ಮತ್ತಾಯ 10:25 - ಕನ್ನಡ ಸತ್ಯವೇದವು J.V. (BSI)25 ಗುರುವಿನಂತೆ ಆಗುವದು ಶಿಷ್ಯನಿಗೆ ಸಾಕು, ಧಣಿಯಂತೆ ಆಗುವದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟ ಮೇಲೆ ಆತನ ಮನೆಯವರನ್ನು ಏನಂದಾರು? ಆದರೂ ಅವರಿಗೆ ಹೆದರಬೇಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಗುರುವಿನಂತೆ ಆಗುವುದು ಶಿಷ್ಯನಿಗೆ ಸಾಕು, ಒಡೆಯನಂತೆ ಆಗುವುದು ಆಳಿಗೆ ಸಾಕು. ಅವರು ಮನೆಯ ಯಜಮಾನನಿಗೆ ಬೆಲ್ಜೆಬೂಲನೆಂದು ಹೆಸರಿಟ್ಟು ಕರೆದ ಮೇಲೆ ಆತನ ಮನೆಯವರನ್ನು ಇನ್ನೆಷ್ಟು ಅವಹೇಳನವಾಗಿ ಕರೆದಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’ ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಶಿಷ್ಯನು ತನ್ನ ಗುರುವಿನಂತಾದರೆ ಸಾಕು. ಆಳು ತನ್ನ ದಣಿಯಂತಾದರೆ ಸಾಕು. ಕುಟುಂಬದ ಹಿರಿಯನನ್ನೇ ಬೆಲ್ಜೆಬೂಲ (ದೆವ್ವ) ಎಂದು ಕರೆದರೆ, ಆ ಕುಟುಂಬದ ಇತರರನ್ನು ಮತ್ತಷ್ಟು ಕೆಟ್ಟ ಹೆಸರಿನಿಂದ ಕರೆಯುವುದಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಶಿಷ್ಯನು ತನ್ನ ಗುರುವಿನಂತೆಯೂ ದಾಸನು ತನ್ನ ಯಜಮಾನನಂತೆಯೂ ಇದ್ದರೆ ಸಾಕು. ಮನೆಯ ಯಜಮಾನನನ್ನೇ ಅವರು, ‘ಬೆಲ್ಜೆಬೂಲನು’ ಎಂದು ಕರೆದರೆ, ಯಜಮಾನನ ಮನೆಯವರನ್ನು ಇನ್ನೂ ಎಷ್ಟೋ ಕೆಟ್ಟದ್ದಾಗಿ ಕರೆಯುವರಲ್ಲವೇ! ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಖರೆ ಎಕ್ ಶಿಕ್ತಲ್ಯಾಕ್ ಬರೆ ಕರುನ್ ಶಿಕುನ್ ಮಾಸ್ತರಾ ಸರ್ಕೊ ಹೊವ್ಕ್ ಹೊತಾ, ಅನಿ ಎಕ್ ಸೆವಕಾಕ್ ಧನಿಯಾ ಸರ್ಕೊ ಹೊವ್ಕ್ ಹೊತಾ. ಘರಾಚ್ಯಾ ವಡ್ಲಾಕುಚ್, ಗಿರ್‍ಯಾಚೊ ಮುಖಂಡ್ ಬೆಎಲ್ಜೆಬುಲ್, ಮನುನ್ ಬಲ್ವುಲ್ಯಾರ್, ಘರಾತ್ಲ್ಯಾ ಹುರಲ್ಲ್ಯಾ ಲೊಕಾಕ್ನಿ ಕವ್ಡೆ ಬುರ್ಶ್ಯಾ ನಾವಾನ್ ಬಲ್ವುಲ್ಯಾತ್ ಅಸಿಲ್!” ಅಧ್ಯಾಯವನ್ನು ನೋಡಿ |