Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:1 - ಕನ್ನಡ ಸತ್ಯವೇದವು J.V. (BSI)

1 ಮತ್ತು ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತರಕ್ಕೆ ಕರೆದು ದೆವ್ವಗಳನ್ನು ಬಿಡಿಸುವದಕ್ಕೂ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುವದಕ್ಕೂ ಅವರಿಗೆ ಅಧಿಕಾರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ ದೆವ್ವಗಳನ್ನು ಬಿಡಿಸುವುದಕ್ಕೂ ಎಲ್ಲಾ ಬಗೆಯ ರೋಗಗಳನ್ನೂ ಎಲ್ಲಾ ರೀತಿಯ ಬೇನೆಗಳನ್ನೂ ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ದುರಾತ್ಮಗಳನ್ನು ಬಿಡಿಸುವುದಕ್ಕೂ ಎಲ್ಲಾ ತರದ ವ್ಯಾಧಿ ಮತ್ತು ಕಾಯಿಲೆಗಳನ್ನು ವಾಸಿಮಾಡುವುದಕ್ಕೂ ಅಧಿಕಾರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ತಮ್ಮ ಬಳಿಗೆ ಕರೆದು, ಅಶುದ್ಧಾತ್ಮಗಳನ್ನು ಓಡಿಸುವುದಕ್ಕೂ ಎಲ್ಲಾ ತರವಾದ ವ್ಯಾಧಿಯನ್ನೂ ರೋಗವನ್ನೂ ಸ್ವಸ್ಥಮಾಡುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜುನ್ ಅಪ್ನಾಚ್ಯಾ ಬಾರಾ ಶಿಸಾಕ್ನಿ ಎಕಾಕ್ಡೆ ಬಲ್ವುಲ್ಯಾನ್, ಅನಿ ತೆಂಕಾ ಗಿರೆ ಕಾಡ್ತಲೊ, ಅನಿ ಸಗ್ಳಿ ರೊಗಾ, ಅನಿ ದುಕ್ನಿ ಅರಾಮ್ ಕರ್‍ತಲೊ ಅದಿಕಾರ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:1
26 ತಿಳಿವುಗಳ ಹೋಲಿಕೆ  

ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವದೂ ನಿಮಗೆ ಕೇಡುಮಾಡುವದೇ ಇಲ್ಲ.


ಇಗೋ ನನ್ನ ತಂದೆಯು ವಾಗ್ದಾನಮಾಡಿದ್ದನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಹೊದಿಸುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರ್ರಿ ಎಂದು ಹೇಳಿದನು.


ಆದರೆ ಪವಿತ್ರಾತ್ಮ ನಿಮ್ಮ ಮೇಲೆ ಬರಲು ನೀವು ಬಲವನ್ನು ಹೊಂದಿ ಯೆರೂಸಲೇವಿುನಲ್ಲಿಯೂ ಎಲ್ಲಾ ಯೂದಾಯ ಸಮಾರ್ಯ ಸೀಮೆಗಳಲ್ಲಿಯೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರಬೇಕು ಅಂದನು.


ಯೋಹಾನನು - ಪರಲೋಕದಿಂದ ಅನುಗ್ರಹಿಸೋಣವಾದದ್ದನ್ನೇ ಹೊರತು ಮನುಷ್ಯನು ಹೆಚ್ಚೇನು ಹೊಂದಲಾರನು.


ಬೆಳಗಾದ ಮೇಲೆ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು ಅವರಿಗೆ ಅಪೊಸ್ತಲರೆಂತ ಹೆಸರಿಟ್ಟನು.


ಯಾಕಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರುನಿಲ್ಲುವದಕ್ಕೂ ಎದುರುಮಾತಾಡುವದಕ್ಕೂ ಆಗದಂಥ ಬಾಯನ್ನೂ ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ಆದರೆ ದೆವ್ವವು ಅವರಲ್ಲಿ ಇಬ್ಬರಿಗೆ - ಯೇಸುವಿನ ಗುರುತು ನನಗುಂಟು, ಪೌಲನನ್ನೂ ಬಲ್ಲೆನು, ನೀವಾದರೆ ಯಾರು? ಎಂದು ಹೇಳಿತು;


ನೀನು ಅವನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೆ ಅವನು ನಿತ್ಯಜೀವವನ್ನು ಕೊಡಬೇಕೆಂದು ಅವನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿಯಲ್ಲಾ.


ಅದಕ್ಕೆ ಯೇಸು - ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೋ? ನಿಮ್ಮಲ್ಲಿಯೂ ಒಬ್ಬನು ಸೈತಾನನ ಮಗನಾಗಿದ್ದಾನೆ ಅಂದನು.


ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.


ಪರಲೋಕದಲ್ಲಿ ಒಂದು ಮಹಾಲಕ್ಷಣವು ಕಾಣಿಸಿತು. ಅದೇನಂದರೆ, ಸೂರ್ಯನನ್ನು ಧರಿಸಿಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು;


ಆತನು ಇನ್ನೂ ಮಾತಾಡುತ್ತಿರಲು ಇಗೋ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು; ಮಹಾಯಾಜಕರು ಜನರ ಹಿರಿಯರು ಇವರ ಕಡೆಯಿಂದ ಬಹು ಜನರ ಗುಂಪು ಕತ್ತಿ ದೊಣ್ಣೆಗಳನ್ನು ಹಿಡುಕೊಂಡು ಅವನ ಸಂಗಡ ಬಂತು.


ಸಂಜೆಯಾದಾಗ ಆತನು ಹನ್ನೆರಡು ಮಂದಿ ಶಿಷ್ಯರ ಸಂಗಡ ಊಟಕ್ಕೆ ಕೂತುಕೊಂಡನು.


ಯೇಸು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವಾಗ ನನ್ನನ್ನು ಹಿಂಬಾಲಿಸಿರುವ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ತಿರುಗಾಡಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ, ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಯೇಸು ಎಲ್ಲಾ ಊರುಗಳನ್ನೂ ಹಳ್ಳಿಪಳ್ಳಿಗಳನ್ನೂ ಸುತ್ತಿಕೊಂಡು ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಆದದರಿಂದ ಬೆಳೆಯ ಯಜಮಾನನನ್ನು - ನಿನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ಬೇಡಿಕೊಳ್ಳಿರಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು