Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:19 - ಕನ್ನಡ ಸತ್ಯವೇದವು J.V. (BSI)

19 ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನೇ ನನ್ನ ಸಾಲದಲ್ಲಿದ್ದೀ ಎಂದು ನಾನು ಬೇರೆ ಹೇಳಬೇಕೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನೇ ನನಗೆ ಹೊಣೆಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದನ್ನು ಪೌಲನೆಂಬ ನಾನೇ ಕೊಟ್ಟು ತೀರಿಸುತ್ತೇನೆ ಎಂದು ನನ್ನ ಹಸ್ತಾಕ್ಷರದಲ್ಲೇ ಬರೆದುಕೊಡುತ್ತಿದ್ದೇನೆ. ಆದರೆ ಈಗ ನೀನು ಏನಾಗಿದ್ದೀಯೋ ಅದು ನನ್ನಿಂದಲೇ. ಹೀಗೆ ನೀನೇ ನನಗೆ ಸಾಲಗಾರನಾಗಿದ್ದೀ ಎಂದು ನಾನು ಹೇಳಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪೌಲನಾದ ನಾನು ನನ್ನ ಸ್ವಂತ ಕೈಗಳಿಂದ ಇದನ್ನು ಬರೆಯುತ್ತಿದ್ದೇನೆ. ಒನೇಸಿಮನು ನಿನಗೆ ಏನಾದರೂ ಕೊಡಬೇಕಾಗಿದ್ದರೆ ನಾನು ಅದನ್ನು ಕೊಡುತ್ತೇನೆ. ನಿನ್ನ ಆತ್ಮಿಕ ಜೀವಿತದ ವಿಷಯದಲ್ಲಿ ನೀನು ನಿನಗೆ ನನಗೆಷ್ಟು ಋಣಿಯಾಗಿರುವೆ ಎಂದು ನಾನೇನೂ ಹೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ನನ್ನ ಸ್ವಂತ ಕೈಯಲ್ಲಿ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನು ನಿನ್ನ ಪ್ರಾಣವನ್ನೇ ನನಗೆ ಸಾಲಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮಿಯಾ ಪಾವ್ಲು ಖುದ್ದ್ ಮಾಜ್ಯಾ ಹಾತಿನ್ ಲಿವ್ತಾ, ತುಜೆ ರಿನ್ ಮಿಯಾ ಫಾರಿಕ್ ಕರ್ತಾ, ತುಜ್ಯಾ ಜಿವಾಕುಚ್ ತಿಯಾ ಮಾಜೆಸಾಟ್ನಿ ಎಕ್ ಉಪ್ಕಾರಾತ್ ಥವಲ್ಲೆ ಹಾಯ್ ಮನುನ್ ಯಾದ್ ಕರುನ್ ದಿತಲೆ ನಕ್ಕೊ ಮನುನ್ ಮಾಕಾ ದಿಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:19
14 ತಿಳಿವುಗಳ ಹೋಲಿಕೆ  

ಇಗೋ, ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರಗಳಲ್ಲಿ ನಿಮಗೆ ಬರೆಯುತ್ತಾ ಇದ್ದೇನೆ.


ನೋಡಿರಿ, ಪೌಲನೆಂಬ ನಾನು ನಿಮಗೆ ಒಂದನ್ನು ಹೇಳುತ್ತೇನೆ - ನೀವು ಸುನ್ನತಿಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನೂ ಪ್ರಯೋಜನವಿಲ್ಲ.


ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹುಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.


ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.


ನೀವೇ ನಮ್ಮ ಯೋಗ್ಯತಾಪತ್ರ; ಅದು ನಮ್ಮ ಹೃದಯಗಳಲ್ಲೇ ಬರೆದದೆ; ಆ ಪತ್ರವನ್ನು ಎಲ್ಲರೂ ಬಲ್ಲರು, ಎಲ್ಲರೂ ಓದುತ್ತಾರೆ.


ನಾನೇ ಅವನಿಗೆ ಹೊಣೆ; ಅವನ ವಿಷಯ ನನ್ನನ್ನೇ ಕೇಳಬಹುದು. ನಾನು ಅವನನ್ನು ತಿರಿಗಿ ಕರಕೊಂಡು ಬಂದು ನಿನ್ನೆದುರಿನಲ್ಲಿ ನಿಲ್ಲಿಸದೆ ಹೋದರೆ ಆ ದೋಷ ಎಂದೆಂದಿಗೂ ನನ್ನ ಮೇಲೆ ಇರಲಿ.


ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ.


ಸಿದ್ಧವಾಗದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬದನ್ನು ಕಾಣುವಾಗ ನಮಗೆ ಇಂಥ ಭರವಸವಿದ್ದದ್ದಕ್ಕೆ ನಾವು ನಾಚಿಕೆಪಡಬೇಕಾದೀತು; ನಿಮಗೂ ನಾಚಿಕೆಯಾಗುವದೆಂದು ನಾವು ಬೇರೆ ಹೇಳಬೇಕೇ.


ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡಕೊಳ್ಳುವವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನತೋರಿಸುವವನೂ ಆಗಿದ್ದಾನೆ ಎಂದು ಹೇಳುವವರು ನಿಮ್ಮಲ್ಲಿದ್ದಾರಲ್ಲಾ. ಆ ಪೌಲನೆಂಬ ನಾನು ಕ್ರಿಸ್ತನ ಶಾಂತಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವದೇನಂದರೆ


ಅವನಿಂದ ನೀನು ಏನಾದರೂ ನಷ್ಟಪಟ್ಟಿದ್ದರೆ ಅಥವಾ ಅವನು ಸಾಲವೇನಾದರೂ ತೀರಿಸಬೇಕಾಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು