ಮತ್ತಾಯ 1:21 - ಕನ್ನಡ ಸತ್ಯವೇದವು J.V. (BSI)21 ಆಕೆಯು ಒಬ್ಬ ಮಗನನ್ನು ಹಡೆಯುವಳು; ನೀನು ಆತನಿಗೆ ಯೇಸು ಎಂದು ಹೆಸರಿಡಬೇಕು; ಯಾಕಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ಕಾಯುವನು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆಕೆ ಒಬ್ಬ ಮಗನನ್ನು ಹೆರುವಳು. ನೀನು ಆ ಮಗುವಿಗೆ ಯೇಸು ಎಂದು ಹೆಸರಿಡುವೆ. ನೀನು ಆತನಿಗೆ ಆ ಹೆಸರನ್ನೇ ಇಡು; ಏಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತಿ ಎಕ್ ಝಿಲ್ಗ್ಯಾಕ್ ಜಲಮ್ ದಿತಾ, ತೆಕಾ ತಿಯಾ ‘ಜೆಜು’ ಮನುನ್ ನಾವ್ ಥವ್ಕ್ ಪಾಜೆ, ಕಶ್ಯಾಕ್ ಮಟ್ಲ್ಯಾರ್ ತೊ ಅಪ್ನಾಚ್ಯಾ ಲೊಕಾಕ್ನಿ ತೆಂಚ್ಯಾ ಪಾಪಾನಿತ್ನಾ ಸುಟ್ಕಾ ದಿತಾ”, ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |
ಅಧರ್ಮವನ್ನು ಕೊನೆಗಾಣಿಸುವದು, ಪಾಪಗಳನ್ನು ತೀರಿಸುವದು, ಅಪರಾಧವನ್ನು ನಿವಾರಿಸುವದು, ಸನಾತನ ಧರ್ಮವನ್ನು ಸ್ಥಾಪಿಸುವದು, ಕನಸನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವದು, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವದು, ಇವೆಲ್ಲಾ ನೆರವೇರುವದಕ್ಕೆ ಮೊದಲು ನಿನ್ನ ಜನಕ್ಕೂ ನಿನ್ನ ಪರಿಶುದ್ಧಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.