ಫಿಲಿಪ್ಪಿಯವರಿಗೆ 4:17 - ಕನ್ನಡ ಸತ್ಯವೇದವು J.V. (BSI)17 ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವದಿಲ್ಲ; ನಿಮ್ಮ ಆತ್ಮಕ್ಕೆ ಆದಾಯವಾಗುವಂಥ ಪ್ರೀತಿಫಲವನ್ನೇ ಅಪೇಕ್ಷಿಸುತ್ತೇನೆ. ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಯಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಿಮ್ಮಿಂದ ಸಹಾಯ ಪಡೆಯಬೇಕೆಂಬುದು ನನ್ನ ಉದ್ದೇಶವಲ್ಲ. ಆದರೆ ಈ ಸಹಾಯದಿಂದ ನಿಮಗೆ ಮುಂದೆ ದೊರಕುವ ಪ್ರತಿಫಲವು ಸಮೃದ್ಧಿಯಾಗಲೆಂದೇ ನನ್ನ ಇಚ್ಛೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಿಜವಾಗಿಯೂ, ನಿಮ್ಮಿಂದ ಕೊಡುಗೆಗಳನ್ನು ಪಡೆದುಕೊಳ್ಳಬೇಕೆಂಬುದು ನನ್ನ ಅಪೇಕ್ಷೆಯಲ್ಲ. ಆದರೆ ಕೊಡುವುದರ ಮೂಲಕ ಮುಂದೆ ಹೇರಳವಾಗಿ ದೊರೆಯುವ ಆಶೀರ್ವಾದಗಳನ್ನು ನೀವು ಹೊಂದಿಕೊಳ್ಳಬೇಕೆಂಬುದೇ ನನ್ನ ಅಪೇಕ್ಷೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಾನು ನಿಮ್ಮಿಂದ ದಾನವನ್ನು ನಿರೀಕ್ಷಿಸುವುದಿಲ್ಲ. ಆದರೆ ನಿಮ್ಮ ಲೆಕ್ಕಕ್ಕೆ ಲಾಭ ಹೆಚ್ಚಿಸುವುದನ್ನೇ ನೋಡುತ್ತಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಖರೆಚ್ಬಿ ತುಮ್ಚ್ಯಾಕ್ನಾ ದಾನ್ ಕರ್ವುನ್ ಘೆವ್ಚೆ ಮನ್ತಲಿ ಮಾಜಿ ಆಶ್ಯಾ ನ್ಹಯ್ ಖರೆ ಅಶೆ ತುಮ್ಚ್ಯಾ ಖಾತ್ಯಾಕ್ ಸಗ್ಳ್ಯಾ ಥರಾಚೆ ಫಳ್ ಗಾವ್ಚೆ ಮನುನ್ ಮಿಯ್ಯಾ ಆಶ್ಯಾ ಕರ್‍ತಾ. ಅಧ್ಯಾಯವನ್ನು ನೋಡಿ |