Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:37 - ಕನ್ನಡ ಸತ್ಯವೇದವು J.V. (BSI)

37 ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 “ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆಯನ್ನು ಅಥವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಅಥವಾ ಮಗಳನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 “ಯಾರಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆ ಅಥವಾ ತಾಯಿಯನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. ಯಾವನಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಇಲ್ಲವೆ ಮಗಳನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 “ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಜೊ ಕೊನ್ ಮಾಜೆನ್ಕಿ ಜಾಸ್ತಿ ಅಪ್ನಾಚ್ಯಾ ಬಾಯ್ಚೊ ನಾಹೊಲ್ಯಾರ್ ಬಾಬಾಚೊ ಪ್ರೆಮ್ ಕರ್‍ತಾ ತೊ ಮಾಜೊ ಶಿಸ್ ಹೊವ್ಕ್ ಯೊಗ್ಯ್ ನ್ಹಯ್. ಜೊ ಕೊನ್ ಅಪ್ನಾಚ್ಯಾ ಲೆಕಾಚೊ ನಾಹೊಲ್ಯಾರ್ ಲೆಕಿಚೊ ಮಾಜೆನ್ಕಿ ಜಾಸ್ತಿ ಪ್ರೆಮ್ ಕರ್‍ತಾ ತೊ ಮಾಜೊ ಶಿಸ್ ಹೊವ್ಕ್ ಯೊಗ್ಯ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:37
15 ತಿಳಿವುಗಳ ಹೋಲಿಕೆ  

ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ತಾಯಿ ಹೆಂಡತಿ ಮಕ್ಕಳು ಅಣ್ಣತಮ್ಮಂದಿರು ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.


ಆತನು - ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಬುದ್ಧಿಯಿಂದಲೂ ಪ್ರೀತಿಸಬೇಕು


ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ಪರಿಚಯವಿಲ್ಲವೆಂದೂ ಅಣ್ಣತಮ್ಮಂದಿರನ್ನು ಅರಿಯೆವೆಂದೂ ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ ಹೇಳಿ ಬಿಟ್ಟರಲ್ಲಾ.


ಆದರೆ ಬರುವದಕ್ಕಿರುವ ಇವೆಲ್ಲವುಗಳೊಳಗಿಂದ ತಪ್ಪಿಸಿಕೊಳ್ಳುವದಕ್ಕೂ ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವದಕ್ಕೂ ನೀವು ಪೂರ್ಣ ಶಕ್ತರಾಗುವಂತೆ ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆ ಮಾಡಿಕೊಳ್ಳುತ್ತಾ ಎಚ್ಚರವಾಗಿರ್ರಿ ಅಂದನು.


ಆಗ ತನ್ನ ಆಳುಗಳಿಗೆ - ಮದುವೆಗೆ ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ.


ಎಲ್ಲರು ತನಗೆ ಮಾನ ಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತಂದೆಯು ಇಚ್ಫೈಸುತ್ತಾನೆ. ಮಗನಿಗೆ ಮಾನಕೊಡದವನು ಅವನನ್ನು ಕಳುಹಿಸಿದ ತಂದೆಗೂ ಮಾನಕೊಡದವನಾಗಿದ್ದಾನೆ.


ಆದರೆ ಆ ಲೋಕವನ್ನೂ ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆ ಮಾಡಿಕೊಳ್ಳುವದೂ ಇಲ್ಲ, ಮಾಡಿಕೊಡುವದೂ ಇಲ್ಲ.


ಆದರೂ ತಮ್ಮ ವಸ್ತ್ರಗಳನ್ನು ಮೈಲಿಗೆ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನೊಳಗೆ ನಿನ್ನಲ್ಲಿದ್ದಾರೆ; ಅವರು ಯೋಗ್ಯರಾಗಿರುವದರಿಂದ ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.


ನನ್ನ ಪ್ರಜೆಗಳಾದ ಇಸ್ರಾಯೇಲ್ಯರು ನನ್ನ ಆಜ್ಞಾನುಸಾರವಾಗಿ ನನ್ನ ಮಂದಿರಕ್ಕೆ ತರುವ ಯಜ್ಞನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿ ಅವುಗಳ ಶ್ರೇಷ್ಠ ಭಾಗಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವದೇಕೆ? ನೀನು ನನ್ನನ್ನು ಗೌರವಿಸುವದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವದು ಸರಿಯೋ?


ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ - ನೀನುಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತೀ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿವಿುತ್ತ ಅವನನ್ನು ಇರಿದುಬಿಡುವರು.


ಮಗನ ದೆಸೆಯಿಂದ ಈ ಮಾತು ಅಬ್ರಹಾಮನಿಗೆ ಬಹುದುಃಖವನ್ನು ಹುಟ್ಟಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು