ಫಿಲಿಪ್ಪಿಯವರಿಗೆ 2:13 - ಕನ್ನಡ ಸತ್ಯವೇದವು J.V. (BSI)13 ಯಾಕಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯಾಕೆಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಮತ್ತು ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಹೌದು, ಆತನಿಗೆ ಮೆಚ್ಚಿಕೆಕರವಾದ ಕಾರ್ಯಗಳನ್ನು ಮಾಡಬೇಕೆಂಬ ಅಪೇಕ್ಷೆಯನ್ನು ಆತನೇ ನಿಮ್ಮಲ್ಲಿ ಹುಟ್ಟಿಸುತ್ತಾನೆ ಅಲ್ಲದೆ ಅವುಗಳನ್ನು ಮಾಡಲು ಆತನೇ ನಿಮಗೆ ಶಕ್ತಿಯನ್ನು ಕೊಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಏಕೆಂದರೆ, ತಮ್ಮ ಸದುದ್ದೇಶವನ್ನು ನೆರವೇರಿಸುವಂತೆ ನಿಮ್ಮಲ್ಲಿ ಬಯಕೆಯನ್ನೂ ಕಾರ್ಯಸಾಧನೆಯನ್ನೂ ನಿರ್ಮಿಸುವವರು ದೇವರೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಕಶ್ಯಾಕ್ ಮಟ್ಲ್ಯಾರ್, ದೆವಾನುಚ್ ಅಪ್ಲಿ ಬರಿ ಇಚ್ಛ್ಯಾ ಪುರಾ ಕರುಚೆ ಮನುನ್ ತುಮ್ಚ್ಯಾತ್ ಉದ್ದೆಶ್ ಅನಿ ಕಟ್ಪಟ್ ತಯಾರ್ ಕರ್‍ಲಾ. ಅಧ್ಯಾಯವನ್ನು ನೋಡಿ |
ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದೆಯೂ ಇದ್ದಾಗ - ಹಿರಿಯನು ಕಿರಿಯನಿಗೆ ಸೇವೆ ಮಾಡುವನೆಂಬದಾಗಿ ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಸ್ಥಿರವಾಗಿರಬೇಕೆಂದು ತೋರಿಸಿದನು. ಆ ಸಂಕಲ್ಪವು ಪುಣ್ಯಕ್ರಿಯೆಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.