Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:11 - ಕನ್ನಡ ಸತ್ಯವೇದವು J.V. (BSI)

11 ಕೊರತೆಯಲ್ಲಿದ್ದೇನೆಂದು ಸೂಚಿಸುವದಕ್ಕೆ ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಾನು ಯಾವುದೋ ಕೊರತೆಯಲ್ಲಿರುವೆನೆಂದು ಸೂಚಿಸಲು ಇದನ್ನು ಹೇಳುತ್ತಿಲ್ಲ. ನಾನು ಯಾವ ಸ್ಥಿತಿಯಲ್ಲಿದ್ದರೂ ತೃಪ್ತಿಯಿಂದಿರಲು ಕಲಿತುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ಈ ಮಾತುಗಳನ್ನು ಹೇಳುತ್ತಿರುವುದು ನನಗಿರುವ ಕೊರತೆಯ ದೆಸೆಯಿಂದಲ್ಲ. ನನ್ನಲ್ಲಿರುವಂಥವುಗಳಲ್ಲಿ ಮತ್ತು ನನಗೆ ಸಂಭವಿಸುವ ಪ್ರತಿಯೊಂದರಲ್ಲಿ ತೃಪ್ತನಾಗಿರಲು ನಾನು ಕಲಿತುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನಗೆ ಕೊರತೆಯಿದೆ ಎಂಬುದಕ್ಕಾಗಿ ನಾನು ಇದನ್ನು ಹೇಳುತ್ತಿಲ್ಲ. ಯಾವುದೇ ಪರಿಸ್ಥಿತಿಯಲ್ಲಿ ಸಂತೃಪ್ತನಾಗಿರುವುದನ್ನು ನಾನು ಕಲಿತುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತರಾಸ್ ಹಾಯ್ ಮನುನ್ ಮಿಯಾ ಹೆ ಸಾಂಗುಕ್ನಾ ಮಿಯಾ ತರ್ ಹೊತ್ತ್ಯಾ ಪರಿಸ್ಥಿತ್ನಾ ಖುಶಿ ಹೊವ್ನ್ ರ್‍ಹಾತಲೆ ಶಿಕುನ್ಗೆಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:11
13 ತಿಳಿವುಗಳ ಹೋಲಿಕೆ  

ಇಷ್ಟೇ ಅಲ್ಲದೇ, ನನ್ನ ಕರ್ತನಾದ ಕ್ರಿಸ್ತ ಯೇಸುವನ್ನರಿಯುವದೇ ಅತಿಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿವಿುತ್ತ ನಾನು ಎಲ್ಲವನ್ನೂ ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.


ದೇವರು ಸಕಲವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು.


ದುಃಖಪಡುವವರಾಗಿದ್ದರೂ ಯಾವಾಗಲೂ ಸಂತೋಷಪಡುವವರೂ, ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯವನ್ನುಂಟುಮಾಡುವವರೂ, ಏನೂ ಇಲ್ಲದವರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದು ತಾನು ಬಡತನದಲ್ಲಿ ಸೇರುವದರಿಂದ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಬಡವನಾದನು.


ಬೇಡಿಗಳನ್ನು ಹಾಕಿಸಿಕೊಂಡವರ ಕಷ್ಟವನ್ನು ನೋಡಿ ಅವರ ಸಂಗಡ ನೀವು ದುಃಖ ಪಟ್ಟದ್ದಲ್ಲದೆ ನಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟಿರಿ.


ಪ್ರಯಾಸ ಪರಿಶ್ರಮಗಳಿಂದ ಕೆಲಸನಡಿಸಿ ಅನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನು ಪಟ್ಟು ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.


ಸಿಪಾಯಿಗಳು ಸಹ ಬಂದು - ನಾವು ಏನು ಮಾಡಬೇಕು ಎಂದು ಅವನನ್ನು ಕೇಳಿದಾಗ ಅವನು ಅವರಿಗೆ - ಯಾರನ್ನಾದರೂ ಬೆದರಿಸಬೇಡಿರಿ; ಯಾರ ಮೇಲಾದರೂ ಸುಳ್ಳುದೂರು ತಂದು ದುಡ್ಡು ಕಸಕೊಳ್ಳಬೇಡಿರಿ; ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ ಎಂದು ಹೇಳಿದನು.


ಯಾಕೋಬನು ಅಲ್ಲಿ - ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ತಿನ್ನುವದಕ್ಕೆ ಆಹಾರವನ್ನೂ ಉಡುವದಕ್ಕೆ ವಸ್ತ್ರವನ್ನೂ ಕೊಟ್ಟು


ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಒಪ್ಪಿಕೊಂಡನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು