1 ನನ್ನ ಸಹೋದರ ಸಹೋದರಿಯರೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆ ಮತ್ತು ನಿಮ್ಮನ್ನು ನೋಡಬಯಸುತ್ತೇನೆ. ನೀವು ನನಗೆ ಆನಂದವನ್ನು ಉಂಟುಮಾಡಿ, ನಿಮ್ಮ ವಿಷಯದಲ್ಲಿ ನಾನು ಹೆಮ್ಮಪಡುವಂತೆ ಮಾಡಿದ್ದೀರಿ. ನಾನು ನಿಮಗೆ ಹೇಳಿದಂತೆ ಪ್ರಭುವನ್ನು ಅನುಸರಿಸಿರಿ.
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.
ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು ಲೋಕದೊಳಗೆ ಹೊಳೆಯುವ ಜೋತಿರ್ಮಂಡಲಗಳಂತೆ ಕಾಣಿಸುವವರಾಗಿದ್ದೀರಲ್ಲಾ. ನೀವು ಹೀಗೆ ನಡೆದರೆ ನಾನು ಕೆಲಸ ಸಾಧಿಸಿದ್ದೂ ವ್ಯರ್ಥವಲ್ಲ, ನಾನು ಪ್ರಯಾಸಪಟ್ಟದ್ದೂ ವ್ಯರ್ಥವಲ್ಲ ಎಂಬ ಉತ್ಸಾಹವು ಕ್ರಿಸ್ತನ ದಿನದಲ್ಲಿ ನನಗೆ ಉಂಟಾಗುವದು.
ಆದದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವದಿಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರಿ.
ನಾವು ನಿಮಗೆ ಉಲ್ಲಾಸಕಾರಣವಾಗಿದ್ದೇವೆಂಬದನ್ನು ನೀವು ಸ್ವಲ್ಪ ಮಟ್ಟಿಗೆ ಒಪ್ಪಿಕೊಂಡಂತೆಯೇ ಕಡೇ ತನಕ ಒಪ್ಪಿಕೊಳ್ಳುವಿರೆಂದು ನಿರೀಕ್ಷಿಸುತ್ತೇನೆ. ಹಾಗೆಯೇ ನೀವೂ ನಮ್ಮ ಕರ್ತನಾದ ಯೇಸುವಿನ ಪ್ರತ್ಯಕ್ಷತೆಯಲ್ಲಿ ನಮಗೆ ಉಲ್ಲಾಸಕಾರಣವಾಗುವಿರಿ ಎಂದು ನಿರೀಕ್ಷಿಸುತ್ತೇನೆ.
ಅವನು ಒಳ್ಳೆಯವನೂ ಪವಿತ್ರಾತ್ಮಭರಿತನೂ ನಂಬಿಕೆಯಿಂದ ತುಂಬಿದವನೂ ಆಗಿದ್ದನು. ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು - ನೀವು ದೃಢಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರ್ರಿ ಎಂದು ಅವರೆಲ್ಲರಿಗೆ ಬುದ್ಧಿ ಹೇಳಿದನು.
ಕ್ರಿಸ್ತ ಯೇಸುವಿನ ದಾಸನಾಗಿರುವ ನಿಮ್ಮ ಊರಿನ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ; ಇವನು ಪ್ರಾರ್ಥನೆ ಮಾಡುವಾಗೆಲ್ಲಾ ನಿಮಗೋಸ್ಕರ ಹೋರಾಡಿ ನೀವು ಪ್ರವೀಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ವಿಜ್ಞಾಪನೆ ಮಾಡುತ್ತಾನೆ.
ನಮ್ಮ ಕರ್ತನಾದ ಯೇಸು ನಿಮ್ಮ ಹೃದಯಗಳನ್ನು ದೃಢಪಡಿಸಿ ತನ್ನ ಎಲ್ಲಾ ಪರಿಶುದ್ಧ ಪರಿವಾರ ಸಮೇತ ಪ್ರತ್ಯಕ್ಷನಾದಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.