ಮತ್ತಾಯ 10:32 - ಕನ್ನಡ ಸತ್ಯವೇದವು J.V. (BSI)32 ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 “ಹಾಗಾದರೆ ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುವನೋ, ನಾನು ಸಹ ಅವನನ್ನು ನನ್ನವನೆಂದು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 “ಜನರ ಮುಂದೆ, ತಾನು ನನ್ನವನೆಂದು ಬಹಿರಂಗವಾಗಿ ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನೆಂದು ಒಪ್ಪಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ಒಬ್ಬನು ಬೇರೆಯವರ ಮುಂದೆ, ತಾನು ನನ್ನವನೆಂದು ಹೇಳಿದರೆ, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ನನ್ನವನೆಂದು ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 “ಜನರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 “ಜೆ ಕೊನಾಕ್ ಸಗ್ಳ್ಯಾ ಲೊಕಾಂಚ್ಯಾ ಇದ್ರಾಕ್ ಮಾಜೊ ಮನುನ್ ಸಾಂಗ್ತ್ಯಾತ್, ತೆಕಾ ಮಿಯಾಬಿ ಸರ್ಗಾಚ್ಯಾ ರಾಜಾತ್ ಮಾಜ್ಯಾ ಬಾಬಾಚ್ಯಾ ಇದ್ರಾಕ್ ಮಾಜೊಚ್ ಮನುನ್ ಘೆತಾ. ಅಧ್ಯಾಯವನ್ನು ನೋಡಿ |
ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.