Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:14 - ಕನ್ನಡ ಸತ್ಯವೇದವು J.V. (BSI)

14 ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಹೊಂದುವ ಗುರಿಯನ್ನು ತಲುಪಲೆಂದು ಓಡುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಮೇಲಣ ಬಹುಮಾನವನ್ನು ಪಡೆಯಲೆಂದು ದೇವರು ನನಗೆ ಕ್ರಿಸ್ತಯೇಸುವಿನ ಮುಖಾಂತರ ಕರೆ ನೀಡಿದ್ದಾರೆ. ಆ ಗುರಿಯನ್ನು ತಲುಪಲೆಂದೇ ನಾನು ಮುಂದೋಡುತ್ತಲಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರು ನಮ್ಮನ್ನು ಕ್ರಿಸ್ತನ ಮೂಲಕ ಮೇಲೋಕದ ಜೀವಿತಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹೀಗೆ ನಾನು ಕ್ರಿಸ್ತ ಯೇಸುವಿನಲ್ಲಿ ದೇವರ ಸ್ವರ್ಗೀಯ ಕರೆಯ ಬಹುಮಾನದ ಗುರಿಯೆಡೆಗೆ ಮುಂದೆ ಸಾಗುತ್ತಾ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಕ್ರಿಸ್ತ್ ಜೆಜುಕ್ಡೆ ದೆವಾಚ್ಯಾ ಮೊಟ್ಯಾ ಬಲವ್ನಿಚಿ ಭೊಮಾನ್ ಫಿಡೆ ಗಾವ್ತಾ ಮನುನ್ ಗುರಿ ಥವ್ನ್ ಘೆವ್ನ್ ಪಳುನ್ಗೆತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:14
20 ತಿಳಿವುಗಳ ಹೋಲಿಕೆ  

ರಂಗಸ್ಥಾನದಲ್ಲಿ ಓಡುವದಕ್ಕೆ ಗೊತ್ತಾದವರೆಲ್ಲರೂ ಓಡುತ್ತಾರಾದರೂ ಒಬ್ಬನು ಮಾತ್ರ ಬಿರುದನ್ನು ಹೊಂದುತ್ತಾನೆ ಎಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಿರುದನ್ನು ಪಡಕೊಳ್ಳಬೇಕೆಂತಲೇ ಓಡಿರಿ.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ತನ್ನ ರಾಜ್ಯಪ್ರಭಾವಗಳಲ್ಲಿ ಪಾಲುಗಾರರಾಗುವದಕ್ಕೆ ಕರೆಯುವ ದೇವರಿಗೆ ಯೋಗ್ಯರಾಗಿ ನೀವು ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೇ ತಿಳಿದದೆ.


ನಮ್ಮನ್ನು ತನ್ನ ಪ್ರಭಾವದಿಂದಲೂ ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯ ಶಕ್ತಿಯು ನಮಗೆ ಪರಿಜ್ಞಾನವನ್ನು ಕೊಟ್ಟದ್ದರಲ್ಲಿ ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವು ದೊರೆಯಿತೆಂದು ಬಲ್ಲೆವಷ್ಟೆ.


ಆದದರಿಂದ ದೇವಜನರಾದ ಸಹೋದರರೇ, ಪರಲೋಕಸ್ವಾಸ್ಥ್ಯಕ್ಕಾಗಿ ನನ್ನೊಂದಿಗೆ ಕರೆಯಲ್ಪಟ್ಟವರೇ, ನಾವು ಪ್ರತಿಜ್ಞೆಮಾಡಿ ಒಪ್ಪಿಕೊಂಡಿರುವ ದೇವಪ್ರೇಷಿತನೂ ಮಹಾಯಾಜಕನೂ ಆಗಿರುವ ಯೇಸುವನ್ನು ಲಕ್ಷ್ಯವಿಟ್ಟು ಯೋಚಿಸಿರಿ.


ಆದದರಿಂದ ನೀವು ಮನಸ್ಸಿನ ನಡುವನ್ನು ಕಟ್ಟಿಕೊಂಡು ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಭಾಗ್ಯದ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ಆದದರಿಂದ ನಿರ್ಜೀವಕರ್ಮಗಳ ಮೇಲಣ ನಂಬಿಕೆಯನ್ನು ಬಿಟ್ಟುಬಿಟ್ಟು ದೇವರಲ್ಲಿಯೇ ನಂಬಿಕೆಯಿಡಬೇಕಾದದ್ದು,


ಹೇಗಂದರೆ ಕ್ಷಣಮಾತ್ರವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕವಾದ ಪ್ರತಿಫಲವನ್ನು ಉಂಟುಮಾಡಿ ನಮಗೆ ನಿರಂತರವಾಗಿರುವ ಗೌರವವಾದ ಪ್ರಭಾವವನ್ನು ದೊರಕಿಸುತ್ತದೆ.


ಧರ್ಮಶಾಸ್ತ್ರವೂ ಪ್ರವಾದಿಗಳೂ ಯೋಹಾನನ ತನಕವೇ. ಈಚೆಗೆ ದೇವರ ರಾಜ್ಯವು ಸಾರಲ್ಪಡುತ್ತಾ ಇದೆ. ಅದರಲ್ಲಿ ಸಕಲರೂ ಬಲಾತ್ಕಾರವಾಗಿ ನುಗ್ಗುತ್ತಾರೆ.


ದೇವರು ವರಗಳನ್ನು ಅನುಗ್ರಹಿಸಿದ್ದಕ್ಕೂ ಜನರನ್ನು ಕರೆದದ್ದಕ್ಕೂ ಪಶ್ಚಾತ್ತಾಪಪಡುವವನಲ್ಲ.


ನಿಜವಾದ ಸುನ್ನತಿಯವರು ಯಾರಂದರೆ - ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವೇ.


ಕೆಲವರು ಅತಿ ವಿನಯದಲ್ಲಿಯೂ ದೇವದೂತರ ಪೂಜೆಯಲ್ಲಿಯೂ ಆಸಕ್ತರಾಗಿದ್ದಾರೆ,


ಆತನು ನಮ್ಮಲ್ಲಿ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವದಕ್ಕೆ ಕರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು