Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:24 - ಕನ್ನಡ ಸತ್ಯವೇದವು J.V. (BSI)

24 ಮಾರ್ಕ ಅರಿಸ್ತಾರ್ಕ ದೇಮ ಲೂಕರೂ ನಿನ್ನನ್ನು ವಂದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನನ್ನ ಜೊತೆಗೆಲಸದವರಾದ ಮಾರ್ಕ, ಅರಿಸ್ತಾರ್ಕ, ದೇಮ, ಲೂಕ ಇವರೆಲ್ಲರೂ ನಿನಗೆ ವಂದನೆ ತಿಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಮಾರ್ಕ, ಆರಿಸ್ತಾರ್ಕ, ದೇಮ, ಲೂಕ ಇವರುಗಳು ನಿನಗೆ ವಂದನೆ ತಿಳಿಸಿದ್ದಾರೆ. ಇವರೆಲ್ಲರೂ ನನ್ನ ಜೊತೆಕೆಲಸಗಾರರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನನ್ನ ಜೊತೆಕೆಲಸದವರಾದ ಮಾರ್ಕ, ಅರಿಸ್ತಾರ್ಕ, ದೇಮ ಹಾಗೂ ಲೂಕ ನಿನ್ನನ್ನು ವಂದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತಸೆಚ್ ಮಾಜೆ ವಾಂಗ್ಡಿ ಮಾರ್ಕ್, ಅರಸ್ತಾರ್ಖ್, ದೆಮಸ್ ಅನಿ ಲುಕ್ ತುಕಾ ನಮಸ್ಕಾರ್ ಧಾಡ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:24
15 ತಿಳಿವುಗಳ ಹೋಲಿಕೆ  

ಪ್ರಿಯ ವೈದ್ಯನಾಗಿರುವ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ.


ನನ್ನ ಜೊತೆಸೆರೆಯವನಾದ ಅರಿಸ್ತಾರ್ಕನೂ ಬಾರ್ನಬನಿಗೆ ದಾಯಾದನಾಗಿರುವ ಮಾರ್ಕನೂ ನಿಮಗೆ ವಂದನೆ ಹೇಳುತ್ತಾರೆ. ಮಾರ್ಕನನ್ನು ಕುರಿತು ಅಪ್ಪಣೆಗಳನ್ನು ಹೊಂದಿದಿರಲ್ಲಾ; ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ.


ಆಗ ಊರೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನೂ ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಗ್ಗಟ್ಟಾಗಿ ನಾಟಕಶಾಲೆಯೊಳಗೆ ನುಗ್ಗಿದರು.


ತರುವಾಯ ಅವನು ಯೋಚನೆಮಾಡಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿಯಾದ ಮರಿಯಳ ಮನೆಗೆ ಬಂದನು. ಅಲ್ಲಿ ಅನೇಕರು ಕೂಡಿಬಂದು ಪ್ರಾರ್ಥನೆಮಾಡುತ್ತಿದ್ದರು.


ಆಗ ಅದ್ರವಿುತ್ತಿಯದಿಂದ ಬಂದು ಆಸ್ಯಸೀಮೆಯ ಕರಾವಳಿಯ ಸ್ಥಳಗಳಿಗೆ ಹೋಗುವದಕ್ಕಿದ್ದ ಒಂದು ಹಡಗನ್ನು ಹತ್ತಿ ಸಮುದ್ರಪ್ರಯಾಣವನ್ನು ಪ್ರಾರಂಭಿಸಿದೆವು. ಮಕೆದೋನ್ಯಕ್ಕೆ ಸೇರಿದ ಥೆಸಲೋನಿಕದ ಅರಿಸ್ತಾರ್ಕನು ನಮ್ಮ ಜೊತೆಯಲ್ಲಿದ್ದನು.


ಬಾರ್ನಬ ಸೌಲರು ಮಾಡಬೇಕಾದ ಧರ್ಮಕಾರ್ಯವನ್ನು ತೀರಿಸಿ ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಕರಕೊಂಡು ಯೆರೂಸಲೇವಿುನಿಂದ ಹಿಂತಿರಿಗಿ ಬಂದರು.


ಆದದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ. ಸಭೆಗೆ ಕೆಲವು ಮಾತುಗಳನ್ನು ಬರೆದಿದ್ದೆನು;


ಸತ್ಯ ಸಯುಜನೇ, ಅವರಿಗೆ ಸಹಾಯಕನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸಪಟ್ಟವರು. ಅವರವರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಬರೆದವೆ.


ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ, ನನ್ನ ಸಹೋದರನೂ ಜೊತೆಕೆಲಸದವನೂ ಸಹಭಟನೂ ಆಗಿರುವಂಥ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನೆನಸಿದ್ದೇನೆ.


ತೀತನನ್ನು ಕುರಿತು ಕೇಳುತ್ತೀರೋ, ಅವನು ನನ್ನ ಪಾಲುಗಾರನೂ ನಿಮ್ಮ ಪ್ರಯೋಜನಕ್ಕಾಗಿ ನನಗೆ ಸಹಕಾರಿಯೂ ಆಗಿದ್ದಾನೆ; ಆ ಸಹೋದರರನ್ನು ಕುರಿತು ಕೇಳುತ್ತೀರೋ, ಅವರು ಸಭೆಗಳಿಂದ ಕಳುಹಿಸಲ್ಪಟ್ಟವರೂ ಕ್ರಿಸ್ತನ ಮಹಿಮೆಯನ್ನು ಪ್ರಕಾಶಪಡಿಸುವವರೂ ಆಗಿದ್ದಾರೆ.


ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣ ಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇವಿುಗೆ ಹೋದನು.


ದೇವರು ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು