ಫಿಲಿಪ್ಪಿಯವರಿಗೆ 4:3 - ಕನ್ನಡ ಸತ್ಯವೇದವು J.V. (BSI)3 ಸತ್ಯ ಸಯುಜನೇ, ಅವರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನನ್ನ ನಿಜವಾದ ಜೊತೆ ಸೇವಕನೇ, ಆ ಸ್ತ್ರೀಯರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಜೊತೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನನ್ನ ಜೊತೆ ಸೇವಕನಾದ ನೀನು ಈ ಮಹಿಳೆಯರಿಗೆ ನೆರವಾಗಬೇಕು. ಇವರು ಸಹ ಕ್ಲೇಮಂತನು ಮತ್ತು ಇತರ ಸಹಸೇವಕರೊಡನೆ ನನ್ನೊಂದಿಗೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸಿರುತ್ತಾರೆ. ಇವರೆಲ್ಲರ ಹೆಸರುಗಳು ನಿತ್ಯಜೀವಬಾಧ್ಯರ ಪಟ್ಟಿಯಲ್ಲಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಈ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಈ ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಈ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ ಬರೆಯಲ್ಪಟ್ಟಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಜೀವಗ್ರಂಥದಲ್ಲಿ ಹೆಸರು ಬರೆದಿರುವ ಕ್ಲೇಮೆನ್ಸ್ ಮುಂತಾದ ನನ್ನ ಜೊತೆ ಕೆಲಸದವರೊಡನೆ ನನ್ನೊಂದಿಗೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟ ಆ ಸ್ತ್ರೀಯರಿಗೆ ನೀನೂ ಸಹಾಯಕನಾಗಿರಬೇಕೆಂದು ನಿಜ ಜೊತೆಗಾರನೇ, ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಖರೆ ವಾಂಗ್ಡಿಯಾನೊ, ತಿಯಾ ತ್ಯಾ ಬಾಯ್ಕಾಮಾನ್ಸಾಕ್ನಿ ಮಜ್ಜತ್‍ಕಾರಿ ಹೊವ್ನ್ ರ್‍ಹಾವ್ಚೆ ಮನುನ್ ತುಜ್ಯಾಕ್ಡೆ ಮಾಗ್ತಾ, ತೆನಿ ಕ್ಲೆಮನ್ಸ್, ಅನಿ ಹುರಲ್ಲ್ಯಾ ಮಾಜ್ಯಾ ವಾಂಗ್ಡಿ ಕಾಮ್ ಕರ್‍ತಲೆ ಅನಿ ಮಾಜ್ಯಾ ವಾಂಗ್ಡಾ ಬರಿ ಖಬರ್ ಸಾಂಗುಕ್ ಕಟ್ಪಟ್ ಕರಲ್ಯಾಂಚಿ ನಾವಾ ಜಿವಾಚ್ಯಾ ಪುಸ್ತಕಾತ್ ಲಿವಲೆ ಹಾಯ್. ಅಧ್ಯಾಯವನ್ನು ನೋಡಿ |
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.