Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:16 - ಕನ್ನಡ ಸತ್ಯವೇದವು J.V. (BSI)

16 ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಹೊಗಿಸಿದಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ. ಆದದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಕೇಳಿರಿ! ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದ್ದರಿಂದ ನೀವು ಹಾವುಗಳಂತೆ ಸೂಕ್ಷ್ಮ ಬುದ್ದಿಯುಳ್ಳವರಾಗಿರಿ, ಪಾರಿವಾಳಗಳಂತೆ ಯಾವ ಹಾನಿಯನ್ನೂ ಮಾಡದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 “ಆಯ್ಕಾ! ಝುಲ್ ಕುತ್ರ್ಯಾಂಚ್ಯಾ ಮದ್ದಿ ಬಕ್ರ್ಯಾಕ್ನಿ ಧಾಡಲ್ಲ್ಯಾ ಸರ್ಕೆ ಮಿಯಾ ತುಮ್ಕಾ ಧಾಡ್ತಾ. ತುಮಿ ಸಾಪಾ ಸರ್ಕೆ ಉಶಾರ್ ಅನಿ ಪಾರಿವಾಳಾಂಚ್ಯಾ ಸರ್ಕೆ ಭೊಳೆ ಹೊವ್ನ್ ರ್‍ಹಾವಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:16
25 ತಿಳಿವುಗಳ ಹೋಲಿಕೆ  

ಹೋಗಿರಿ; ತೋಳಗಳ ನಡುವೆ ಕುರಿಮರಿಗಳನ್ನು ಹೊಗಿಸಿದಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ ನೋಡಿರಿ.


ಹೀಗೆ ನೀವು ನಿರ್ದೋಷಿಗಳೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.


ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.


ಸಮಯವನ್ನು ಸುಮ್ಮನೆ ಕಳಕೊಳ್ಳದೆ ಅದನ್ನು ಬೆಲೆಯುಳ್ಳದ್ದೆಂದು ಉಪಯೋಗಿಸಿ ಹೊರಗಿನವರ ಮುಂದೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.


ಯಾಕಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರುನಿಲ್ಲುವದಕ್ಕೂ ಎದುರುಮಾತಾಡುವದಕ್ಕೂ ಆಗದಂಥ ಬಾಯನ್ನೂ ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವದಿಲ್ಲ.


ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಮೋಸಹೋದಳೋ ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಪಾತಿವ್ರತ್ಯವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವುಂಟು.


ಸಕಲವಿಧವಾದ ಕೆಟ್ಟತನಕ್ಕೆ ದೂರವಾಗಿರಿ.


ಇದೇನೂ ಆಶ್ಚರ್ಯವಲ್ಲ; ಸೈತಾನನು ತಾನೇ ಪ್ರಕಾಶರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುವಾಗ


ಯೆಹೋವದೇವರು ಉಂಟುಮಾಡಿದ ಎಲ್ಲಾ ಭೂಜಂತುಗಳಲ್ಲಿ ಸರ್ಪವು ಯುಕ್ತಿಯುಳ್ಳದ್ದಾಗಿತ್ತು. ಅದು ಸ್ತ್ರೀಯ ಬಳಿಗೆ ಬಂದು - ಏನವ್ವಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ನೀವು ತಿನ್ನಬಾರದೆಂದು ದೇವರು ಅಪ್ಪಣೆಕೊಟ್ಟಿರುವದು ನಿಜವೋ ಎಂದು ಕೇಳಲು ಸ್ತ್ರೀಯು -


ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು, ದೇವರೂ ಸಾಕ್ಷಿ.


ಆದಕಾರಣ ನಾವು ನಿಮ್ಮ ಸುದ್ದಿಯನ್ನು ಕೇಳಿದ ದಿವಸದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲ ಆತ್ಮೀಯ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ನಾವು ಪಾರುಪತ್ಯಮಾಡುವ ಈ ದ್ರವ್ಯಸಂಚಯದ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದವಿರಬಾರದು.


ಯೆಹೋವದೇವರು ಸ್ತ್ರೀಯನ್ನು - ಇದೇನು ನೀನು ಮಾಡಿದ್ದು ಎಂದು ಕೇಳಲು ಸ್ತ್ರೀಯು - ಸರ್ಪವು ನನ್ನನ್ನು ವಂಚಿಸಿತು, ನಾನು ತಿಂದೆನು ಎಂದು ಉತ್ತರ ಕೊಟ್ಟಳು.


ಅಹೀಕಾಮನ ಮಗನಾದ ಗೆದಲ್ಯನು ಅವನಿಗೆ - ನೀನು ಹಾಗೆ ಮಾಡಲೇ ಕೂಡದು; ನೀನು ಇಷ್ಮಾಯೇಲನ ವಿಷಯವಾಗಿ ಹೇಳಿದ್ದು ಸುಳ್ಳು ಎಂದು ಉತ್ತರಕೊಟ್ಟನು.


ಎಫ್ರಾಯೀಮು ಬುದ್ಧಿವಿವೇಕಗಳಿಲ್ಲದ ಪಾರಿವಾಳದಂತಿದೆ; ಅದರ ಜನರು ಐಗುಪ್ತವನ್ನು ಕೂಗುತ್ತಾರೆ, ಅಶ್ಶೂರಕ್ಕೆ ಹೊರಡುತ್ತಾರೆ;


ಇಗೋ ನಿಮಗೆ ಮುಂದಾಗಿ ಹೇಳಿದ್ದೇನೆ.


ಹಾಗಾದರೆ ಯಜಮಾನನು ತನ್ನ ಮನೆಯವರಿಗೆ ಹೊತ್ತು ಹೊತ್ತಿಗೆ ಆಹಾರ ಕೊಡಲಿಕ್ಕೆ ಅವರ ಮೇಲಿಟ್ಟ ನಂಬಿಗಸ್ತನೂ ವಿವೇಕಿಯೂ ಆದಂಥ ಆಳು ಯಾರು?


ಅವರಲ್ಲಿ ಐದು ಮಂದಿ ಬುದ್ಧಿಯಿಲ್ಲದವರು, ಐದು ಮಂದಿ ಬುದ್ಧಿವಂತೆಯರು.


ಬುದ್ಧಿವಂತೆಯರು ತಮ್ಮ ಆರತಿಗಳ ಕೂಡ ಪಾತ್ರೆಗಳಲ್ಲಿ ಎಣ್ಣೆ ತಕ್ಕೊಂಡರು.


ನಮ್ಮ ಆರತಿಗಳು ಆರಿಹೋಗುತ್ತವೆ ಎಂದು ಹೇಳಿದರು. ಅದಕ್ಕೆ ಆ ಬುದ್ಧಿವಂತೆಯರು - ನಿಮಗೆ ಕೊಟ್ಟರೆ ನಮಗೂ ನಿಮಗೂ ಕೂಡ ಸಾಲದೆ ಹೋದೀತು; ನೀವು ಮಾರುವವರ ಬಳಿಗೆ ಹೋಗಿ ಕೊಂಡುಕೊಂಡರೆ ಒಳ್ಳೇದು ಅಂದರು.


ನಾನು ಜನರಿಗೆ - ಕತ್ತಿ ಬಿಲ್ಲು ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬೈಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಬೇಕೆಂದು ಆಜ್ಞಾಪಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು