Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:6 - ಕನ್ನಡ ಸತ್ಯವೇದವು J.V. (BSI)

6 ಕ್ರಿಸ್ತನಲ್ಲಿ ನಮಗೆ ದೊರಕಿರುವ ಎಲ್ಲಾ ಸುವರಗಳನ್ನು ಕುರಿತು ನೀನು ತಿಳುವಳಿಕೆಯನ್ನು ಹೊಂದುತ್ತಿರುವಲ್ಲಿ ಕ್ರಿಸ್ತ ನಂಬಿಕೆಯಲ್ಲಿರುವ ನಿನ್ನ ಅನ್ಯೋನ್ಯತೆಯು ಕ್ರಿಸ್ತನಿಗೆ ಹೆಚ್ಚಾದ ಮಹಿಮೆಯನ್ನು ಉಂಟುಮಾಡಬೇಕೆಂದು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕ್ರಿಸ್ತನಲ್ಲಿ ನಮಗೆ ದೊರಕಿರುವ ಎಲ್ಲಾ ಸುವರಗಳನ್ನು ಕುರಿತು ನೀನು ತಿಳಿವಳಿಕೆಯನ್ನು ಹೊಂದುತ್ತಿರುವೆ. ಕ್ರಿಸ್ತ ನಂಬಿಕೆಯಲ್ಲಿರುವ ನಿನ್ನ ಅನ್ಯೋನ್ಯತೆಯೂ ಕ್ರಿಸ್ತನಿಗೆ ಅತಿಯಾದ ಮಹಿಮೆಯನ್ನು ಉಂಟುಮಾಡಬೇಕೆಂದು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿನ್ನ ವಿಶ್ವಾಸವನ್ನು ಬೇರೆಯವರಿಗೂ ನೀಡಿ ಕ್ರಿಸ್ತಯೇಸುವಿನಲ್ಲಿ ನಮ್ಮದಾಗಿರುವ ಎಲ್ಲಾ ಒಳಿತಿನ ಅರಿವನ್ನು ಹೆಚ್ಚಿಸಿಕೊಳ್ಳಬೇಕೆಂಬುದೇ ನನ್ನ ಪ್ರಾರ್ಥನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀನು ನಿನ್ನ ನಂಬಿಕೆಯನ್ನು ಹಂಚಿಕೊಳ್ಳುವುದರಲ್ಲಿ ಕಾರ್ಯ ನಿರತನಾಗಿರುವುದರ ಮೂಲಕ ಕ್ರಿಸ್ತನಲ್ಲಿ ನಮಗಿರುವ ಎಲ್ಲಾ ಸುವರಗಳನ್ನು ಅರ್ಥಮಾಡಿಕೊಳ್ಳುವಂತಾಗಲೆಂದು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿನ್ನ ವಿಶ್ವಾಸದಲ್ಲಿ ಅನ್ಯೋನ್ಯತೆಯು ನಿನ್ನ ಎಲ್ಲಾ ಒಳ್ಳೆಯದರ ಆಳವಾದ ತಿಳುವಳಿಕೆಯನ್ನು ಕ್ರಿಸ್ತ ಯೇಸುವಿಗಾಗಿ ಪರಿಣಾಮಗೊಳಿಸಿ ಹಂಚುವಂತೆ ನಾನು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಕ್ರಿಸ್ತಾಚ್ಯಾ ವೈನಾ ಅಮ್ಕಾ ಗಾವಲ್ಲ್ಯಾ ಆಶಿರ್ವಾದಾಚ್ಯಾ ವಿಶಯಾತ್ ತುಕಾ ಸಗ್ಳೆ ಗೊತ್ತ್ ರ್‍ಹಾವ್ನ್, ಕ್ರಿಸ್ತಾಚ್ಯಾ ವಿಶ್ವಾಸಾತ್ ತುಕಾ ಅಸಲ್ಲೊ ಎಕ್ವಟ್ಟ್. ಕ್ರಿಸ್ತಾಕ್ ಜಾಸ್ತಿಚಿ ಮಹಿಮಾ ಹೊಯ್ ಸಾರ್ಕೆ ಕರುಂದಿತ್ ಮನುನ್ ಮಿಯಾ ಮಾಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:6
18 ತಿಳಿವುಗಳ ಹೋಲಿಕೆ  

ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಸಂಬಂಧವಾದ ಪರಿಜ್ಞಾನವನ್ನು ಹೊಂದುವ ವಿಷಯದಲ್ಲಿ ನಿಮ್ಮನ್ನು ಆಲಸ್ಯಗಾರರೂ ನಿಷ್ಫಲರೂ ಆಗದಂತೆ ಮಾಡುತ್ತವೆ.


ಆದಕಾರಣ ನಾವು ನಿಮ್ಮ ಸುದ್ದಿಯನ್ನು ಕೇಳಿದ ದಿವಸದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲ ಆತ್ಮೀಯ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ


ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಹೀಗಾದರೆ ಅವರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.


ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಅಕ್ರಮಗಾರರೆಂದು ನಿಂದಿಸುತ್ತಾರೋ ಆ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ವಿಚಾರಣೆಯ ದಿನದಲ್ಲಿ ದೇವರನ್ನು ಕೊಂಡಾಡುವರು.


ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ತನ್ನಲ್ಲಿ ಜೀವವಿಲ್ಲದ್ದು.


ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ತಕ್ಕ ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜವೇನು? ಅಂಥ ನಂಬಿಕೆಯು ಇವನನ್ನು ರಕ್ಷಿಸುವದೋ?


ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ.


ನಮ್ಮ ಜನರು ಸತ್ಕ್ರಿಯಾಹೀನರಾಗದಂತೆ ಅವರೂ ಸಹೋದರರಿಗೆ ಬೇಕಾದದ್ದನ್ನು ಕೊಡುವವರಾಗಿ ಪರೋಪಕಾರವನ್ನು ಕಲಿತುಕೊಳ್ಳಲಿ.


ಅವನ ಹೃದಯದ ರಹಸ್ಯಗಳು ಬೈಲಾಗುವವು; ಮತ್ತು ಅಡ್ಡಬಿದ್ದು ದೇವರನ್ನು ಆರಾಧಿಸಿ - ದೇವರು ನಿಜವಾಗಿ ನಿಮ್ಮಲ್ಲಿದ್ದಾನೆಂಬದನ್ನು ಪ್ರಚುರ ಪಡಿಸುವನು.


ಒಳ್ಳೇ ಮನಸ್ಸಾಕ್ಷಿಯುಳ್ಳವರಾಗಿರಿ; ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯನ್ನು ಕುರಿತು ಬೈಯುವವರು ನಿಮ್ಮನ್ನು ನಿಂದಿಸುವದಕ್ಕೆ ನಾಚಿಕೆಪಡುವರು.


ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.


ಕಡೇ ಮಾತೇನಂದರೆ, ಸಹೋದರರೇ, ಯಾವಾವದು ಸತ್ಯವೂ ಮಾನ್ಯವೂ ನ್ಯಾಯವೂ ಶುದ್ಧವೂ ಪ್ರೀತಿಕರವೂ ಮನೋಹರವೂ ಆಗಿದೆಯೋ, ಯಾವದು ಸದ್ಗುಣವಾಗಿದೆಯೋ, ಯಾವದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳನ್ನೂ ಲಕ್ಷ್ಯಕ್ಕೆ ತಂದುಕೊಳ್ಳಿರಿ.


ಯಾಕಂದರೆ ಕಾರ್ಯಕ್ಕೆ ಅನುಕೂಲವಾದ ಮಹಾಸಂದರ್ಭವು ನನಗುಂಟು ಮತ್ತು ವಿರೋಧಿಗಳು ಬಹಳ ಮಂದಿ ಇದ್ದಾರೆ.


ಈ ಸ್ವಭಾವವು ಅದನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ದಿನೇದಿನೇ ನೂತನವಾಗುತ್ತಾ ಪೂರ್ಣಜ್ಞಾನವನ್ನು ಉಂಟುಮಾಡುತ್ತದೆ.


ಐದು ತಲಾಂತು ಹೊಂದಿದವನು ಹೋಗಿ ಅದನ್ನು ವ್ಯಾಪಾರಕ್ಕೆ ಹಾಕಿ ಇನ್ನೂ ಐದು ತಲಾಂತು ಗಳಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು