Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:4 - ಕನ್ನಡ ಸತ್ಯವೇದವು J.V. (BSI)

4 ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ತಿರಿಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯಾವಾಗಲೂ ಪ್ರಭುವಿನಲ್ಲಿ ಆನಂದಿಸಿರಿ; ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯಾವಾಗಲೂ ಕರ್ತ ದೇವರಲ್ಲಿ ಆನಂದಿಸಿರಿ, ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಸಗ್ಳ್ಯಾ ಯೆಳಾರ್ಬಿ ಧನಿಯಾಕ್ಡೆ ಖುಶಿನ್ ರ್‍ಹಾವಾ, ಖುಶಿ ಹೊವಾ ಮನುನ್ ಮಿಯಾ ಅನಿ ಪರ್ತುನ್ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:4
18 ತಿಳಿವುಗಳ ಹೋಲಿಕೆ  

ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರ್ರಿ. ಉಪದ್ರವದಲ್ಲಿ ಸೈರಣೆಯುಳ್ಳವರಾಗಿರ್ರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.


ಕಡೇ ಮಾತೇನಂದರೆ ನನ್ನ ಸಹೋದರರೇ, ಕರ್ತನಲ್ಲಿ ಸಂತೋಷಪಡಿರಿ. ಮೊದಲು ತಿಳಿಸಿದ ಮಾತುಗಳನ್ನು ತಿರಿಗಿ ನಿಮಗೆ ಬರೆಯುವದರಲ್ಲಿ ನನಗೇನೂ ಬೇಸರವಿಲ್ಲ; ನಿಮ್ಮನ್ನಾದರೋ ಅದು ದೃಢಮಾಡುವದು.


ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಹೀಗೆಯೇ ಹಿಂಸೆಪಡಿಸಿದರಲ್ಲಾ.


ಆದರೆ ನೀವು ಎಷ್ಟರ ಮಟ್ಟಿಗೂ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷವುಳ್ಳವರಾಗಿರ್ರಿ; ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ.


ಪ್ರಾಣವಿರುವವರೆಗೂ ಯೆಹೋವನನ್ನು ಸ್ತುತಿಸುವೆನು; ಜೀವಮಾನವೆಲ್ಲಾ ನನ್ನ ದೇವರನ್ನು ಕೊಂಡಾಡುವೆನು.


ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡುವವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.


ಅಪೊಸ್ತಲರು ತಾವು ಆ ಹೆಸರಿನ ನಿವಿುತ್ತವಾಗಿ ಅವಮಾನ ಪಡುವದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಿಸುತ್ತಾ


ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು ನಾವೇ ಆಗಲಿ ಪರಲೋಕದಿಂದ ಬಂದ ದೇವದೂತನೇ ಆಗಲಿ ನಿಮಗೆ ಸಾರಿದರೆ ಶಾಪಗ್ರಸ್ತನಾಗಲಿ.


ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸ ಧ್ವನಿಮಾಡಿರಿ; ಯಥಾರ್ಥಚಿತ್ತರು ಆತನನ್ನು ಸ್ತುತಿಸುವದು ಯುಕ್ತವಾಗಿದೆ.


ನಾನು ಯೆಹೋವನಲ್ಲಿ ಉಲ್ಲಾಸಿಸುವೆನು, ನನ್ನ ರಕ್ಷಕನಾದ ದೇವರಲ್ಲಿ ಆನಂದಿಸುವೆನು.


ದುಃಖಪಡುವವರಾಗಿದ್ದರೂ ಯಾವಾಗಲೂ ಸಂತೋಷಪಡುವವರೂ, ಬಡವರಾಗಿದ್ದರೂ ಅನೇಕರಿಗೆ ಐಶ್ವರ್ಯವನ್ನುಂಟುಮಾಡುವವರೂ, ಏನೂ ಇಲ್ಲದವರಾಗಿದ್ದರೂ ಎಲ್ಲಾ ಇದ್ದವರೂ ಆಗಿದ್ದೇವೆ.


ಹಾಗೆಯೇ ನೀವೂ ಸಂತೋಷಿಸಿರಿ, ನನ್ನೊಂದಿಗೆ ಸಂತೋಷಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು