Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:1 - ಕನ್ನಡ ಸತ್ಯವೇದವು J.V. (BSI)

1 ಯೇಸು ಕ್ರಿಸ್ತನ ವಂಶಾವಳಿಯು. ಆತನು ದಾವೀದನ ವಂಶದವನು. ದಾವೀದನು ಅಬ್ರಹಾಮನ ವಂಶದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಕ್ರಿಸ್ತನ ವಂಶಾವಳಿಯಿದು. ಆತನು ದಾವೀದನ ವಂಶದವನು. ದಾವೀದನು ಅಬ್ರಹಾಮನ ವಂಶದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕ್ರಿಸ್ತ ಯೇಸುವಿನ ವಂಶಾವಳಿಯ ದಾಖಲೆ. ಯೇಸು ದಾವೀದನ ವಂಶದವರು, ದಾವೀದನು ಅಬ್ರಹಾಮನ ವಂಶದವನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜು ಕ್ರಿಸ್ತಾಚಿ ವಂಶಾವಳಿ ಹಿ. ಜೆಜು ಅಬ್ರಾಹಾಮಾಚ್ಯಾ ಪಿಳ್ಗಿತ್ಲ್ಯಾ ದಾವಿದಾಚ್ಯಾ ಪಿಳ್ಗಿಚೊ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:1
39 ತಿಳಿವುಗಳ ಹೋಲಿಕೆ  

ನೀನು ನನ್ನ ಮಾತನ್ನು ಕೇಳಿದ್ದರಿಂದ ಭೂವಿುಯ ಎಲ್ಲಾ ಜನಾಂಗಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವದು ಎಂಬದಾಗಿ ಯೆಹೋವನು ತನ್ನಾಣೆಯಿಟ್ಟು ಹೇಳಿದ್ದಾನೆ ಅಂದನು.


ಒಳ್ಳೇದು, ದೇವರು ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳನ್ನು ಮಾಡಿದನು. ಆತನು ನಿನ್ನ ಸಂತತಿಗಳಿಗೆ ಎಂದು ಹೇಳಿ ಅನೇಕರನ್ನು ಸೂಚಿಸದೆ ನಿನ್ನ ಸಂತತಿಗೆ ಎಂದು ಹೇಳಿ ಒಬ್ಬನನ್ನೇ ಸೂಚಿಸುತ್ತಾನೆ. ಆ ಒಬ್ಬನು ಕ್ರಿಸ್ತನೇ.


ಈ ಸುವಾರ್ತೆಯು ದೇವರ ಮಗನೂ ನಮ್ಮ ಕರ್ತನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದದ್ದು. ಆತನು ವಂಶಕ್ರಮದಿಂದ ದಾವೀದನ ಸಂತಾನದಲ್ಲಿ ಹುಟ್ಟಿದವನೂ,


ಯೇಸುವೆಂಬ ನಾನು ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ವಿಷಯದಲ್ಲಿ ನಿಮಗೆ ಸಾಕ್ಷಿಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದವಂಶವೆಂಬ ಬುಡದಿಂದ ಹುಟ್ಟಿದ ಚಿಗುರೂ ಅವನ ಸಂತತಿಯೂ ಉದಯಸೂಚಕವಾದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.


ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವದಿಲ್ಲ - ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;


ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಿಕೆಯನ್ನು ಚಿಗುರಿಸುವೆನು; ಅವನು ರಾಜನಾಗಿ ಆಳುತ್ತಾ ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ ದೇಶದಲ್ಲಿ ನೀತಿನ್ಯಾಯಗಳನ್ನು ನಿರ್ವಹಿಸುವನು.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವದು, ಅದರ ಬೇರಿನಿಂದ ಹೊರಟ ತಳಿರು ಫಲಿಸುವದು;


ಇನ್ನೂ ಕೆಲವರು - ಕ್ರಿಸ್ತನು ಗಲಿಲಾಯದಿಂದ ಬರುವದು ಹೇಗೆ? ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬದಾಗಿ ಶಾಸ್ತ್ರದಲ್ಲಿ ಉಂಟಲ್ಲವೇ ಎಂದು ಹೇಳಿದರು.


ನೀನು ಆಶೀರ್ವಾದನಿಧಿಯಾಗುವಿ. ನಿನ್ನನ್ನು ಹರಸುವವರನ್ನು ಹರಸುವೆನು; ನಿನ್ನನ್ನು ಶಪಿಸುವವರನ್ನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು ಎಂದು ಹೇಳಿದನು.


ಅವನು ಪ್ರವಾದಿಯಾಗಿದ್ದು - ನಿನ್ನ ಸಂತತಿಯವರೊಳಗೆ ಒಬ್ಬನನ್ನು ನಾನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನೆಂದು ತನಗೆ ದೇವರು ಆಣೆಯಿಟ್ಟು ಹೇಳಿದ್ದನ್ನು ಬಲ್ಲವನಾಗಿ


ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ - ಆತನ ತಾಯಿಯಾದ ಮರಿಯಳನ್ನು ಯೋಸೇಫನಿಗೆ ನಿಶ್ಚಯಮಾಡಿರಲಾಗಿ ಅವರು ಕೂಡುವದಕ್ಕಿಂತ ಮುಂಚೆ ಆಕೆಯು ಪವಿತ್ರಾತ್ಮನಿಂದ ಬಸುರಾಗಿದ್ದದ್ದು ತಿಳಿದುಬಂತು.


ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ಕೀಳಲ್ಪಟ್ಟಿದ್ದಾನೆ, ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?


ಅಬ್ರಹಾಮ ಇಸಾಕ ಯಾಕೋಬರು ಅವರ ಪಿತೃಗಳೇ. ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದವನು, ಆತನು ಎಲ್ಲಾದರ ಮೇಲೆ ಒಡೆಯನೂ ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.


ನೀನು ಲೋಕಕ್ಕೆ ಬಾಧ್ಯನಾಗುವಿ ಎಂಬ ವಾಗ್ದಾನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿಗಾಗಲಿ ಧರ್ಮಶಾಸ್ತ್ರದಿಂದ ಆದದ್ದಲ್ಲ. ನಂಬಿಕೆಯೆಂಬ ನೀತಿಯಿಂದ ಆದದ್ದೇ.


ಆ ಸೀಮೆಯಿಂದ ಕಾನಾನ್ಯರವಳೊಬ್ಬಳು ಹೊರಟು ಬಂದು - ಸ್ವಾಮೀ, ದಾವೀದನ ಕುಮಾರನೇ, ನನ್ನನ್ನು ಕರುಣಿಸು. ನನ್ನ ಮಗಳಿಗೆ ದೆವ್ವದ ಕಾಟ ಬಹಳವಾಗಿದೆ ಎಂದು ಕೂಗಿಕೊಂಡಳು.


ಯೇಸು ಅಲ್ಲಿಂದ ಹೋಗುವಾಗ ಇಬ್ಬರು ಕುರುಡರು - ದಾವೀದನ ಕುಮಾರನೇ, ನಮ್ಮನ್ನು ಕರುಣಿಸು ಎಂದು ಕೂಗುತ್ತಾ ಆತನ ಹಿಂದೆ ಹೋದರು.


ಆಗ ನಾನು ಯಾಕೋಬನ ಸಂತಾನದವರನ್ನು ತ್ಯಜಿಸಿ ಅಬ್ರಹಾಮ, ಇಸಾಕ, ಯಾಕೋಬ, ಇವರ ಸಂತತಿಯನ್ನು ಆಳತಕ್ಕ ಒಡೆಯರನ್ನು ನನ್ನ ದಾಸನಾದ ದಾವೀದನ ವಂಶದಿಂದ ಆರಿಸದೆ ಆ ವಂಶದವರನ್ನು ನಿರಾಕರಿಸಿಬಿಟ್ಟೇನು. ಅವರನ್ನು ದುರವಸ್ಥೆಯಿಂದ ತಪ್ಪಿಸಿ ಕರುಣಿಸೇ ಕರುಣಿಸುವೆನು.


ಇದೇ ಭೂಮ್ಯಾಕಾಶಗಳ ನಿರ್ಮಾಣ ಚರಿತ್ರೆ.


ಯೇಸು ಸ್ನಾನಮಾಡಿಸಿಕೊಂಡ ಕೂಡಲೆ ನೀರಿನಿಂದ ಮೇಲಕ್ಕೆ ಬರಲು ಇಗೋ, ಆತನಿಗೆ ಆಕಾಶವು ತೆರೆಯಿತು; ಮತ್ತು ದೇವರ ಆತ್ಮ ಪಾರಿವಾಳದ ಹಾಗೆ ಇಳಿದು ತನ್ನ ಮೇಲೆ ಬರುವದನ್ನು ಕಂಡನು.


ಆ ದಿನದಲ್ಲಿ ಯೆಹೋವನು ಯೆರೂಸಲೇವಿುನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವದು.


ಆ ದಿನದಲ್ಲಿ ನಾನು ದಾವೀದನ ಬಿದ್ದು ಹೋಗಿರುವ ಗುಡಿಸಲನ್ನು ಎತ್ತಿ ಅದರ ಕಂಡಿಗಳನ್ನು ಮುಚ್ಚುವೆನು;


ಆದಾಮನ ವಂಶದವರ ಚರಿತ್ರೆಯು - ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗೆ ಸರಿಯಾಗಿ ಉಂಟುಮಾಡಿದನು.


ಅವನ ಸಂತತಿಯು ಶಾಶ್ವತವಾಗಿ ಇರುವದು; ಅವನ ಸಿಂಹಾಸನವು ಸೂರ್ಯನಂತೆ ನನ್ನ ಎದುರಿನಲ್ಲಿದ್ದು


[ನೀನು ನುಡಿದದ್ದೇನಂದರೆ - ] ನಾನು ಆರಿಸಿಕೊಂಡ ಸೇವಕನಾದ ದಾವೀದನ ಸಂಗಡ


ಅಬ್ರಹಾಮನು ಇಸಾಕನನ್ನು ಪಡೆದನು. ಇಸಾಕನು ಯಾಕೋಬನನ್ನು ಪಡೆದನು. ಯಾಕೋಬನು ಯೆಹೂದನನ್ನೂ ಅವನ ಅಣ್ಣತಮ್ಮಂದಿರನ್ನೂ ಪಡೆದನು.


ಆತನು ಯಾಕೋಬನ ವಂಶವನ್ನು ಸದಾಕಾಲ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.


ಏಕಂದರೆ ದೇವರು ಒಬ್ಬನೇ; ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;


ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೂ ದಾವೀದನ ವಂಶದವನೂ ಆಗಿರುವ ಯೇಸು ಕ್ರಿಸ್ತನನ್ನು ಜ್ಞಾಪಕಮಾಡಿಕೋ; ಇದೇ ನಾನು ಸಾರುವ ಸುವಾರ್ತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು