Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:23 - ಕನ್ನಡ ಸತ್ಯವೇದವು J.V. (BSI)

23 ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳ ಸಂಚಾರವನ್ನು ತೀರಿಸಿರುವದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಒಂದು ಊರಿನಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ, ಮತ್ತೊಂದು ಊರಿನಲ್ಲಿ ಆಶ್ರಯ ಪಡೆಯಿರಿ. ನರಪುತ್ರನು ಬರುವಷ್ಟರಲ್ಲಿ ನೀವು ಇಸ್ರಯೇಲ್ ಜನರ ಊರುಗಳನ್ನೆಲ್ಲಾ ಸುತ್ತಿ ಮುಗಿಸಿರಲಾರಿರಿ; ಇದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಒಂದು ಸ್ಥಳದಲ್ಲಿ ನಿಮಗೆ ಹಿಂಸೆಯಾದರೆ ಇನ್ನೊಂದು ಸ್ಥಳಕ್ಕೆ ಓಡಿಹೋಗಿರಿ. ಮನುಷ್ಯಪುತ್ರನು ಬರುವಷ್ಟರಲ್ಲಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 “ಎಕ್ ಶಾರಾತ್ ಲೊಕಾನಿ ತುಮ್ಕಾ ತರಾಸ್ ದಿಲ್ಯಾರ್, ದುಸ್ರ್ಯಾ ಶಾರಾಕ್ ಪಳುನ್ ಜಾವಾ, ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಮಾನ್ಸಾಚೊ ಲೆಕ್ ಯೆಯ್ ಸಗೊಳ್ ಇಸ್ರಾಯೆಲಾತ್ಲ್ಯಾ ಸಗ್ಳ್ಯಾ ಶಾರಾತ್ನಿ ತುಮಿ ಕರ್‍ತಲೆ ತುಮ್ಚೆ ಕಾಮ್ ಕರುನ್ ಸರಿನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:23
29 ತಿಳಿವುಗಳ ಹೋಲಿಕೆ  

ನಿಮಗೆ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತವರೊಳಗೆ ಕೆಲವರು, ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವ ತನಕ ಮರಣಹೊಂದುವದಿಲ್ಲ ಅಂದನು.


ಕೂಡಲೇ ಸಹೋದರರು ರಾತ್ರಿಯಲ್ಲಿ ಪೌಲ ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.


ಇದನ್ನು ಹೇಳಿ ನಿದ್ರೆಹೋದನು. ಸೌಲನು ಅವನ ಕೊಲೆಗೆ ಸಮ್ಮತಿಸುವವನಾಗಿದ್ದನು. ಆ ದಿವಸದಲ್ಲಿ ಯೆರೂಸಲೇವಿುನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರು ಯೂದಾಯ ಸಮಾರ್ಯ ಸೀಮೆಗಳಲ್ಲಿ ಚದರಿಹೋದರು.


ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವದನ್ನು ಕಾಣುವರು.


ಆಗ ಮನುಷ್ಯಕುಮಾರನು ಬಲದಿಂದಲೂ ಬಹುಮಹಿಮೆಯಿಂದಲೂ ಮೇಘದಲ್ಲಿ ಬರುವದನ್ನು ಕಾಣುವರು.


ಹೀಗಿದ್ದರೂ ಮನುಷ್ಯಕುಮಾರನು ಬಂದಾಗ ಭೂವಿುಯ ಮೇಲೆ ನಂಬಿಕೆಯನ್ನು ಕಾಣುವನೋ? ಅಂದನು.


ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರಮಾಡುತ್ತಿದ್ದನು; ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದ್ದದರಿಂದ ಆತನಿಗೆ ಯೂದಾಯದಲ್ಲಿ ಸಂಚಾರಮಾಡುವ ಮನಸ್ಸಿರಲಿಲ್ಲ.


ನೀನೇ ಹೇಳಿದ್ದೀ; ಇದಲ್ಲದೆ ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳ ಮೇಲೆ ಕುಳಿತು ಬರುವದನ್ನೂ ಕಾಣುವಿರಿ ಎಂದು ನಿಮಗೆ ಹೇಳುತ್ತೇನೆ ಅಂದನು.


ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವದು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವದನ್ನು ಕಾಣುವರು.


ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.


ಆದಕಾರಣ ಆ ದಿನವಾದರೂ ಗಳಿಗೆಯಾದರೂ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರವಾಗಿರ್ರಿ.


ಆದರೆ ಆ ಕೆಟ್ಟ ಆಳು - ನನ್ನ ಯಜಮಾನನು ತಡಮಾಡುತ್ತಾನೆ ಅಂತ ತನ್ನ ಮನಸ್ಸಿನಲ್ಲಿ ಅಂದುಕೊಂಡು


ಹೇಗೆ ವಿುಂಚು ಮೂಡಣದಲ್ಲಿ ಹುಟ್ಟಿ ಪಡುವಣದವರೆಗೂ ಕಾಣಿಸುತ್ತದೋ ಹಾಗೆಯೇ ಮನುಷ್ಯಕುಮಾರನ ಪ್ರತ್ಯಕ್ಷತೆಯು ಇರುವದು.


ಆದದರಿಂದ ನೋಡಿರಿ, ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ; ಅವರಲ್ಲಿ ಕೆಲವರನ್ನು ಕೊಲ್ಲುವಿರಿ, ಶಿಲುಬೆಗೆ ಹಾಕುವಿರಿ; ಕೆಲವರನ್ನು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಊರಿಂದ ಊರಿಗೆ ಅಟ್ಟಿಕೊಂಡು ಹೋಗುವಿರಿ.


ಯೋಹಾನನು ಸೆರೆಗೆ ಬಿದ್ದನೆಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟುಹೋದನು.


ಅವರು ಹೋದ ಮೇಲೆ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು - ನೀನು ಎದ್ದು ಈ ಕೂಸನ್ನೂ ಇದರ ತಾಯಿಯನ್ನೂ ಕರಕೊಂಡು ಐಗುಪ್ತದೇಶಕ್ಕೆ ಓಡಿಹೋಗಿ ನಾನು ನಿನಗೆ ಹೇಳುವ ತನಕ ಅಲ್ಲೇ ಇರು; ಹೆರೋದನು ಈ ಕೂಸನ್ನು ಕೊಲ್ಲಬೇಕೆಂದು ಅದನ್ನು ಹುಡುಕುತ್ತಿರುವನು ಅಂದನು.


ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಕೂಡ ಕರೆಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.


ಅರಸನಾದ ಯೆಹೋಯಾಕೀಮನೂ ಅವನ ಎಲ್ಲಾ ಪ್ರಸಿದ್ಧ ಶೂರರೂ ಸರದಾರರೂ ಇವನ ಮಾತುಗಳನ್ನು ಕೇಳಿದಾಗ ಅರಸನು ಇವನನ್ನು ಕೊಂದುಹಾಕಲು ಮನಮಾಡಿದನು; ಆದರೆ ಊರೀಯನು ಆ ಸುದ್ದಿಯನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತವನ್ನು ಸೇರಿಕೊಂಡನು.


ಮನುಷ್ಯಕುಮಾರನು ತನ್ನ ತಂದೆಯ ಪ್ರಭಾವದೊಡನೆ ತನ್ನ ದೂತರ ಸಮೇತವಾಗಿ ಬರುವನು; ಆವಾಗ ಆತನು ಒಬ್ಬೊಬ್ಬನಿಗೆ ಅವನವನ ನಡತೆಗೆ ತಕ್ಕ ಫಲವನ್ನು ಕೊಡುವನು.


ಅದೆಲ್ಲಾ ಈ ಸಂತತಿಯವರ ಮೇಲೆ ಬರುವದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು