Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:5 - ಕನ್ನಡ ಸತ್ಯವೇದವು J.V. (BSI)

5 ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕ್ರಿಸ್ತಯೇಸುವಿನಲ್ಲಿರುವ ಮನೋಭಾವ ನಿಮ್ಮಲ್ಲೂ ನೆಲಸಿರಲಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿಯೂ ಇರಲಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಜೆಜು ಕ್ರಿಸ್ತಾಕ್ ಹೊತ್ತ್ಯಾ ಸಾರ್ಕೊ ಬರೊ ಮನ್ ತುಮ್ಕಾಬಿ ರಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:5
16 ತಿಳಿವುಗಳ ಹೋಲಿಕೆ  

ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.


ನಾನು ಸಾತ್ವಿಕನೂ ದೀನಮನಸ್ಸುಳ್ಳವನೂ ಆಗಿರುವದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಲ್ಲಿ ಕಲಿತುಕೊಳ್ಳಿರಿ;


ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿರಿ; ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ತನ್ನ ಹೆಜ್ಜೆಯ ಜಾಡಿನಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿಹೋದನು.


ಕ್ರಿಸ್ತನು ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಭಾವವನ್ನೇ ಹಿಡಿದುಕೊಳ್ಳಿರಿ.


ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೆ ಮನುಷ್ಯರೆಲ್ಲರೂ ರಕ್ಷಣೆಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ ಎಲ್ಲರನ್ನೂ ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.


ಕ್ರಿಸ್ತನು ನಿಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ಆ ಸ್ಥಿರಚಿತ್ತವನ್ನೂ ಆದರಣೆಯನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಅನುಸರಿಸಿ ಒಂದೇ ಮನಸ್ಸುಳ್ಳವರಾಗಿರುವಂತೆ ನಿಮಗೆ ದಯಪಾಲಿಸಲಿ.


ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವೂ ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು - ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯವೆಂಬದಾಗಿ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು ಅಂದನು.


ಯಾಕಂದರೆ ಕ್ರಿಸ್ತನು ಸಹ ತನ್ನ ಸುಖವನ್ನು ನೋಡಿಕೊಳ್ಳಲಿಲ್ಲ. ದೇವರೇ, ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೆ ಬಂದವು ಎಂಬದಾಗಿ ಬರೆದಿರುವಂತೆ ಆತನಿಗೆ ಸಂಭವಿಸಿತಲ್ಲಾ.


ಯಾವನು ಹೆಚ್ಚಿನವನು; ಊಟಕ್ಕೆ ಕೂತವನೋ ಸೇವೆಮಾಡುವವನೋ? ಊಟಕ್ಕೆ ಕೂತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ.


ನೀನು ತೆಗೆದುಕೊಳ್ಳುವ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ನೀನು ಪ್ರೀತಿಗೆ ತಕ್ಕಂತೆ ಇನ್ನು ನಡೆಯುವವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಪ್ರಾಣಕೊಟ್ಟನೋ ಅವನನ್ನು ನಿನಗೆ ಇಷ್ಟವಾದ ಆಹಾರದ ನಿವಿುತ್ತ ಕೆಡಿಸಬಾರದು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು ಫಿಲಿಪ್ಪಿಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಅವರಲ್ಲಿರುವ ಸಭಾಧ್ಯಕ್ಷರಿಗೂ ಸಭಾಸೇವಕರಿಗೂ ಬರೆಯುವದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು