Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:4 - ಕನ್ನಡ ಸತ್ಯವೇದವು J.V. (BSI)

4 ನಾನು ಪ್ರಾರ್ಥನೆಮಾಡುವಾಗೆಲ್ಲಾ ದೇವರಿಗೆ ಯಾವಾಗಲೂ ಸ್ತೋತ್ರವನ್ನು ಸಲ್ಲಿಸಿ ನಿನಗೋಸ್ಕರ ವಿಜ್ಞಾಪನೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕರ್ತನಾದ ಯೇಸುವಿನ ಮೇಲೆ ನೀನು ಇಟ್ಟಿರುವ ನಂಬಿಕೆ, ಪ್ರೀತಿ ಹಾಗೂ ದೇವಜನರ ಮೇಲಿರುವ ನಿನ್ನ ಪ್ರೀತಿಯನ್ನು ಕುರಿತು ಕೇಳಿದ್ದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಪ್ರಿಯ ಫಿಲೆಮೋನನೇ, ನಾನು ನಿನಗಾಗಿ ಪ್ರಾರ್ಥಿಸುವಾಗಲೆಲ್ಲಾ ದೇವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ನೆನಪು ಮಾಡಿಕೊಳ್ಳುತ್ತಿರುತ್ತೇನೆ. ಯಾವಾಗಲೂ ನಿನಗಾಗಿ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ಜ್ಞಾಪಕಮಾಡಿಕೊಂಡು ನನ್ನ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಭಾವಾ ಫಿಲೆಮೊನಾ, ಹರಿಎಗ್ದಾ ಮಾಗ್ನಿ ಕರ್ತಾನಾ, ಮಿಯಾ ತುಜಿ ಯಾದ್ ಕರ್ತಾ ಅನಿ ದೆವಾಕ್ ಧನ್ಯವಾದ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:4
8 ತಿಳಿವುಗಳ ಹೋಲಿಕೆ  

ಮೊದಲನೇದು, ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ.


ನನ್ನ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆಮಾಡಿ -


ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ ಒಳ್ಳೇ ಮನಸ್ಸಾಕ್ಷಿಯುಳ್ಳವನಾಗಿ ಆರಾಧಿಸುವ ದೇವರಿಗೆ ನಿನ್ನ ವಿಷಯವಾಗಿ ಸ್ತೋತ್ರ ಸಲ್ಲಿಸುತ್ತೇನೆ.


ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಬರುತ್ತದೆ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚುತ್ತಾ ಬರುತ್ತದೆ.


ನಾವು ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆಯನ್ನೂ ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಂಡು ನಮ್ಮ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆಮಾಡುವಾಗ ನಿಮ್ಮೆಲ್ಲರ ವಿಷಯದಲ್ಲಿ ದೇವರಿಗೆ ಯಾವಾಗಲೂ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.


ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ದೇವಜನರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿ ಪರಲೋಕದಲ್ಲಿ ನಿಮಗೋಸ್ಕರ ಸಿದ್ಧವಾಗಿರುವ ಮಹಾಪದವಿಯನ್ನು ನೆನಸುತ್ತಾ ನಾವು ಪ್ರಾರ್ಥನೆಮಾಡುವಾಗೆಲ್ಲಾ ನಿಮ್ಮ ನಿವಿುತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಸ್ತೋತ್ರಮಾಡುತ್ತೇವೆ. ನೀವು ಆ ಪದವಿಯನ್ನು ಕುರಿತು ನಿಮ್ಮ ಬಳಿಗೆ ಬಂದಿರುವ ಸುವಾರ್ತೆಯ ಸತ್ಯವಾಕ್ಯದಿಂದ ಮೊದಲೇ ಕೇಳಿದಿರಿ.


ನಾನು ನಿಮಗೋಸ್ಕರ ದೇವರನ್ನು ಬೇಡಿಕೊಳ್ಳುವ ಎಲ್ಲಾ ಸಮಯಗಳಲ್ಲಿಯೂ ಸಂತೋಷದಿಂದಲೇ ಬೇಡುವವನಾಗಿದ್ದೇನೆ. ನಾನು ನಿಮ್ಮನ್ನು ನೆನಸಿಕೊಳ್ಳುವಾಗೆಲ್ಲಾ


ಕರ್ತನಾದ ಯೇಸುವಿನ ಮೇಲೆ ನೀನು ಇಟ್ಟಿರುವ ನಂಬಿಕೆಯನ್ನು ಕುರಿತೂ ದೇವಜನರೆಲ್ಲರ ಮೇಲಿರುವ ನಿನ್ನ ಪ್ರೀತಿಯನ್ನು ಕುರಿತೂ ಕೇಳಿದ್ದರಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು