Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:18 - ಕನ್ನಡ ಸತ್ಯವೇದವು J.V. (BSI)

18 ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದಕ್ಕೂ ಅರಸುಗಳ ಮುಂದಕ್ಕೂ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನನ್ನ ನಿಮಿತ್ತ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರುಗಳ ಮುಂದೆ ಎಳೆದೊಯ್ಯುವರು. ಅವರ ಹಾಗೂ ಪರಕೀಯರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಿಮ್ಮನ್ನು ಅಧಿಕಾರಿಗಳ ಸಮ್ಮುಖಕ್ಕೂ ಅರಸುಗಳ ಸಮ್ಮುಖಕ್ಕೂ ಕರೆದುಕೊಂಡು ಹೋಗುವರು. ನನ್ನ ನಿಮಿತ್ತ ಜನರು ನಿಮಗೆ ಹೀಗೆ ಮಾಡುವರು. ಆದರೆ ನೀವು ಆ ಅರಸುಗಳಿಗೂ ಅಧಿಕಾರಿಗಳಿಗೂ ಯಹೂದ್ಯರಲ್ಲದ ಜನರಿಗೂ ನನ್ನ ವಿಷಯವಾಗಿ ಹೇಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರ ಮುಂದೆ ಒಯ್ಯುವರು. ಹೀಗೆ ಅವರಿಗೂ ಯೆಹೂದ್ಯರಲ್ಲದವರಿಗೂ ನೀವು ಸಾಕ್ಷಿಗಳಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಾಜೆಸಾಟಿ ತುಮ್ಕಾ ಅದಿಕಾರ್‍ಯಾಂಚ್ಯಾ, ಅನಿ ರಾಜಾಂಚ್ಯಾ ಇದ್ರಾಕ್ ವೊಡುನ್ ಘೆವ್ನ್ ಜಾತ್ಯಾತ್, ಅಶೆ ಹೆ ಸಗ್ಳೆ ತೆಂಕಾ, ಅನಿ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ಸಾಕ್ಷಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:18
15 ತಿಳಿವುಗಳ ಹೋಲಿಕೆ  

ಆದರೆ ನಿಮ್ಮ ವಿಷಯದಲ್ಲಿ ನೋಡಿಕೊಳ್ಳಿರಿ. ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳಕೊಂಡುಹೋಗುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಸಾಕ್ಷಿಗಳಾಗಿ ನಿಲ್ಲಿಸುವರು. ಹೀಗೆ ಅವರಿಗೆ ಸಾಕ್ಷಿಯಾಗುವದು.


ಆಗ ಯೇಸು ಅವನಿಗೆ - ಯಾರಿಗೂ ಹೇಳಬೇಡ ನೋಡು; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇವಿುಸಿದ ಕಾಣಿಕೆಯನ್ನು ಕೊಡು; ಅದು ಜನರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.


ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದನಂತರ ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.


ಆತನು ಐದನೆಯ ಮುದ್ರೆಯನ್ನು ಒಡೆದಾಗ ದೇವರ ವಾಕ್ಯದ ನಿವಿುತ್ತವಾಗಿಯೂ ತಾವು ಹೇಳಿದ ಸಾಕ್ಷಿಯ ನಿವಿುತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ಕಂಡೆನು.


ನಿಮ್ಮ ಸಹೋದರನೂ ಯೇಸುವಿನ ನಿವಿುತ್ತ ಹಿಂಸೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ದ್ವೀಪದಲ್ಲಿದ್ದೆನು.


ಆದದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆಪಡದೆ ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಶ್ರಮೆಯನ್ನನುಭವಿಸು.


ಅರಸುಗಳ ಮುಂದೆಯೂ ನಿನ್ನ ಕಟ್ಟಳೆಗಳ ವಿಷಯದಲ್ಲಿ ಮಾತಾಡುವೆನು; ನಾಚಿಕೆಪಡುವದಿಲ್ಲ.


ಇದಲ್ಲದೆ ಜನರ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿ; ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಎಳಕೊಂಡು ಹೋಗುವರು; ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.


ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಹೇಗೆ ಮಾತಾಡಬೇಕು, ಏನು ಹೇಳಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಗಳಿಗೆಯಲ್ಲಿ ನಿಮಗೆ ಸೂಚನೆಯಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು