Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:2 - ಕನ್ನಡ ಸತ್ಯವೇದವು J.V. (BSI)

2 ಆತನು ಕಳುಹಿಸಿಕೊಟ್ಟ ಅಪೊಸ್ತಲರೆಂಬ ಹನ್ನೆರಡು ಮಂದಿಯ ಹೆಸರುಗಳು ಯಾವವಂದರೆ - ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನ, ಅವನ ತಮ್ಮನಾದ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ, ಅವನ ತಮ್ಮನಾದ ಯೋಹಾನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಈ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಯಾವುವೆಂದರೆ, ಮೊದಲನೆಯವನು ಪೇತ್ರನೆನಿಸಿಕೊಳ್ಳುವ ಸೀಮೋನನು, ಅವನ ತಮ್ಮ ಅಂದ್ರೆಯ, ಜೆಬೆದಾಯನ ಮಗ ಯಾಕೋಬ, ಅವನ ತಮ್ಮನಾದ ಯೋಹಾನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆ ಹನ್ನೆರಡುಮಂದಿ ಪ್ರೇಷಿತರ ಹೆಸರುಗಳು ಇವು; ಮೊದಲನೆಯವನು ಪೇತ್ರ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿವೆ: ಸೀಮೋನ (ಪೇತ್ರನೆಂದು ಕರೆಯುತ್ತಾರೆ) ಮತ್ತು ಇವನ ಸಹೋದರ ಅಂದ್ರೆಯ, ಜೆಬೆದಾಯನ ಮಗನಾದ ಯಾಕೋಬ, ಅವನ ಸಹೋದರ ಯೋಹಾನ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿದ್ದವು: ಮೊದಲನೆಯವನು, ಪೇತ್ರ ಎಂದು ಎನಿಸಿಕೊಂಡ ಸೀಮೋನ, ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಾಕೋಬ ಮತ್ತು ಅವನ ಸಹೋದರ ಯೋಹಾನ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಬಾರಾ ಜಾನಾ ಅಪೊಸ್ತಲಾಂಚಿ ನಾವಾ ಹಿ, ಸಿಮಾವ್ ಹೆಕಾ ಪೆದ್ರು ಮನ್ತ್ಯಾತ್, ಅನಿ ತೆಚೊ ಭಾವ್ ಅಂದ್ರು, ಜಾಕೊಬ್, ಅನಿ ತೆಚೊ ಭಾವ್ ಜುವಾಂವ್ ಹೆನಿ ಜೆಬೆದೆವಾಚಿ ಪೊರಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:2
44 ತಿಳಿವುಗಳ ಹೋಲಿಕೆ  

ಅವರು ಅಲ್ಲಿಗೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿಗೆ ಹೋದರು; ಯಾರಾರಂದರೆ - ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಯಾಕೋಬ, ಮತಾಭಿಮಾನಿ ಅನ್ನಿಸಿಕೊಂಡ ಸೀಮೋನ, ಯಾಕೋಬನ ಯೂದ, ಇವರೇ.


ಯೇಸು ಅಲ್ಲಿಂದ ಮುಂದೆ ಹೋಗಿ ಇನ್ನಿಬ್ಬರು ಅಣ್ಣತಮ್ಮಂದಿರನ್ನು ಅಂದರೆ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಇವರು ತಮ್ಮ ತಂದೆಯಾದ ಜೆಬೆದಾಯನ ಕೂಡ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಆತನು ಇವರನ್ನೂ ಕರೆದನು.


ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು; ಅಂದ್ರೆಯನೂ ಫಿಲಿಪ್ಪನೂ ಯೇಸುವಿಗೆ ಹೇಳಿದರು.


ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್‍ಪೇತ್ರನ ತಮ್ಮನಾದ ಅಂದ್ರೆಯನು ಆತನಿಗೆ -


ಸೀಮೋನನ ಪಾಲುಗಾರರಾಗಿದ್ದಂಥ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯಪಟ್ಟರು. ಯೇಸು ಸೀಮೋನನಿಗೆ - ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವವನಾಗಿರುವಿ ಎಂದು ಹೇಳಿದನು.


ಹೀಗಿರುವಲ್ಲಿ, ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ತಿರುಗಾಡುತ್ತಿರುವಾಗ ಅಣ್ಣತಮ್ಮಂದಿರಿಬ್ಬರು ಬಲೆಬೀಸುವದನ್ನು ಕಂಡನು; ಅವರು ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ತಮ್ಮನಾದ ಅಂದ್ರೆಯ. ಅವರು ಬೆಸ್ತರು, ಸಮುದ್ರದಲ್ಲಿ ಬಲೆಬೀಸುತ್ತಿದ್ದರು.


ಆದದರಿಂದ ದೇವರ ಜ್ಞಾನವು ಹೇಳಿದ್ದೇನಂದರೆ - ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲ್ಲುವರು; ಕೆಲವರನ್ನು ಹಿಂಸೆಪಡಿಸುವರು.


ನಿಮ್ಮ ಸಹೋದರನೂ ಯೇಸುವಿನ ನಿವಿುತ್ತ ಹಿಂಸೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ದ್ವೀಪದಲ್ಲಿದ್ದೆನು.


ಸಭೆಯ ಹಿರಿಯನು ದೇವರಾದುಕೊಂಡವರಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಬರೆಯುವದೇನಂದರೆ - ನಮ್ಮಲ್ಲಿ ನೆಲೆಗೊಂಡಿರುವಂಥ ಮತ್ತು ಸದಾಕಾಲವೂ ನಮ್ಮೊಂದಿಗಿರುವಂಥ ಸತ್ಯದ ನಿವಿುತ್ತ ನಾನು ನಿಮ್ಮನ್ನು ಸತ್ಯವಾಗಿ ಪ್ರೀತಿಸುತ್ತೇನೆ; ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ ನಿಮ್ಮನ್ನು ಪ್ರೀತಿಸುತ್ತಾರೆ.


ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸಿಮೆಯೋನ ಪೇತ್ರನು ನಮ್ಮ ದೇವರ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವದೇನಂದರೆ -


ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ ಗಲಾತ್ಯ ಕಪ್ಪದೋಕ್ಯ ಆಸ್ಯ ಬಿಥೂನ್ಯ ಎಂಬ ಸೀಮೆಗಳಲ್ಲಿ ಚದರಿರುವಂಥ ಪ್ರವಾಸಿಗಳಾದ ದೇವಜನರಿಗೆ ಅಂದರೆ -


ಆದದರಿಂದ ದೇವಜನರಾದ ಸಹೋದರರೇ, ಪರಲೋಕಸ್ವಾಸ್ಥ್ಯಕ್ಕಾಗಿ ನನ್ನೊಂದಿಗೆ ಕರೆಯಲ್ಪಟ್ಟವರೇ, ನಾವು ಪ್ರತಿಜ್ಞೆಮಾಡಿ ಒಪ್ಪಿಕೊಂಡಿರುವ ದೇವಪ್ರೇಷಿತನೂ ಮಹಾಯಾಜಕನೂ ಆಗಿರುವ ಯೇಸುವನ್ನು ಲಕ್ಷ್ಯವಿಟ್ಟು ಯೋಚಿಸಿರಿ.


ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸೌವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.


ತರುವಾಯ ಆತನು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡನು.


ಯೋಹಾನನ ಅಣ್ಣನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು.


ಒಂದಾನೊಂದು ದಿವಸ ಪೇತ್ರ ಯೋಹಾನರು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯ ತಕ್ಕ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋಗುತ್ತಿರಲು ಹುಟ್ಟುಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಯಾರೋ ಹೊತ್ತುಕೊಂಡು ಬಂದರು.


ಆಮೇಲೆ ಅವರಿಗೋಸ್ಕರ ಚೀಟುಹಾಕಿದರು. ಚೀಟು ಮತ್ತೀಯನಿಗೆ ಬಂದದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರ ಸಂಗಡ ಸೇರಿ ಎಣಿಸಲ್ಪಟ್ಟನು.


ಈ ಸಂಗತಿಗಳನ್ನು ಬರೆದು ಇವುಗಳ ವಿಷಯವಾಗಿ ಸಾಕ್ಷಿ ಹೇಳುವ ಶಿಷ್ಯನು ಇವನೇ. ಇವನ ಸಾಕ್ಷಿ ಸತ್ಯವೆಂದು ನಾವು ಬಲ್ಲೆವು.


ಪೇತ್ರನು ತಿರುಗಿಕೊಂಡು ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಹಿಂದೆ ಬರುವದನ್ನು ಕಂಡನು. ಆ ಶಿಷ್ಯನು ಊಟದಲ್ಲಿ ಯೇಸುವಿನ ಎದೆಯ ಕಡೆಗೆ ಬಾಗಿ - ಸ್ವಾಮೀ, ನಿನ್ನನ್ನು ಹಿಡುಕೊಡುವವನು ಯಾರು ಎಂದು ಕೇಳಿದವನೇ.


ತನ್ನನ್ನು ತೋರಿಸಿಕೊಂಡ ರೀತಿ ಯಾವದಂದರೆ - ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಕುಮಾರರೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿದ್ದರು.


ಆಕೆ ಸೀಮೋನ ಪೇತ್ರನ ಬಳಿಗೂ ಯೇಸುವಿಗೆ ಪ್ರಿಯನಾಗಿದ್ದ ಆ ಮತ್ತೊಬ್ಬ ಶಿಷ್ಯನ ಬಳಿಗೂ ಓಡಿ ಬಂದು ಅವರಿಗೆ - ಸ್ವಾವಿುಯನ್ನು ಸಮಾಧಿಯಿಂದ ತೆಗೆದುಕೊಂಡು ಹೋಗಿ ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು ಹೇಳಿದಳು.


ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬನು ಆತನ ಎದೆಯ ಹತ್ತರ ಒರಗಿಕೊಂಡಿದ್ದನು;


ಗಳಿಗೆ ಬಂದಾಗ ಆತನು ತನ್ನ ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಊಟಕ್ಕೆ ಕೂತುಕೊಂಡನು.


ಯೇಸು ಪೇತ್ರನಿಗೂ ಯೋಹಾನನಿಗೂ - ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧಮಾಡಿರಿ ಎಂದು ಹೇಳಿ ಅವರನ್ನು ಕಳುಹಿಸಿದನು.


ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಲು ಆತನು ಅವರನ್ನು ಬೇತ್ಸಾಯಿದವೆಂಬ ಊರಿಗೆ ವಿಂಗಡವಾಗಿ ಕರಕೊಂಡು ಹೋದನು.


ಬಳಿಕ ಆತನು ಎಣ್ಣೇಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು -


ಆಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಬಂದರು.


ಪೇತ್ರನನ್ನೂ ಜೆಬೆದಾಯನ ಇಬ್ಬರು ಮಕ್ಕಳನ್ನೂ ಕರಕೊಂಡು ಹೋಗಿ ದುಃಖಪಟ್ಟು ಮನಗುಂದಿದವನಾದನು.


ಆಗ ಜೆಬೆದಾಯನ ಮಕ್ಕಳ ತಾಯಿ ಆತನಿಂದ ಏನೋ ಒಂದು ಬೇಡಿಕೊಳ್ಳಬೇಕೆಂದು ತನ್ನ ಮಕ್ಕಳನ್ನು ಕರಕೊಂಡು ಬಂದು ಆತನಿಗೆ ಅಡ್ಡಬಿದ್ದಳು.


ಆರು ದಿವಸಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಇವನ ತಮ್ಮನಾದ ಯೋಹಾನನನ್ನೂ ಮಾತ್ರ ವಿಂಗಡವಾಗಿ ಕರಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.


ಈ ಸಂಗತಿಗಳನ್ನು ಕೇಳಿ ಕಂಡವನು ಯೋಹಾನನೆಂಬ ನಾನೇ. ನಾನು ಕೇಳಿ ಕಂಡಾಗ ಈ ಸಂಗತಿಗಳನ್ನು ನನಗೆ ತೋರಿಸಿದ ದೇವದೂತನಿಗೆ ನಮಸ್ಕಾರಮಾಡಬೇಕೆಂದು ಅವನ ಪಾದಕ್ಕೆ ಬಿದ್ದೆನು.


ಯೇಸು ಕ್ರಿಸ್ತನ ಪ್ರಕಟನೆಯು. ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ಸೂಚಿಸಿದನು.


ಸಭೆಯ ಹಿರಿಯನು ತಾನು ಸತ್ಯವಾಗಿ ಪ್ರೀತಿಸುವ ಪ್ರಿಯ ಗಾಯನಿಗೆ ಬರೆಯುವದೇನಂದರೆ -


ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.


ಇತ್ತಲಾಗಿ ಅಪೊಸ್ತಲರು ಆತನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಎಲ್ಲಾ ಆತನಿಗೆ ತಿಳಿಸಲು ಆತನು ಅವರಿಗೆ -


ಯೇಸು ಇದನ್ನು ನೋಡಿ ತನ್ನ ಹನ್ನೆರಡು ಮಂದಿಯನ್ನು - ನೀವು ಸಹ ಹೋಗಬೇಕೆಂದಿದ್ದೀರಾ? ಎಂದು ಕೇಳಿದ್ದಕ್ಕೆ ಸೀಮೋನ್‍ಪೇತ್ರನು -


ಅದಕ್ಕೆ ಯೇಸು - ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ತೆಗೆದುಕೊಂಡೆನಲ್ಲವೋ? ನಿಮ್ಮಲ್ಲಿಯೂ ಒಬ್ಬನು ಸೈತಾನನ ಮಗನಾಗಿದ್ದಾನೆ ಅಂದನು.


ಈ ಮಾತಿನಿಂದ ಆತನು ಸೀಮೋನನ ಮಗನಾದ ಇಸ್ಕರಿಯೋತ ಯೂದನನ್ನು ಸೂಚಿಸಿದನು. ಇವನು ಆ ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದು ಮುಂದೆ ಆತನನ್ನು ಹಿಡುಕೊಡುವವನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು