Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:26 - ಕನ್ನಡ ಸತ್ಯವೇದವು J.V. (BSI)

26 ಮರೆಯಾಗಿರುವ ಯಾವದೂ ವ್ಯಕ್ತವಾಗದೆ ಇರುವದಿಲ್ಲ; ಹೊರಪಡದ ರಹಸ್ಯವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೂ ಅವರಿಗೆ ಹೆದರಬೇಡಿರಿ. ಮರೆಯಾಗಿರುವ ಯಾವುದೂ ವ್ಯಕ್ತವಾಗದೆ ಇರುವುದಿಲ್ಲ; ಬೆಳಕಿಗೆ ಬಾರದ ರಹಸ್ಯವು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 “ಜನರಿಗೆ ಭಯಪಡಬೇಡಿ. ಮುಚ್ಚುಮರೆ ಆಗಿರುವುದೆಲ್ಲ ಬಟ್ಟಬಯಲಾಗುವುದು. ಗುಟ್ಟಾಗಿ ಇರುವುದೆಲ್ಲ ರಟ್ಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಆದಕಾರಣ ಆ ಜನರಿಗೆ ಹೆದರಬೇಡಿ. ಮರೆಯಾಗಿರುವ ಪ್ರತಿಯೊಂದೂ ಬಹಿರಂಗವಾಗುವುದು. ಗುಪ್ತವಾಗಿರುವ ಪ್ರತಿ ಸಂಗತಿಯು ಬಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 “ಆದ್ದರಿಂದ ಅವರಿಗೆ ಹೆದರಬೇಡಿರಿ, ಪ್ರಕಟಗೊಳ್ಳದಂತೆ ಯಾವುದೂ ಮುಚ್ಚಿಡಲಾಗುವುದಿಲ್ಲ, ತಿಳಿಯಲಾಗದಂತೆ ಯಾವುದೂ ಗುಪ್ತವಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 “ತೆಚೆಸಾಟ್ನಿ ಮಾನ್ಸಾಕ್ನಿ ತುಮಿ ಭಿಂವ್‍ನಕಾಶಿ, ಜೆ ಕಾಯ್ ಧಾಪುನ್ ಥವಲ್ಲೆ ಹಾಯ್ ತೆ ಉಗ್ಡುನ್ ಹೊತಾ, ಅನಿ ಘುಟಾನ್ ಹೊತ್ತೆ ಸಗ್ಳೆ ಸಗ್ಳ್ಯಾಕ್ನಿ ಕಳ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:26
22 ತಿಳಿವುಗಳ ಹೋಲಿಕೆ  

ಪ್ರಕಾಶಕ್ಕೆ ಬಾರದ ಯಾವ ರಹಸ್ಯವೂ ಇಲ್ಲ; ಮತ್ತು ಗೊತ್ತಾಗದೆ ಬೈಲಿಗೆ ಬಾರದೆ ಇರುವಂಥ ಗುಟ್ಟು ಒಂದೂ ಇಲ್ಲ.


ಅವರಿಗೆ ಅಂಜಬೇಡ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು ಎಂದು ಹೇಳಿದನು.


ಯಾವದಾಗಲಿ ಪ್ರಕಾಶಕ್ಕೆ ಬರಬೇಕೇ ಹೊರತು ರಹಸ್ಯವಾಗಿರುವದಿಲ್ಲ; ಯಾವದಾಗಲಿ ಬೈಲಿಗೆ ಬರಬೇಕೇ ಹೊರತು ಗುಟ್ಟಾಗಿರುವದಿಲ್ಲ.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ಇದಲ್ಲದೆ ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾರದವರಿಗೆ ಹೆದರಬೇಡಿರಿ, ಆತ್ಮ ದೇಹ ಎರಡನ್ನೂ ಕೂಡ ನರಕದಲ್ಲಿ ಹಾಕಿ ನಾಶಮಾಡಬಲ್ಲಾತನಿಗೇ ಹೆದರಿರಿ.


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಕ್ರಿವಿುಪ್ರಾಯವಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾವಿುಯು ನಿನಗೆ ವಿಮೋಚಕನು ಎಂದು ಯೆಹೋವನು ಅನ್ನುತ್ತಾನೆ.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಶಿಷ್ಟನು ಸಿಂಹದಂತೆ ಧ್ಯೆರ್ಯದಿಂದಿರುವನು.


ಒಂದು ವೇಳೆ ನೀತಿಯ ನಿವಿುತ್ತವೇ ಬಾಧೆಪಟ್ಟರೆ ನೀವು ಧನ್ಯರೇ.


ನರಪುತ್ರನೇ, ನೀನು ಮುಳ್ಳುಕೊಂಪೆಗಲಿಗೆ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯದಲ್ಲಿದ್ದರೂ ಅವರಿಗೆ ಭಯಪಡಬೇಡ, ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿವಂಶದವರು; ಅವರ ಬಿರುನುಡಿಗೆ ದಿಗಿಲುಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು.


ಮನುಷ್ಯನ ಭಯ ಉರುಲು; ಯೆಹೋವನ ಭರವಸ ಉದ್ಧಾರ.


ಅದಕ್ಕೆ ಪೇತ್ರ ಯೋಹಾನರು ಅವರಿಗೆ - ದೇವರ ಮಾತನ್ನು ಕೇಳುವದಕ್ಕಿಂತಲೂ ನಿಮ್ಮ ಮಾತನ್ನು ಕೇಳುವದು ದೇವರ ಮುಂದೆ ನ್ಯಾಯವೋ ಏನು? ನೀವೇ ತೀರ್ಪುಮಾಡಿಕೊಳ್ಳಿರಿ;


ಆದರೆ ಪವಿತ್ರಾತ್ಮ ನಿಮ್ಮ ಮೇಲೆ ಬರಲು ನೀವು ಬಲವನ್ನು ಹೊಂದಿ ಯೆರೂಸಲೇವಿುನಲ್ಲಿಯೂ ಎಲ್ಲಾ ಯೂದಾಯ ಸಮಾರ್ಯ ಸೀಮೆಗಳಲ್ಲಿಯೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರಬೇಕು ಅಂದನು.


ಪೇತ್ರ ಯೋಹಾನರು ಧೈರ್ಯದಿಂದ ಮಾತಾಡುವದನ್ನು ಆ ಸಭಿಕರು ನೋಡಿ ಅವರು ಶಾಸ್ತ್ರಾಭ್ಯಾಸ ಮಾಡದ ಸಾಧಾರಣರೆಂದು ತಿಳಿದು ಆಶ್ಚರ್ಯಪಟ್ಟರು.


ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.


ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು; ವಕ್ರಮಾರ್ಗಿಯು ಬೈಲಿಗೆ ಬೀಳುವನು.


ಒಳ್ಳೇದಾಗಲಿ ಕೆಟ್ಟದಾಗಲಿ ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸುವ ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು