Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:2 - ಕನ್ನಡ ಸತ್ಯವೇದವು J.V. (BSI)

2 ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರ್ರಿಯೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಪ್ರಬೋಧಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಿ ಎಂದು ಯುವೊದ್ಯಳನ್ನೂ ಹಾಗೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಯುವೋದ್ಯಳು ಮತ್ತು ಸಂತುಕೆ ಇವರಲ್ಲಿ ನನ್ನದೊಂದು ಬಿನ್ನಹ: ನಿಮ್ಮ ಭಿನ್ನಾಭಿಪ್ರಾಯಗಳನ್ನು ತೊರೆದು ಪ್ರಭುವಿನಲ್ಲಿ ಒಂದಾಗಿ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪ್ರಭುವಿನಲ್ಲಿ ಒಂದೇ ಮನಸ್ಸನ್ನು ಹೊಂದಿರಬೇಕೆಂದು ನಾನು ಯವೋದ್ಯಳನ್ನೂ ಸಂತುಕೆಯನ್ನೂ ಕೇಳಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕರ್ತ ದೇವರಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಧನಿಯಾಕ್ಡೆ ಎಕುಚ್ ಮನಾಚೆ ಹೊವ್ನ್ ರ್‍ಹಾವ್ಚೆ ಮನುನ್ ಯುವೊದ್ಯಕ್, ಅನಿ ಸಂತುಕೆಕ್ ಮಾಗುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:2
12 ತಿಳಿವುಗಳ ಹೋಲಿಕೆ  

ಎಲ್ಲರ ಸಂಗಡ ಸಮಾಧಾನದಿಂದಿರುವದಕ್ಕೂ ಪರಿಶುದ್ಧತೆಯನ್ನು ಹೊಂದುವದಕ್ಕೂ ಪ್ರಯತ್ನಮಾಡಿರಿ;


ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಉಪ್ಪು ಒಳ್ಳೆಯ ಪದಾರ್ಥವೇ; ಉಪ್ಪು ಸಪ್ಪೆಯಾದರೆ ಅದನ್ನು ಇನ್ಯಾತರಿಂದ ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ.


ನಿಮಗೆ ಬುದ್ಧಿ ಹೇಳುತ್ತಾರೋ ಅವರನ್ನು ಲಕ್ಷಿಸಿ ಅವರ ಕೆಲಸದ ನಿವಿುತ್ತ ಅವರನ್ನು ಪ್ರೀತಿಯಿಂದ ಬಹಳವಾಗಿ ಸನ್ಮಾನಮಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. ನಿಮ್ಮ ನಿಮ್ಮೊಳಗೆ ಸಮಾಧಾನವಾಗಿರಿ.


ಆಗ ತನ್ನ ಅಣ್ಣತಮ್ಮಂದಿರಿಗೆ - ನೀವು ದಾರಿಯಲ್ಲಿ ಜಗಳಮಾಡಬೇಡಿರಿ ಎಂದು ಬುದ್ಧಿ ಹೇಳಿ ಅವರಿಗೆ ಹೋಗುವದಕ್ಕೆ ಅಪ್ಪಣೆ ಕೊಟ್ಟನು; ಅವರು ಹೊರಟುಹೋದರು.


ಆದರೆ ನಾವು ಯಾವ ಸೂತ್ರವನ್ನನುಸರಿಸಿ ಇಲ್ಲಿಯವರೆಗೆ ಬಂದೆವೋ ಅದನ್ನೇ ಅನುಸರಿಸಿ ನಡೆಯೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು