Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:5 - ಕನ್ನಡ ಸತ್ಯವೇದವು J.V. (BSI)

5 ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್ ವಂಶದವನು, ಬೆನ್ಯಾಮೀನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನೇಮನಿಷ್ಠೆಗಳನ್ನು ನೋಡಿದರೆ ನಾನು ಫರಿಸಾಯನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು, ನಾನು ಇಸ್ರಾಯೇಲ್ ವಂಶದವನು, ಬೆನ್ಯಾಮೀನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು, ಧರ್ಮಶಾಸ್ತ್ರಗಳ ದೃಷ್ಟಿಯಿಂದ ನೋಡಿದರೆ ನಾನು ಫರಿಸಾಯನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹುಟ್ಟಿದ ಎಂಟನೆಯ ದಿನ ನನಗೆ ಸುನ್ನತಿಯಾಯಿತು; ಹುಟ್ಟಿನಿಂದ ನಾನು ಇಸ್ರಯೇಲನು, ಬೆನ್ಯಮೀನ ಕುಲದವನು; ಅಪ್ಪಟ ಹಿಬ್ರಿಯನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು. ನಾನು ಇಸ್ರೇಲ್ ವಂಶದವನು ಮತ್ತು ಬೆನ್ಯಾಮೀನನ ಕುಲದವನು. ನಾನು ಇಬ್ರಿಯನು ಮತ್ತು ನನ್ನ ತಂದೆತಾಯಿಗಳು ಸಹ ಇಬ್ರಿಯರು. ನಾನು ಮೋಶೆಯ ಧರ್ಮಶಾಸ್ತ್ರವನ್ನು ಮುಖ್ಯವಾದದ್ದೆಂದು ಪರಿಗಣಿಸಿ ಫರಿಸಾಯನಾದೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು, ನಾನು ಇಸ್ರಾಯೇಲ್ ವಂಶದವನು; ಬೆನ್ಯಾಮೀನನ ಕುಲದವನು; ಹೀಬ್ರಿಯರಿಂದ ಹುಟ್ಟಿದ ಹೀಬ್ರಿಯನು; ಮೋಶೆಯ ನಿಯಮದ ಅನುಸಾರವಾಗಿ ನಾನು ಫರಿಸಾಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಮಿಯಾ ಉಪಾಜಲ್ಲ್ಯಾ ಆಟುಚ್ ದಿಸಾತ್ ಮಾಕಾ ಸುನ್ನತಿ ಕರ್‍ಲ್ಯಾನಿ , ಮಿಯಾ ಇಸ್ರಾಯೆಲ್ ಘರಾನಾಚೊ, ಭೆನ್ಯಾಮಿನಾಚ್ಯಾ ಜಾತಿಚೊ, ಇಬ್ರಿಯಾಂಚ್ಯಾಕ್ನಾ ಉಪಾಜಲ್ಲೊ ಇಬ್ರಿಯಾ, ಅನಿ ಖಾಯ್ದ್ಯಾಂಚ್ಯಾ ಸಾರ್ಕೆ ಬಗಟ್ಲ್ಯಾರ್ ಮಿಯಾ ಫಾರಿಜೆವಾಂಚೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:5
16 ತಿಳಿವುಗಳ ಹೋಲಿಕೆ  

ಇದನ್ನು ಬುದ್ಧಿಹೀನತೆಯಿಂದ ಹೇಳುತ್ತೇನೆ. ಅವರು ಇಬ್ರಿಯರೋ ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೋ ನಾನೂ ಇಸ್ರಾಯೇಲ್ಯನು; ಅವರು ಅಬ್ರಹಾಮನ ವಂಶದವರೋ ನಾನೂ ಅದೇ ವಂಶದವನು;


ಹಾಗಾದರೆ ದೇವರು ತನ್ನ ಪ್ರಜೆಯನ್ನು ಬೇಡವೆಂದು ತಳ್ಳಿಬಿಟ್ಟದ್ದುಂಟೇ ಎಂದು ಕೇಳುತ್ತೇನೆ. ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.


ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ ಒಂದು ಪಾಲು ಫರಿಸಾಯರೂ ಇರುವದನ್ನು ಪೌಲನು ತಿಳಿದು - ಸಹೋದರರೇ, ನಾನು ಫರಿಸಾಯನು, ಫರಿಸಾಯರ ಮಗನು; ಸತ್ತವರೆದ್ದು ಬರುವರು ಎಂಬ ನಿರೀಕ್ಷೆಯ ವಿಷಯವಾಗಿ ನನ್ನನ್ನು ವಿಚಾರಣೆಮಾಡುತ್ತಾರೆ ಎಂದು ಹಿರೀಸಭೆಯಲ್ಲಿ ಕೂಗಿದನು.


ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪಿತೃಗಳ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಿತನಾದೆನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ ನಾನು ಅಭಿಮಾನಿಯಾಗಿದ್ದೆನು.


ಎಲ್ಲಾ ತಲಾಂತರಗಳಲ್ಲಿ ನಿಮ್ಮಲ್ಲಿರುವ ಪ್ರತಿಯೊಬ್ಬ ಗಂಡಸೂ, ಮನೆಯಲ್ಲಿ ಹುಟ್ಟಿದವನಾದರೂ ನಿನ್ನ ಸಂತತಿಯಲ್ಲಿ ಹುಟ್ಟದೆ ಅನ್ಯರಿಂದ ಕ್ರಯಕ್ಕೆ ತೆಗೆದುಕೊಂಡವನಾದರೂ ಎಂಟು ದಿನಗಳ ವಯಸ್ಸುಳ್ಳವನಾದಾಗ ಅವನಿಗೆ ಸುನ್ನತಿ ಮಾಡಿಸಬೇಕು.


ಎಂಟನೆಯ ದಿನದಲ್ಲಿ ಅವರು ಆ ಮಗುವಿಗೆ ಸುನ್ನತಿಮಾಡುವದಕ್ಕಾಗಿ ಬಂದು ಅದಕ್ಕೆ ಜಕರೀಯನೆಂದು ತಂದೆಯ ಹೆಸರನ್ನು ಇಡಬೇಕೆಂದಿದ್ದರು.


ಆ ದಿವಸಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್‍ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ - ದಿನದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವದಿಲ್ಲವೆಂದು ಗುಣುಗುಟ್ಟಿದರು.


ಆ ಕೂಸಿಗೆ ಸುನ್ನತಿಮಾಡುವದಕ್ಕೆ ಕಳೆಯಬೇಕಾದ ಎಂಟು ದಿವಸಗಳು ತುಂಬಿದ ಮೇಲೆ ಅದಕ್ಕೆ ಯೇಸುವೆಂದು ಹೆಸರಿಟ್ಟರು. ಅದು ಗರ್ಭದಲ್ಲಿ ಮೂಡುವದಕ್ಕಿಂತ ಮೊದಲು ದೇವದೂತನು ಅದೇ ಹೆಸರನ್ನು ಸೂಚಿಸಿದ್ದನು.


ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದೇವರಾದ ಯೆಹೋವನ ಭಕ್ತನು ಎಂದು ಹೇಳಿದನು.


ಫಿಲಿಷ್ಟಿಯರು ಇದನ್ನು ಕೇಳಿ - ಇಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೇನು ಕಾರಣವೆಂದು ವಿಚಾರಿಸುವಲ್ಲಿ ಯೆಹೋವನ ಮಂಜೂಷವು ಪಾಳೆಯದಲ್ಲಿ ಬಂದದ್ದೇ ಕಾರಣವೆಂದು ಗೊತ್ತಾಯಿತು.


ನಾನು ಇಬ್ರಿಯದೇಶಸ್ಥನು; ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನೇನೂ ತಪ್ಪಿಲ್ಲದವನಾಗಿ ಸೆರೆಯಲ್ಲಿ ಬಿದ್ದೆನು ಅಂದನು.


ತಪ್ಪಿಸಿಕೊಂಡವನೊಬ್ಬನು ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಇದನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನು ಎಷ್ಕೋಲ ಆನೇರರಿಗೆ ಸಹೋದರನು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.


ಅಲ್ಲಿ ನಮ್ಮ ಸಂಗಡ ಇಬ್ರಿಯನಾದ ಒಬ್ಬ ಪ್ರಾಯಸ್ಥನಿದ್ದನು; ಅವನು ದಳವಾಯಿಯ ದಾಸನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದಾಗ ಅವನು ಅವುಗಳ ಅರ್ಥವನ್ನು ನಮಗೆ ಹೇಳಿದನು; ನಮ್ಮ ನಮ್ಮ ಕನಸಿನ ಪ್ರಕಾರ ಅರ್ಥವನ್ನು ಹೇಳಿದನು.


ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು