Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:6 - ಕನ್ನಡ ಸತ್ಯವೇದವು J.V. (BSI)

6 ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯಾವುದರ ಬಗ್ಗೆಯೂ ಚಿಂತಿಸಬೇಡಿ. ಆದರೆ ಪ್ರಾರ್ಥನೆ ಮಾಡುತ್ತಾ ನಿಮ್ಮ ಅಗತ್ಯತೆಗಳಿಗೆಲ್ಲಾ ದೇವರಲ್ಲಿ ವಿಜ್ಞಾಪಿಸಿರಿ. ನೀವು ಪ್ರಾರ್ಥನೆ ಮಾಡುವಾಗಲೆಲ್ಲಾ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಕಸ್ಲ್ಯಾ ವಿಶಯಾತ್ಬಿ ಚಿಂತಿನಸ್ತಾನಾ ಸಗ್ಳ್ಯಾ ವಿಶಯಾತ್ನಿ ದೆವಾಚ್ಯಾ ಇದ್ರಾಕ್ ಧನ್ಯವಾದ್, ಅನಿ ಮಾಗ್ನಿಯಾ ಕರುನ್ಗೆತ್ ತುಮ್ಕಾ ಪಾಜೆ ಹೊಲ್ಲೆ ಸಗ್ಳ್ಯೆ ಸಾಂಗುನ್ ಘೆವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:6
45 ತಿಳಿವುಗಳ ಹೋಲಿಕೆ  

ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.


ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.


ಆದದರಿಂದ ನೀವು ಅವರ ಹಾಗೆ ಆಗಬೇಡಿರಿ. ನೀವು ನಿಮ್ಮ ತಂದೆಯನ್ನು ಬೇಡಿಕೊಳ್ಳುವದಕ್ಕಿಂತ ಮುಂಚೆಯೇ ನಿಮಗೆ ಏನೇನು ಅಗತ್ಯವೆಂಬದು ಆತನಿಗೆ ತಿಳಿದದೆ.


ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ನಿನ್ನ ಕಾರ್ಯಭಾರವನ್ನು ಯೆಹೋವನಿಗೆ ವಹಿಸಿದರೆ ನಿನ್ನ ಉದ್ದೇಶಗಳು ಸಫಲವಾಗುವವು.


ಜನರೇ, ಯಾವಾಗಲೂ ಆತನನ್ನೇ ನಂಬಿ ನಿಮ್ಮ ಹೃದಯವನ್ನು ಆತನ ಮುಂದೆ ಬಿಚ್ಚಿರಿ; ದೇವರು ನಮ್ಮ ಆಶ್ರಯವು. ಸೆಲಾ.


ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ.


ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.


ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.


ಇದಲ್ಲದೆ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟಮಾಡಬೇಕು? ದೇಹರಕ್ಷಣೆಗೆ ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬದಾಗಿ ನಿಮಗೆ ಹೇಳುತ್ತೇನೆ.


ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರ ಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.


ಕ್ರಿಸ್ತನಿಂದಾದ ಸಮಾಧಾನವು ನಿಮ್ಮ ಹೃದಯಗಳಲ್ಲಿ ಯಜಮಾನನಂತಿದ್ದು ತೀರ್ಪುಹೇಳಲಿ; ನೀವು ಒಂದೇ ದೇಹಕ್ಕೆ ಸೇರಿದವರಾದದರಿಂದ ಸಮಾಧಾನದಿಂದಿರುವದಕ್ಕಾಗಿ ಕರೆಯಲ್ಪಟ್ಟಿರಿ. ಇದಲ್ಲದೆ ಕೃತಜ್ಞತೆಯುಳ್ಳವರಾಗಿರ್ರಿ.


ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು


ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಕ್ರಿಸ್ತನಿಗೆ ಭಯಪಡುವವರಾಗಿದ್ದು


ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು. ಆತನು ಹೇಗೂ ನನ್ನ ಮೊರೆಯನ್ನು ಕೇಳಿ


ಸ್ವಾವಿುಯು ಆಕೆಗೆ - ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯವಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.


ದೇವರಾದುಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡುವಲ್ಲಿ ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯ ತೀರಿಸುವನೆಂದು ನಿಮಗೆ ಹೇಳುತ್ತೇನೆ.


ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಹೇಗೆ ಮಾತಾಡಬೇಕು, ಏನು ಹೇಳಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಗಳಿಗೆಯಲ್ಲಿ ನಿಮಗೆ ಸೂಚನೆಯಾಗುವದು.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ; ಶಿಷ್ಟರ ಬಿನ್ನಪ ಆತನಿಗೆ ಒಪ್ಪಿತ.


ಏನು ಊಟಮಾಡಬೇಕು? ಏನು ಕುಡಿಯಬೇಕು ಎಂದು ತವಕಪಡಬೇಡಿರಿ ಮತ್ತು ಅನುಮಾನ ಪಡಬೇಡಿರಿ.


ಅದಕ್ಕೆ ಹನ್ನಳು - ಸ್ವಾಮೀ, ಹಾಗಲ್ಲ; ನಾನು ಬಹುದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ಹೊಯ್ದಿದ್ದೇನೆ.


ಆದರೆ ನೀವು ಚಿಂತೆಯಿಲ್ಲದವರಾಗಿರಬೇಕೆಂಬದು ನನ್ನ ಇಷ್ಟ. ಮದುವೆಯಿಲ್ಲದವನು ತಾನು ಕರ್ತನನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಜಿತೇಂದ್ರಿಯರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರ್ರಿ.


ಒಬ್ಬನು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ ಐಶ್ವರ್ಯದಿಂದುಂಟಾಗುವ ಮೋಸವೂ ಆ ವಾಕ್ಯವನ್ನು ಅಡಗಿಸಿಬಿಡುವದರಿಂದ, ಫಲವನ್ನು ಕೊಡದೆ ಇರುತ್ತಾನೆ; ಇವನೇ ಮುಳ್ಳುಗಿಡಗಳಲ್ಲಿ ಬೀಜ ಬಿದ್ದ ನೆಲವಾಗಿರುವವನು.


ಇದನ್ನು ಕೇಳಿ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರು ರಾಜನಿಗೆ - ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.


ಈ ಕಾರಣದಿಂದ ಅರಸನಾದ ಹಿಜ್ಕೀಯನೂ ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯೂ ಪರಲೋಕಕ್ಕೆ ಮೊರೆಯಿಟ್ಟು ಪ್ರಾರ್ಥಿಸಲು


ಅನಂತರ ಸಮುವೇಲನು ವಿುಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ - ಯೆಹೋವನು ಇಲ್ಲಿಯವರೆಗೆ ನಮಗೆ ಸಹಾಯಮಾಡಿದನೆಂದು ಹೇಳಿ ಅದಕ್ಕೆ ಎಬೆನೆಜೆರೆಂದು ಹೆಸರಿಟ್ಟನು.


ಬಂಡೆಯ ಬಿರುಕುಗಳಲ್ಲಿಯೂ ಜರಿಯ ಮರೆಯಲ್ಲಿಯೂ ಇರುವ ನನ್ನ ಪರಿವಾಳವೇ! ನಿನ್ನ ರೂಪು ನನಗೆ ಕಾಣಿಸು, ನಿನ್ನ ದನಿ ಕೇಳಿಸು; ನಿನ್ನ ದನಿ ಎಷ್ಟೋ ಇಂಪು, ನಿನ್ನ ರೂಪು ಎಷ್ಟೋ ಅಂದ.


ದೇವರು ಕರೆದಾಗ ನೀನು ಮತ್ತೊಬ್ಬನ ದಾಸನಾಗಿದ್ದಿಯೋ? ಅದಕ್ಕೆ ಚಿಂತೆಮಾಡಬೇಡ. ಆದರೆ ಬಿಡುಗಡೆ ಹೊಂದುವದಕ್ಕೆ ನಿನ್ನ ಕೈಯಿಂದಾದರೆ ಸ್ವತಂತ್ರನಾಗುವದೇ ಉತ್ತಮ.


ಆದರೂ ನನ್ನ ದೇವರೇ, ಯೆಹೋವನೇ, ನಿನ್ನ ಸೇವಕನ ಪ್ರಾರ್ಥನೆಗೂ ವಿಜ್ಞಾಪನೆಗೂ ಕಿವಿಗೊಡು; ಈಹೊತ್ತು ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಸೇವಕನ ಮೊರೆಯನ್ನು ಲಾಲಿಸು.


ಕ್ರಯಪತ್ರವನ್ನು ನೇರೀಯನ ಮಗನಾದ ಬಾರೂಕನ ಕೈಗೆ ಕೊಟ್ಟ ಮೇಲೆ ನಾನು ಯೆಹೋವನಿಗೆ ಹೀಗೆ ವಿಜ್ಞಾಪನೆ ಮಾಡಿದೆನು -


ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇವಿುನ ಕಡೆಗೆ ಕದವಿಲ್ಲದ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ಯಥಾಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರಸಲ್ಲಿಸಿದನು.


ಆದದರಿಂದ ನಾಳಿನ ವಿಷಯವಾಗಿ ಚಿಂತೆಮಾಡಬೇಡಿರಿ; ನಾಳಿನ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವದು. ಆ ಹೊತ್ತಿನ ಕಾಟ ಆ ಹೊತ್ತಿಗೆ ಸಾಕು.


ಎಲ್ಲಾದಕ್ಕಿಂತ ಮೊದಲು ಮನುಷ್ಯರೆಲ್ಲರಿಗೋಸ್ಕರ ದೇವರಿಗೆ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಮನವಿಗಳನ್ನೂ ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಬೋಧಿಸುತ್ತೇನೆ.


ದಿಕ್ಕಿಲ್ಲದೆ ಒಬ್ಬೊಂಟಿಗಳಾಗಿರುವ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲಿರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು