ್ನೂ ಸ್ವಂತವಾದದ್ದೆಂದು ಹೇಳಲಿಲ್ಲ. ಎಲ್ಲವೂ ಅವರಿಗೆ ಹುದುವಾಗಿ ಇತ್ತು.


ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವನು ಆತನಲ್ಲಿ ನೆಲೆಗೊಂಡಿರುತ್ತಾನೆ, ಆತನು ಇವನಲ್ಲಿ ನೆಲೆಗೊಂಡಿರುತ್ತಾನೆ. ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ಆತನು ನಮಗೆ ಅನುಗ್ರಹಿಸಿದ ಆತ್ಮನಿಂದಲೇ ಬಲ್ಲೆವು.


ಆದರೆ ಈಗ ನಿನ್ನ ಬಳಿಗೆ ಬರುವವನಾಗಿದ್ದೇನೆ; ಆದದರಿಂದ ಇವರಲ್ಲಿ ನನ್ನ ಆನಂದವು ಪರಿಪೂರ್ಣವಾಗಿರುವಂತೆ ಲೋಕದಲ್ಲಿದ್ದು ಈ ಮಾತುಗಳನ್ನು ಆಡುತ್ತೇನೆ.


ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ; ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ, ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.


ನಿಜವಾದ ಸುನ್ನತಿಯವರು ಯಾರಂದರೆ - ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವೇ.


ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?


ಹಾಗೆ ಪವಿತ್ರಾತ್ಮನು ಸಹ ನಮ್ಮ ಅಶಕ್ತಿಯನ್ನು ನೋಡಿ ಸಹಾಯಮಾಡುತ್ತಾನೆ. ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲದ್ದರಿಂದ ಪವಿತ್ರಾತ್ಮನು ತಾನೇ ಮಾತಿಲ್ಲದಂಥ ನರಳಾಟದಿಂದ ನಮಗೋಸ್ಕರ ಬೇಡಿಕೊಳ್ಳುತ್ತಾನೆ.


ಈ ನಿರೀಕ್ಷೆಯು ನಮ್ಮ ಆಶೆಯನ್ನು ಭಂಗಪಡಿಸುವದಿಲ್ಲ; ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿರಸವು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆಯಲ್ಲಾ.


ಅವರು ದಿನಾಲು ಏಕಮನಸ್ಸಿನಿಂದ ದೇವಾಲಯದಲ್ಲಿ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ ಸರಲ ಹೃದಯದಿಂದಲೂ ಊಟಮಾಡುತ್ತಾ ಇದ್ದರು;


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ದೇವರಿಗೆ ವಿಧೇಯರಾಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗುವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನುಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಆಶ್ರಯವನ್ನು ಹೊಂದಬೇಕೆಂದು ಓಡಿಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಎರಡು ನಿಶ್ಚಲವಾದ ಆಧಾರಗಳು ಇರುವ ಕಾರಣ ಬಲವಾದ ಧೈರ್ಯವುಂಟಾಯಿತು.


ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.


ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,


ಕ್ರಿಸ್ತನ ಅನ್ಯೋನ್ಯತೆಯಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರವು.


ಸಹೋದರರೇ, ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತು ನನಗಿರುವ ಹೆಚ್ಚಳದ ಮೇಲೆ ಆಣೆ ಇಟ್ಟು ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.


ಶಾಂತಿಯನ್ನು ನಿಮಗೆ ಬಿಟ್ಟುಹೋಗುತ್ತೇನೆ, ನನ್ನಲ್ಲಿರುವಂಥ ಶಾಂತಿಯನ್ನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಿಂದ ನಾನು ನಿಮಗೆ ಕೊಡುವದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ನಾನು ನಿಮ್ಮನ್ನು ಅನಾಥರಾಗಿ ಬಿಡುವದಿಲ್ಲ; ನಿಮ್ಮ ಬಳಿಗೆ ಬರುತ್ತೇನೆ.


ಆ ಕಾಲದಲ್ಲಿ ಯೆರೂಸಲೇವಿುನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದು ಇಸ್ರಾಯೇಲ್ ಜನರನ್ನು ಸಂತೈಸುವವನು ಯಾವಾಗ ಬಂದಾನೆಂದು ಹಾರೈಸುತ್ತಿದ್ದನು; ಮತ್ತು ಪವಿತ್ರಾತ್ಮಪ್ರೇರಿತನಾಗಿದ್ದನು.


ಆದದರಿಂದ ಮೋವಾಬಿನ ನಿವಿುತ್ತ ನನ್ನ ಹೃದಯವು, ಕೀರ್‍ಹೆರೆಸಿನ ನಿವಿುತ್ತ ನನ್ನ ಅಂತರಂಗವು, ಕಿನ್ನರಿಯಂತೆ ಅಲುಗಿ ನುಡಿಯುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು