Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:11 - ಕನ್ನಡ ಸತ್ಯವೇದವು J.V. (BSI)

11 ಹೀಗಾದರೆ ಸತ್ತವರಲ್ಲಿ ಕೆಲವರಿಗೆ ಆಗುವ ಪುನರುತ್ಥಾನವು ನನಗೆ ಒದಗಿ ಬಂದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಹೀಗಾದರೆ ಸತ್ತವರಲ್ಲಿ ಕೆಲವರಿಗೆ ಆಗುವ ಪುನರುತ್ಥಾನದ ಅನುಭವ ನನಗೂ ಆದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹೀಗೆ ನಾನೂ ಸಹ ಮೃತ್ಯುಂಜಯನಾಗುತ್ತೇನೆ ಎಂಬುದೇ ನನ್ನ ನಂಬಿಕೆ-ನಿರೀಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹೀಗಾದರೆ, ನಾನು ಸತ್ತವರೊಳಗಿಂದ ಎಬ್ಬಿಸಲ್ಪಡುತ್ತೇನೆ ಎಂಬ ನಿರೀಕ್ಷೆ ನನಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಹೇಗಾದರೂ, ನಾನೂ ಸಹ ಸತ್ತವರೊಳಗಿಂದ ಪುನರುತ್ಥಾನ ಹೊಂದುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಅಶೆ ಹೊಲ್ಯಾರುಚ್ ಮರಲ್ಯಾಕ್ನಿ ಪರ್ತುನ್ ಝಿತ್ತೊ ಹೊತಲ್ಯಾ ಸಾರ್ಕೆಚ್ ಅನುಭವ್ ಮಾಕಾಬಿ ಹೊಯ್ಲ್ ಮನ್ತಲೊ ಮಾಜೊ ಬರೊಸೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:11
17 ತಿಳಿವುಗಳ ಹೋಲಿಕೆ  

ವಿುಕ್ಕ ಸತ್ತವರು ಆ ಸಾವಿರ ವರುಷ ತೀರುವ ತನಕ ಜೀವಿತರಾಗಿ ಏಳಲಿಲ್ಲ. ಇದೇ ಪ್ರಥಮ ಪುನರುತ್ಥಾನವು.


ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಸೇವಿಸುತ್ತಾ ಆ ವಾಗ್ದಾನದ ಫಲವನ್ನು ಹೊಂದುವದಕ್ಕೆ ನಿರೀಕ್ಷಿಸುತ್ತಾ ಇದ್ದಾರೆ. ರಾಜಾ, ಆ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆಮಾಡುತ್ತಾರೆ.


ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ ಒಂದು ಪಾಲು ಫರಿಸಾಯರೂ ಇರುವದನ್ನು ಪೌಲನು ತಿಳಿದು - ಸಹೋದರರೇ, ನಾನು ಫರಿಸಾಯನು, ಫರಿಸಾಯರ ಮಗನು; ಸತ್ತವರೆದ್ದು ಬರುವರು ಎಂಬ ನಿರೀಕ್ಷೆಯ ವಿಷಯವಾಗಿ ನನ್ನನ್ನು ವಿಚಾರಣೆಮಾಡುತ್ತಾರೆ ಎಂದು ಹಿರೀಸಭೆಯಲ್ಲಿ ಕೂಗಿದನು.


ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಪುನರುತ್ಥಾನದಿಂದ ತಿರಿಗಿ ಹೊಂದಿದರು. ಕೆಲವರು ತಾವು ಯಾತನೆಯ ಯಂತ್ರಕ್ಕೆ ಕಟ್ಟಲ್ಪಟ್ಟಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿ ಮುರಿಸಿಕೊಂಡು ಸತ್ತರು.


ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ; ಯಾಕಂದರೆ ಮೊದಲು ಮತಭ್ರಷ್ಟತೆಯು ಉಂಟಾಗಿ ಅಧರ್ಮಸ್ವರೂಪನು ಬೈಲಿಗೆ ಬಂದ ಹೊರತು ಆ ದಿನವು ಬರುವದಿಲ್ಲ.


ಆದದರಿಂದ ನಾನು ಇನ್ನು ತಡೆಯಲಾರದೆ ಒಂದು ವೇಳೆ ಶೋಧಕನು ನಿಮ್ಮನ್ನು ಶೋಧಿಸಿದ್ದರಿಂದ ನಮ್ಮ ಪ್ರಯಾಸವು ವ್ಯರ್ಥವಾಯಿತೋ ಏನೋ ಎಂದು ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳಿದುಕೊಳ್ಳುವದಕ್ಕೆ ಅವನನ್ನು ಕಳುಹಿಸಿದೆನು.


ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಮೋಸಹೋದಳೋ ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಪಾತಿವ್ರತ್ಯವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವುಂಟು.


ಇತರರನ್ನು ಹೋರಾಟಕ್ಕೆ ಕರೆದ ಮೇಲೆ ನಾನೇ ಅಯೋಗ್ಯನೆನಿಸಿಕೊಂಡೇನೋ ಎಂಬ ಭಯದಿಂದ ನನ್ನ ಮೈಯನ್ನು ಜಜ್ಜಿ ಸ್ವಾಧೀನ ಪಡಿಸಿಕೊಳ್ಳುತ್ತೇನೆ.


ಬಲವಿಲ್ಲದವರನ್ನು ಸಂಪಾದಿಸುವದಕ್ಕೆ ಅವರಿಗೆ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥಂಥವನಾಗಿದ್ದೇನೆ.


ಹೀಗೆ ಒಂದು ವೇಳೆ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಸಹ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.


ಮಾರ್ಥಳು - ಸತ್ತವರಿಗೆ ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು ಅಂದಳು.


ಅವರು ನಿನಗೆ ಮುಯ್ಯಿಗೆಮುಯ್ಯಿಮಾಡುವದಕ್ಕೆ ಏನೂ ಇಲ್ಲದವರಾಗಿದ್ದರೂ ನೀತಿವಂತರು ಜೀವಿತರಾಗಿ ಎದ್ದು ಬರುವಲ್ಲಿ ನಿನಗೆ ಮುಯ್ಯಿಗೆಮುಯ್ಯಾಗುವದರಿಂದ ನೀನು ಧನ್ಯನಾಗುವಿ ಅಂದನು.


ಆದರೆ ಯಾವನಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದೆ ಶಾಶ್ವತವಾಗಿ ಬದುಕಿರುವದಕ್ಕಾಗಿ


ಆ ರೇವು ಹಿಮಕಾಲವನ್ನು ಕಳೆಯುವದಕ್ಕೆ ಅನುಕೂಲವಲ್ಲದ್ದರಿಂದ ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೊಯಿನಿಕ್ಸ ಊರನ್ನು ಸೇರಿ ಅಲ್ಲೇ ಆ ಹಿಮಕಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ಆಲೋಚನೆ ಹೇಳಿದರು. ಫೊಯಿನಿಕ್ಸವು ಕ್ರೇತದ್ವೀಪದ ಒಂದು ರೇವು; ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ.


ಆದರೆ ಪ್ರತಿಯೊಬ್ಬನು ತನ್ನ ತನ್ನ ತರಗತಿಯಲ್ಲಿರುವನು. ಕ್ರಿಸ್ತನು ಪ್ರಥಮಫಲ; ತರುವಾಯ ಕ್ರಿಸ್ತನ ಪ್ರತ್ಯಕ್ಷತೆಯಲ್ಲಿ ಆತನವರು ಎದ್ದುಬರುವರು.


ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗೆ ಸಿದ್ಧವಾಗಿದೆ; ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು; ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು