Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:27 - ಕನ್ನಡ ಸತ್ಯವೇದವು J.V. (BSI)

27 ನಾನು ಕತ್ತಲಲ್ಲಿ ನಿಮಗೆ ಹೇಳುವದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರಪಡಿಸಿರಿ, ಕಿವಿಮಾತಾಗಿ ಕೇಳಿದ್ದನ್ನು ಮನೆಮಾಳಿಗೆಯ ಮೇಲೆ ನಿಂತು ಸಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಾನು ಕತ್ತಲೆಯಲ್ಲಿ (ರಹಸ್ಯವಾಗಿ) ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದೇನೆ. ಆದರೆ ನೀವು ಈ ಸಂಗತಿಗಳನ್ನು ಬೆಳಕಿನಲ್ಲಿ ಹೇಳಬೇಕೆಂಬುದು ನನ್ನ ಇಷ್ಟ. ನಾನು ಈ ವಿಷಯಗಳನ್ನು ನಿಮಗೆ ಮೆಲ್ಲಗೆ ಹೇಳುತ್ತಿದ್ದೇನೆ. ಆದರೆ ನೀವು ಈ ವಿಷಯಗಳನ್ನು ಜನರಿಗೆಲ್ಲ ಗಟ್ಟಿಯಾಗಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಾನು ನಿಮಗೆ ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ. ನೀವು ಕಿವಿಯಲ್ಲಿ ಕೇಳುವುದನ್ನು ಮಾಳಿಗೆಯ ಮೇಲೆ ಸಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಿಯಾ ಕಾಯ್ ಕಾಳ್ಕಾತ್ ಸಾಂಗುಕ್ ಲಾಗ್ಲಾ, ತೆ ತುಮಿ ದಿಸಾಚ್ಯಾ ಮೊಟ್ಯಾ ಉಜ್ವೊಡಾತ್ ಸಾಂಗುಕ್ ಪಾಜೆ, ಅನಿ ಜೆ ಕಾಯ್ ತುಮಿ ಕಡೆಕ್ ಎಗ್ಳೆಚ್ ಹೊತ್ತ್ಯಾ ತನ್ನಾ ಆಯ್ಕುಲ್ಯಾಶಿ ತೆ ತುಮಿ ಹುಜರಾತಿ ಸಗ್ಳ್ಯಾ ಲೊಕಾಕ್ನಿ ಇದ್ರಾಕ್ ಸಾಂಗುಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:27
16 ತಿಳಿವುಗಳ ಹೋಲಿಕೆ  

ನೀವು ಹೋಗಿ ದೇವಾಲಯದಲ್ಲಿ ನಿಂತುಕೊಂಡು ಈ ಸಜ್ಜೀವವಿಷಯವಾದ ಮಾತುಗಳನ್ನೆಲ್ಲಾ ಜನರಿಗೆ ಹೇಳಿರಿ ಅಂದನು.


ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ನಡಿಸಿಕೊಂಡು ಹೋಗಿ ಸಕಲ ವಿಷಯದಲ್ಲಿಯೂ ಸತ್ಯಕ್ಕೆ ಸೇರಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತಾಡದೆ ಕೇಳಿದ ಮಾತುಗಳನ್ನೇ ಆಡುವನು; ಮತ್ತು ಮುಂದಾಗುವ ಸಂಗತಿಗಳನ್ನು ನಿಮಗೆ ತಿಳಿಸುವನು.


ನೀವು ಧೈರ್ಯಗೆಟ್ಟು ಹಿಂಜರಿಯಬಾರದೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.


ನೀವು ಈ ಹೆಸರನ್ನು ಎತ್ತಿ ಉಪದೇಶ ಮಾಡಲೇಬಾರದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆಕೊಟ್ಟೆವಲ್ಲಾ; ಆದರೂ ನೀವು ಯೆರೂಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿದಿರಿ, ಮತ್ತು ಆ ಮನುಷ್ಯನನ್ನು ಕೊಲ್ಲಿಸಿದ್ದಕ್ಕೆ ನಮ್ಮನ್ನು ಹೊಣೆಮಾಡಬೇಕೆಂದಿದ್ದೀರಿ ಎಂದು ಹೇಳಿದ್ದಕ್ಕೆ


ಅದಕ್ಕೆ ಶಿಷ್ಯರು - ನೀನು ಹೇಳುವ ಸಂಗತಿಯನ್ನು ಈಗ ಗೂಢಾರ್ಥವಾಗಿ ಹೇಳದೆ ಸ್ಪಷ್ಟವಾಗಿ ಮಾತಾಡುತ್ತೀಯಲ್ಲಾ;


ಈ ಸಂಗತಿಗಳನ್ನು ಗೂಢಾರ್ಥವಾಗಿ ನಿಮಗೆ ಹೇಳಿದ್ದೇನೆ; ಆದರೆ ಇನ್ನು ಮೇಲೆ ಸಾಮ್ಯರೂಪವಾಗಿ ನಿಮ್ಮ ಸಂಗಡ ಮಾತಾಡದೆ ತಂದೆಯ ವಿಷಯದಲ್ಲಿ ಸ್ಪಷ್ಟವಾಗಿ ತಿಳಿಸುವ ಕಾಲ ಬರುತ್ತದೆ.


ಆತನು - ದೇವರ ರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ, ಉಳಿದವರಿಗೆ ಕಣ್ಣಿದ್ದರೂ ನೋಡದಂತೆಯೂ, ಕಿವಿಯಿದ್ದರೂ ತಿಳುಕೊಳ್ಳದಂತೆಯೂ ಸಾಮ್ಯರೂಪವಾಗಿ ಹೇಳಲಾಗುತ್ತದೆ.


ಆದದರಿಂದ ನಾವು ಇಂಥ ಭರವಸವುಳ್ಳವರಾಗಿದ್ದು ಧಾರಾಳವಾಗಿ ಮಾತಾಡುತ್ತೇವೆ.


ಆದದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳ ಸಂಗಡಲೂ ಪ್ರತಿದಿನ ಪೇಟೆಯಲ್ಲಿ ಕಂಡುಬಂದವರ ಸಂಗಡಲೂ ವಾದಿಸಿದನು.


ದಿವ್ಯದರ್ಶನದ ತಗ್ಗಿನ ವಿಷಯವಾದ ದೈವೋಕ್ತಿ. ನಿನಗೆ ಏನಾಯಿತು? ನಿನ್ನ ಜನರೆಲ್ಲರೂ ಮಾಳಿಗೆಗಳನ್ನು ಹತ್ತಿದ್ದೇಕೆ?


ಮಾಳಿಗೆಯ ಮೇಲೆ ಇರುವವನು ತನ್ನ ಮನೆಯೊಳಗಿರುವದನ್ನು ತೆಗೆದುಕೊಳ್ಳುವದಕ್ಕೆ ಇಳಿಯದೆ,


ಹೀಗಿರುವದರಿಂದ ನೀವು ಕತ್ತಲಲ್ಲಿ ಹೇಳಿದಂಥದು ಬೆಳಕಿನಲ್ಲಿ ಕೇಳಲಾಗುವದು; ಮತ್ತು ನೀವು ಕೋಣೆಗಳೊಳಗೆ ಕಿವಿಮಾತು ಆಡಿದ್ದು ಮಾಳಿಗೆಗಳ ಮೇಲೆ ಸಾರಲಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು