Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:18 - ಕನ್ನಡ ಸತ್ಯವೇದವು J.V. (BSI)

18 ಯಾಕಂದರೆ ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯಾಕೆಂದರೆ ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ. ಅವರ ವಿಷಯದಲ್ಲಿ ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಕ್ರಿಸ್ತಯೇಸುವಿನ ಶಿಲುಬೆಗೆ ವಿರೋಧವಾಗಿ ನಡೆಯುವವರು ಅನೇಕರಿದ್ದಾರೆ. ಇದನ್ನು ನಾನು ಹಲವಾರು ಸಾರಿ ತಿಳಿಸಿರುವಂತೆ ಈಗಲೂ ಅತೀವ ದುಃಖದಿಂದ ಹೇಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅನೇಕರು ಕ್ರಿಸ್ತನ ಶಿಲುಬೆಗೆ ವೈರಿಗಳೊ ಎಂಬಂತೆ ಜೀವಿಸುತ್ತಾರೆ. ಅವರ ಬಗ್ಗೆ ನಾನು ನಿಮಗೆ ಅನೇಕ ಸಲ ತಿಳಿಸಿದ್ದೇನೆ. ಈಗಲೂ ಕಣ್ಣೀರಿನಿಂದ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ಬಾಳುತ್ತಿದ್ದಾರೆ. ಅವರ ವಿಷಯದಲ್ಲಿ ನಾನು ನಿಮಗೆ ಹಲವಾರು ಸಾರಿ ತಿಳಿಸಿರುವಂತೆ ಈಗಲೂ ಕಣ್ಣೀರಿನಿಂದ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಕಶ್ಯಾಕ್ ಮಟ್ಲ್ಯಾರ್, ಲೈ ಲೊಕಾ ಕ್ರಿಸ್ತಾಚ್ಯಾ ಖುರ್ಸಾಕ್ ವಿರೊದ್ ಹೊವ್ನ್ ಚಲುಲ್ಲಾತ್, ತೆಂಚ್ಯಾ ವಿಶಯಾತ್ ತುಮ್ಕಾ ಮಿಯಾ ಲೈಂದಾ ಸಾಂಗ್ತಲೊ ಅತ್ತಾಬಿ ರಡುನ್ಗೆತ್; ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:18
30 ತಿಳಿವುಗಳ ಹೋಲಿಕೆ  

ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರದೆಂದು ಕರ್ತನಲ್ಲಿರುವವನಾಗಿ ನಿಮಗೆ ಖಂಡಿತವಾಗಿ ಹೇಳುತ್ತೇನೆ.


ಯೆಹೋವನು ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು ಈ ಜನರ ಮಾರ್ಗದಲ್ಲಿ ನಡೆಯಬಾರದೆಂದು ನನಗೆ ಉಪದೇಶಿಸುತ್ತಾ ಹೀಗಂದನು -


ಬಹಿರಾಚಾರಗಳಿಂದ ಮಾನಪಡೆಯಬೇಕೆಂದಿರುವವರು ಸುನ್ನತಿಮಾಡಿಸಿಕೊಳ್ಳಿರಿ ಎಂಬದಾಗಿ ನಿಮ್ಮನ್ನು ಬಲಾತ್ಕರಿಸುತ್ತಾರೆ. ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದೊಂದೇ ಅವರ ಉದ್ದೇಶ.


ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯುವದಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಕೇಫನಿಗೆ ಹೇಳಿದ್ದೇನಂದರೆ - ನೀನು ಯೆಹೂದ್ಯನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ - ನೀವು ಯೆಹೂದ್ಯರ ಪದ್ಧತಿಗಳನ್ನು ಅನುಸರಿಸಬೇಕೆಂದು ನೀನು ಬಲಾತ್ಕಾರ ಮಾಡುವದು ಹೇಗೆ?


ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮಲ್ಲಿ ಭೇದವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಅಪೇಕ್ಷಿಸುತ್ತಾ ಇದ್ದಾರೆ.


ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿವಿುತ್ತ ಗೋಳಾಡುವದು; ಯೆಹೋವನ ಮಂದೆಯು ಸೆರೆಯಾಗಿ ಹೋದದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವದು.


ಮುಖ್ಯವಾಗಿ ಬಂಡುತನವನ್ನು ಆಶಿಸಿ ಶರೀರಭಾವಾನುಸಾರ ನಡೆದು ಪ್ರಭುತ್ವ ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಫಾಪರರಾಗಿದ್ದು ಮಹಾಪದವಿಯವರನ್ನು ನಿರ್ಭಯವಾಗಿ ದೂಷಿಸುತ್ತಾರೆ.


ಧರ್ಮಪತ್ನಿಯನ್ನು ಸಂಪಾದಿಸಿಕೊಳ್ಳಲು ತಿಳಿಯಬೇಕು. ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡುಮಾಡಬಾರದು. ನಾವು ಮುಂಚೆ ತಿಳಿಸಿ ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಮುಯ್ಯಿಗೆ ಮುಯ್ಯಿ ತೀರಿಸುವವನಾಗಿದ್ದಾನೆ.


ಇವುಗಳ ವಿಷಯದಲ್ಲಿ - ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ಹಿಂದೆ ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.


ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ಕರ್ಮಮಾರ್ಗದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದಕ್ಕೆ ಕಾರಣವೇ ಇಲ್ಲ.


ಯಾವನಾದರೂ ಬಲವಿಲ್ಲದವನಾದರೆ ನಾನು ಅವನೊಂದಿಗೆ ಬಲವಿಲ್ಲದವನಾಗದೆ ಇರುವೆನೋ? ಯಾವನಾದರೂ ಪಾಪದಲ್ಲಿ ಸಿಕ್ಕಿಕೊಂಡರೆ ನಾನು ತಾಪಪಡುವದಿಲ್ಲವೋ?


ಆದರೆ ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವದಕ್ಕೆ ವೇಷ ಹಾಕಿಕೊಳ್ಳುವವರೂ ಆಗಿದ್ದಾರೆ.


ನಿಮಗೆ ದುಃಖವಾಗಬೇಕೆಂತಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳುಕೊಳ್ಳಬೇಕೆಂತಲೇ ನಾನು ಬಹಳ ಕಣ್ಣೀರು ಬಿಡುತ್ತಾ ಹೃದಯದ ಬಹುಸಂಕಟದಿಂದಲೂ ವ್ಯಾಕುಲದಿಂದಲೂ ನಿಮಗೆ ಬರೆದೆನು.


ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ, ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾವಿುಗಳು


ಶಿಲುಬೆಯ ವಿಷಯವಾದ ಮಾತು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುಮಾತಾಗಿದೆ, ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ದೇವರ ಶಕ್ತಿಯಾಗಿದೆ.


ಈ ಮಾತನ್ನು ಸುಳ್ಳಾಡದೆ ಕ್ರಿಸ್ತನ ಮುಂದೆ ಸತ್ಯವಾಗಿ ಹೇಳುತ್ತೇನೆ; ಪವಿತ್ರಾತ್ಮಾಧೀನವಾಗಿರುವ ನನ್ನ ಮನಸ್ಸೇ ಸಾಕ್ಷಿ.


ತರುವಾಯ ಆತನು ಸಮೀಪಕ್ಕೆ ಬಂದಾಗ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಅತ್ತು -


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕರಾಜನನ್ನು ಹೊಗಳಿ ಕೊಂಡಾಡಿ ಕೀರ್ತಿಸುತ್ತೇನೆ; ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.


ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆ ಹಾಕಿ ಅಕ್ರಮವಾಗಿ ನಡೆಯುತ್ತಾರೆಂದು ವರ್ತಮಾನ ಕೇಳಿದ್ದೇವೆ.


ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರ ಒಳ ಸಂಚುಗಳಿಂದ ಸಂಭವಿಸಿದ ಕಷ್ಟಗಳನ್ನು ಸಹಿಸುತ್ತಿದ್ದೆನು.


ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿವಿುತ್ತ ಹಗಲಿರುಳೂ ಅಳಬೇಕಲ್ಲಾ!


ನಿನ್ನ ಧರ್ಮಶಾಸ್ತ್ರವನ್ನು ಅನುಸರಿಸದವರ ನಿವಿುತ್ತ ನನಗೆ ಕಣ್ಣೀರು ಪ್ರವಾಹವಾಗಿ ಹರಿಯುತ್ತದೆ.


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿ ಹೊರತು ಹೆಚ್ಚಳಪಡುವದು ಬೇಡವೇ ಬೇಡ. ಆತನ ಮೂಲಕ ಲೋಕವು ಶಿಲುಬೆಗೆ ಹಾಕಿಸಿಕೊಂಡು ನನ್ನ ಪಾಲಿಗೆ ಸತ್ತಿತು, ನಾನು ಶಿಲುಬೆಗೆ ಹಾಕಿಸಿಕೊಂಡು ಲೋಕದ ಪಾಲಿಗೆ ಸತ್ತೆನು.


ಉಷ್ಟ್ರಪಕ್ಷಿ, ಉಲೂಕ, ಕಡಲ್ಹಕ್ಕಿ,


ಯಾಜಕನು ನೋಡುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು