Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:8 - ಕನ್ನಡ ಸತ್ಯವೇದವು J.V. (BSI)

8 ಕಡೇ ಮಾತೇನಂದರೆ, ಸಹೋದರರೇ, ಯಾವಾವದು ಸತ್ಯವೂ ಮಾನ್ಯವೂ ನ್ಯಾಯವೂ ಶುದ್ಧವೂ ಪ್ರೀತಿಕರವೂ ಮನೋಹರವೂ ಆಗಿದೆಯೋ, ಯಾವದು ಸದ್ಗುಣವಾಗಿದೆಯೋ, ಯಾವದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳನ್ನೂ ಲಕ್ಷ್ಯಕ್ಕೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸಹೋದರ ಸಹೋದರಿಯರೇ, ಒಳ್ಳೆಯದಾದ ಮತ್ತು ಸ್ತುತಿಗೆ ಯೋಗ್ಯವಾದ ಸಂಗತಿಗಳ ಬಗ್ಗೆ ಆಲೋಚಿಸಿರಿ. ಸತ್ಯವಾದ, ಮಾನ್ಯವಾದ, ನ್ಯಾಯವಾದ, ಶುದ್ಧವಾದ, ಸುಂದರವಾದ ಮತ್ತು ಗೌರವಯುತವಾದ ವಿಷಯಗಳ ಬಗ್ಗೆ ಆಲೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಕಡೆಯದಾಗಿ ಪ್ರಿಯರೇ, ಯಾವುದು ಸತ್ಯವೂ ಯಾವುದು ಮಾನ್ಯವೂ ಯಾವುದು ನ್ಯಾಯವೂ ಯಾವುದು ಶುದ್ಧವೂ ಯಾವುದು ಪ್ರೀತಿಕರವೂ ಯಾವುದು ಮನೋಹರವೂ ಯಾವುದು ಉತ್ತಮವಾದದ್ದೋ ಯಾವುದು ಕೀರ್ತಿಗೆ ಯೋಗ್ಯವೋ ಅವೆಲ್ಲವುಗಳನ್ನೇ ಆಲೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಆಕ್ರಿಕ್ ಭಾವಾನು ಅನಿ ಭೆನಿಯಾನು, ಖರೆ ಅನಿ ಪ್ರಾಮಾನಿಕತೆ ಹೊತ್ತೆ ಖಚ್ಚೆ ಹಾಯ್ ನಿತಿನ್ ಹೊತ್ತೆ ಖಚ್ಚೆ ಪವಿತ್ರ್ ಹೊತ್ತೆ, ಅನಿ ಪ್ರೆಮಾನ್ ಭರಲೆ ಸಗ್ಳ್ಯಾನಿ ಮಾನಿ ಸಾರ್ಕೆ ಖಚ್ಚೆ ಹಾಯ್ ತೆಚ್ಯಾ ವಿಶಯಾತುಚ್ ಚಿಂತುನ್ಗೆತ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:8
67 ತಿಳಿವುಗಳ ಹೋಲಿಕೆ  

ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದು, ಕರುಣೆ ಮುಂತಾದ ಒಳ್ಳೇ ಫಲಗಳಿಂದ ತುಂಬಿರುವಂಥದು ಆಗಿದೆ; ಅದರಲ್ಲಿ ಚಂಚಲವೂ ಕಪಟವೂ ಇಲ್ಲ.


ಸತ್ಕಾರ್ಯಮಾಡುವದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ ಯಥಾರ್ಥತ್ವವೂ ಗೌರವವೂ ಆಕ್ಷೇಪಣೆಗೆ ಆಸ್ಪದವಿಲ್ಲದಂಥ ಸ್ವಸ್ಥಬುದ್ಧಿಯೂ ಇರಬೇಕು;


ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವವಾದದ್ದನ್ನು ಯೋಚನೆಗೆ ತಂದುಕೊಳ್ಳುವವರಾಗಿದ್ದೇವೆ.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ - ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ದಯೆ ಉಪಕಾರ ನಂಬಿಕೆ ಸಾಧುತ್ವ ಶಮೆದಮೆ ಇಂಥವುಗಳೇ.


ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಅಕ್ರಮಗಾರರೆಂದು ನಿಂದಿಸುತ್ತಾರೋ ಆ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ವಿಚಾರಣೆಯ ದಿನದಲ್ಲಿ ದೇವರನ್ನು ಕೊಂಡಾಡುವರು.


ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಮನಸ್ಸಿನಿಂದ ಒಳ್ಳೇ ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ.


ಯೌವನಸ್ಥನೆಂದು ನಿನ್ನನ್ನು ಅಸಡ್ಡೆಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬುವವರಿಗೆ ನಡೆ ನುಡಿ ಪ್ರೀತಿ ನಂಬಿಕೆ ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.


ಬೆಳಕಿನವರಂತೆ ನಡೆದುಕೊಳ್ಳಿರಿ. ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.


ಅತಿಥಿಸತ್ಕಾರಮಾಡುವವನೂ ಒಳ್ಳೇದನ್ನು ಪ್ರೀತಿಸುವವನೂ ಸ್ವಸ್ಥಚಿತ್ತನೂ ನ್ಯಾಯವಂತನೂ ದೇವಭಕ್ತನೂ ಜಿತೇಂದ್ರಿಯನೂ ಆಗಿದ್ದು


ಯಾಕಂದರೆ ಆತನಿರುವ ಪ್ರಕಾರವೇ ಆತನನ್ನು ನೋಡುವೆವು. ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಕ್ರಿಸ್ತನು ಶುದ್ಧನಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ನಮ್ಮ ಜನರು ಸತ್ಕ್ರಿಯಾಹೀನರಾಗದಂತೆ ಅವರೂ ಸಹೋದರರಿಗೆ ಬೇಕಾದದ್ದನ್ನು ಕೊಡುವವರಾಗಿ ಪರೋಪಕಾರವನ್ನು ಕಲಿತುಕೊಳ್ಳಲಿ.


ದುಂದೌತಣ ಕುಡಿಕತನಗಳಲ್ಲಿಯಾಗಲಿ ಕಾಮ ವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚುಗಳಲ್ಲಿಯಾಗಲಿ ಕಾಲಕಳೆಯದೆ ಹಗಲು ಹೊತ್ತಿಗೆ ತಕ್ಕಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.


ಸದ್ಧರ್ಮಿಯು ನಿರ್ದೋಷವಾಗಿ ನಡೆಯುವನು; ಅವನು ಗತಿಸಿದ ಮೇಲೆಯೂ ಅವನ ಮಕ್ಕಳು ಭಾಗ್ಯವಂತರು.


ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.


ಪ್ರಿಯರಾದ ಮಕ್ಕಳೇ, ನಾವು ಬರೀಮಾತಿನಿಂದಾಗಲಿ ಬಾಯುಪಚಾರದಿಂದಾಗಲಿ ಪ್ರೀತಿಸುವವರಾಗಿರಬಾರದು; ನಿಮ್ಮ ಪ್ರೀತಿಯು ಕೃತ್ಯದಲ್ಲಿಯೂ ಸತ್ಯದಲ್ಲಿಯೂ ತೋರಬೇಕು.


ಹೇಗಂದರೆ ವೃದ್ಧರು ಮದ್ಯಾಸಕ್ತಿಯಿಲ್ಲದವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥರೂ ಆಗಿರಬೇಕೆಂದು ಬೋಧಿಸು. ಹಾಗೆಯೇ ವೃದ್ಧಸ್ತ್ರೀಯರು ಚಾಡಿಹೇಳುವವರೂ ಮದ್ಯಕ್ಕೆ ಗುಲಾಮರೂ ಆಗಿರದೆ


ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ; ಇದರಲ್ಲಿ ನಾವೇ ಯೋಗ್ಯರಾಗಿ ತೋರಿಬರಬೇಕೆಂಬದು ನಮ್ಮ ಉದ್ದೇಶವಲ್ಲ; ನಾವು ಅಯೋಗ್ಯರೆನಿಸಿಕೊಂಡರೂ ನೀವು ಒಳ್ಳೇದನ್ನು ಮಾಡುವವರಾಗಬೇಕೆಂಬದೇ ನಮ್ಮ ಉದ್ದೇಶ.


ಸಮಯವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.


ಮೊಟ್ಟ ಮೊದಲು ನಿಮ್ಮನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.


ಇಸ್ರಾಯೇಲ್ಯರ ಶರಣನೂ ದೇವರೂ ಆಗಿರುವಾತನು ಹೇಳಿದ್ದೇನಂದರೆ - ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಜನರನ್ನು ನೀತಿಯಿಂದ ಆಳುವವನು


ಕೆಟ್ಟಕೆಲಸ ಮಾಡುವವನಿಗೆ ಅಧಿಪತಿಯಿಂದ ಭಯವಿರುವದೇ ಹೊರತು ಒಳ್ಳೇ ಕೆಲಸ ಮಾಡುವವನಿಗೆ ಭಯವೇನೂ ಇಲ್ಲ. ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೇದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗಳಿಕೆಯುಂಟಾಗುವದು;


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಕಡೇ ಮಾತೇನಂದರೆ ನನ್ನ ಸಹೋದರರೇ, ಕರ್ತನಲ್ಲಿ ಸಂತೋಷಪಡಿರಿ. ಮೊದಲು ತಿಳಿಸಿದ ಮಾತುಗಳನ್ನು ತಿರಿಗಿ ನಿಮಗೆ ಬರೆಯುವದರಲ್ಲಿ ನನಗೇನೂ ಬೇಸರವಿಲ್ಲ; ನಿಮ್ಮನ್ನಾದರೋ ಅದು ದೃಢಮಾಡುವದು.


ಆದರೆ ಒಳಗೆ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಹೃದಯದಲ್ಲಿ ಆಗುವ ಸುನ್ನತಿಯೇ ಸುನ್ನತಿ. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮ ಸಂಬಂಧಪಟ್ಟದ್ದೇ; ಇಂಥಾ ಸುನ್ನತಿಯಿದ್ದವನಿಗೆ ಬರುವ ಹೊಗಳಿಕೆಯು ದೇವರಿಂದಲೇ ಹೊರತು ಮನುಷ್ಯರಿಂದ ಬರುವದಲ್ಲ.


ಶಿಷ್ಟನ ಮಾರ್ಗವು ನೇರವಾಗಿದೆ; ನೀನು ಅವನ ದಾರಿಯನ್ನು ಸರಿಪಡಿಸಿ ಸಮಮಾಡುತ್ತಿ.


ಆಕೆಯ ಕೈಗೆಲಸಕ್ಕೆ ಪ್ರತಿಫಲವನ್ನು ಸಲ್ಲಿಸಿರಿ; ಆಕೆಯ ಕಾರ್ಯಗಳೇ ಪುರದ್ವಾರಗಳಲ್ಲಿ ಆಕೆಯನ್ನು ಪ್ರಶಂಸಿಸಲಿ.


ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ಕಾಲಕ್ಷೇಪ ಮಾಡುವಂತೆ ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು.


ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡವಳೂ ಆಗಿರಬೇಕು; ಅಂದರೆ ಮಕ್ಕಳನ್ನು ಸಾಕಿದವಳಾಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ದೇವಜನರಿಗೆ ಉಪಚಾರಮಾಡಿದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲ್ಲಿ ಆಸಕ್ತಿಯುಳ್ಳವಳಾಗಲಿ ಆಗಿರಬೇಕು.


ನೀವು ಕೇವಲ ನ್ಯಾಯವನ್ನೇ ಅನುಸರಿಸಬೇಕು. ಹಾಗೆ ನಡೆದರೆ ನೀವು ಬದುಕಿಕೊಂಡು ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.


ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಧರಿಸಿಕೊಂಡು


ಹೀಗಿದ್ದರೆ ನೀವು ಹೊರಗಿನವರ ಎದುರಿನಲ್ಲಿ ಸಜ್ಜನರಾಗಿ ನಡೆದುಕೊಳ್ಳುವಿರಿ ಮತ್ತು ನಿಮಗೆ ಯಾವದಕ್ಕೂ ಕೊರತೆಯಿರುವದಿಲ್ಲ.


ಆದಕಾರಣ ಸುಳ್ಳಾಡುವದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.


ಮಾನ ಅವಮಾನ ಕೀರ್ತಿ ಅಪಕೀರ್ತಿಗಳನ್ನು ಹೊಂದಿದವರೂ ಆಗಿದ್ದೇವೆ.


ಅವರು - ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡುವವನೂ ಯೆಹೂದ್ಯ ಜನರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇಕಳುಹಿಸಿಕೊಂಡು ನಿನ್ನಿಂದ ಬೋಧನೆಯನ್ನು ಕೇಳಬೇಕೆಂದು ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದನು ಎಂದು ಹೇಳಿದರು.


ಕಲ್ಪಿಸಿ ಹೇಳುವವನು ತನಗೆ ಮಾನ ಬರಬೇಕೆಂದು ಅಪೇಕ್ಷಿಸುತ್ತಾನೆ; ತನ್ನನ್ನು ಕಳುಹಿಸಿದವನಿಗೆ ಮಾನಬರಬೇಕೆಂದು ಅಪೇಕ್ಷಿಸುವವನು ಸತ್ಯವಂತನು, ಅಧರ್ಮವು ಅವನಲ್ಲಿ ಇಲ್ಲ.


ಆ ಕಾಲದಲ್ಲಿ ಯೆರೂಸಲೇವಿುನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದು ಇಸ್ರಾಯೇಲ್ ಜನರನ್ನು ಸಂತೈಸುವವನು ಯಾವಾಗ ಬಂದಾನೆಂದು ಹಾರೈಸುತ್ತಿದ್ದನು; ಮತ್ತು ಪವಿತ್ರಾತ್ಮಪ್ರೇರಿತನಾಗಿದ್ದನು.


ಹೆರೋದನು ಯೋಹಾನನನ್ನು ನೀತಿವಂತನೆಂದೂ ದೇವಭಕ್ತನೆಂದೂ ತಿಳಿದು ಅಂಜಿಕೊಂಡು ಅವನಿಗೆ ಯಾವ ಅಪಾಯವೂ ಬಾರದಂತೆ ಇಟ್ಟಿದ್ದನು. ಇದಲ್ಲದೆ ಯೋಹಾನನು ಹೇಳಿದ್ದನ್ನು ಅವನು ಕೇಳಿದಾಗ ಮನಸ್ಸಿನಲ್ಲಿ ಬಹು ಗಲಿಬಿಲಿ ಹುಟ್ಟಿದರೂ ಅವನ ಮಾತನ್ನು ಸಂತೋಷದಿಂದ ಕೇಳುತ್ತಿದ್ದನು.


ಮೋಸದ ತ್ರಾಸು ಯೆಹೋವನಿಗೆ ಅಸಹ್ಯ; ನ್ಯಾಯದ ತೂಕ ಆತನಿಗೆ ಸಂತೋಷ.


ನನ್ನ ಮಗಳೇ, ಈಗ ಭಯಪಡಬೇಡ. ನೀನು ಗುಣವಂತೆಯೆಂಬದು ಊರಿನವರಿಗೆಲ್ಲಾ ಗೊತ್ತದೆ; ಆದದರಿಂದ ನೀನು ಹೇಳಿದ್ದನ್ನೆಲ್ಲಾ ಮಾಡುವೆನು.


ಆಗ ಆತನು ಅವರಿಗೆ ಹೇಳಿದ್ದೇನಂದರೆ - ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳುಕೊಂಡಿದ್ದಾನೆ. ಮನುಷ್ಯರಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ಅಲ್ಲಿ ಧರ್ಮಶಾಸ್ತ್ರಕ್ಕೆ ಸರಿಯಾಗಿ ನಡೆಯುವ ಸದ್ಭಕ್ತನೂ ಆ ಸ್ಥಳದ ಯೆಹೂದ್ಯರೆಲ್ಲರಿಂದ ಒಳ್ಳೆಯವನೆಂದು ಹೆಸರು ಹೊಂದಿದವನೂ


ಅವನ ನುಡಿ ಬಹು ಇಂಪು; ಹೌದು, ಅವನು ಸರ್ವಾಂಗದಲ್ಲಿಯೂ ಮನೋಹರನು; ಯೆರೂಸಲೇವಿುನ ಸ್ತ್ರೀಯರುಗಳಿರಾ, ಇವನೇ ಎನ್ನಿನಿಯನು; ಇವನೇ ನನ್ನ ಪ್ರಿಯನು.


ಅವನು ತನ್ನ ಪುತ್ರಪೌತ್ರರಿಗೆ - ನೀವು ನ್ಯಾಯನೀತಿಗಳನ್ನು ನಡಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆದುಕೊಂಡೆನಲ್ಲಾ; ಅವನು ಹೀಗೆ ಮಾಡುವದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವದು ಅಂದುಕೊಂಡನು.


ಪ್ರಿಯರೇ, ಅನೇಕ ಮಂದಿ ಸುಳ್ಳು ಪ್ರವಾದಿಗಳು ಲೋಕದೊಳಗೆ ಬಂದಿರುವದರಿಂದ ನೀವು ಆತ್ಮದ ಎಲ್ಲಾ ನುಡಿಗಳನ್ನು ನಂಬದೆ ಆಯಾ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.


ವೃದ್ಧಸ್ತ್ರೀಯರನ್ನು ತಾಯಿಗಳೆಂದೂ ಯೌವನಸ್ತ್ರೀಯರನ್ನು ಪೂರ್ಣಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ಬುದ್ಧಿ ಹೇಳು.


ಅರಿಮಥಾಯವೆಂಬ ಯೆಹೂದ್ಯರದೊಂದು ಪಟ್ಟಣದ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಸೇಫನು. ಅವನು ಹಿರೀಸಭೆಯವನು, ಉತ್ತಮನು, ಸತ್ಪುರುಷನು, ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನು; ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಕ್ಕೂ ಸಮ್ಮತಿ ಪಟ್ಟಿರಲಿಲ್ಲ.


ಪತಿಯು ಸಹ - ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ, ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು ಎಂದು ಆಕೆಯನ್ನು ಕೊಂಡಾಡುವನು.


ನ್ಯಾಯದ ತ್ರಾಸುತಕ್ಕಡಿಗಳು ಯೆಹೋವನ ಏರ್ಪಾಡು; ಕಟ್ಲೆಚೀಲದ ಕಲ್ಲುಗಳೆಲ್ಲಾ ಆತನ ಕೈಕೆಲಸವೇ.


ಗುಣವಂತೆಯು ಪತಿಯ ತಲೆಗೆ ಕಿರೀಟ; ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ.


ಪೂರ್ಣಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವನಾಗಿರಬೇಕು.


ಆದದರಿಂದ ಸಹೋದರರೇ, ಸಂಭಾವಿತರೂ ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಆಗಿರುವ ಏಳುಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ; ಅವರನ್ನು ಈ ಕೆಲಸದ ಮೇಲೆ ನೇವಿುಸುವೆವು.


ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದಿಯರ ಕೂಡ ಕಳುಹಿಸಿದರು. ಇವರು ಬಂದು - ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ಮುಖದಿಚ್ಫೆಗೆ ಮಾತಾಡುವವನಲ್ಲ ಎಂದು ಬಲ್ಲೆವು.


ಗುಣವತಿಯಾದ ಸತಿಯು ಎಲ್ಲಿ ಸಿಕ್ಕಾಳು? ಆಕೆಯು ಹವಳಕ್ಕಿಂತಲೂ ಬಹು ಅಮೂಲ್ಯಳು.


ನಮ್ಮ ಪೂರ್ವಿಕರು ನಂಬಿಕೆಯುಳ್ಳವರಾಗಿದ್ದದರಿಂದಲೇ ಒಳ್ಳೇ ಹೆಸರನ್ನು ಹೊಂದಿದರು.


ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು; ಚಾಡಿ ಹೇಳುವವರಾಗಿರದೆ ಮದ್ಯಾಸಕ್ತಿಯಿಲ್ಲದವರಾಗಿಯೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.


ಅವನ ಜೊತೆಯಲ್ಲಿ ಮತ್ತೊಬ್ಬ ಸಹೋದರನನ್ನು ಕಳುಹಿಸಿದ್ದೇವೆ; ಈ ಸಹೋದರನು ಸುವಾರ್ತಾಸೇವೆಯಲ್ಲಿ ಎಲ್ಲಾ ಸಭೆಗಳೊಳಗೆ ಕೀರ್ತಿಪಡಕೊಂಡವನಾಗಿದ್ದಾನೆ.


ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು; ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು; ಸಿಂಹಗಳಿಗಿಂತಲೂ ಬಲವುಳ್ಳವರು.


ಪ್ರಿಯರೇ, ನಿಮಗೀಗ ಬರೆಯುವದು ಎರಡನೆಯ ಪತ್ರಿಕೆ.


ನೀವು ಅನ್ಯಾಯವಾಗಿ ತೀರ್ಪುಕೊಡುವದೂ ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವದೂ ಇನ್ನೆಷ್ಟರವರೆಗೆ? ಸೆಲಾ.


ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು