Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:42 - ಕನ್ನಡ ಸತ್ಯವೇದವು J.V. (BSI)

42 ಮತ್ತು ಈ ಚಿಕ್ಕವರಲ್ಲಿ ಒಬ್ಬನಿಗೆ ಯೇಸುವಿನ ಶಿಷ್ಯನೆಂದು ಯಾವನಾದರೂ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಬರತಕ್ಕ ಪ್ರತಿಫಲವು ಅವನಿಗೆ ತಪ್ಪುವದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಮತ್ತು ಈ ಕನಿಷ್ಠರಾದವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಯಾರಾದರೂ ಒಂದು ತಂಬಿಗೆ ತಣ್ಣೀರನ್ನು ಕುಡಿಯುವುದಕ್ಕೆ ಕೊಟ್ಟರೆ ತಕ್ಕ ಪ್ರತಿಫಲವು ಅವನಿಗೆ ಬರುವುದು ತಪ್ಪುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ದೀನರಾದ ಇವರಿಗೆ ನನ್ನ ಹಿಂಬಾಲಕರೆಂಬ ನಿಮಿತ್ತ ಸಹಾಯ ಮಾಡುವವನು ಖಂಡಿತವಾಗಿಯೂ ಪ್ರತಿಫಲವನ್ನು ಪಡೆಯುವನು. ನನ್ನ ಹಿಂಬಾಲಕರಿಗೆ ಕೇವಲ ಒಂದು ಬಟ್ಟಲು ತಣ್ಣೀರನ್ನು ಕೊಟ್ಟರೂ ಸಹ ಅದಕ್ಕೆ ಬರತಕ್ಕ ಪ್ರತಿಫಲವು ತಪ್ಪುವುದೇ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಯಾವನಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಕೇವಲ ಒಂದು ಲೋಟ ತಣ್ಣೀರನ್ನು ಕುಡಿಯುವುದಕ್ಕೆ ಕೊಡುವವನು ತನ್ನ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ಸತ್ಯವಾಗಿ ನಾನು ನಿಮಗೆ ಹೇಳುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ತುಮ್ಕಾ ಗೊತ್ತ್ ರ್‍ಹಾಂವ್ದಿ, ಹ್ಯಾ ಮಾಜ್ಯಾ ಫಾಟ್ನಾ ರ್‍ಹಾತಲ್ಯಾತ್ಲ್ಯಾ ಎಕ್ ಬಾರಿಕ್ಲ್ಯಾಕ್ ಸೈತ್ ತೊ ಮಾಜ್ಯಾ ಫಾಟ್ನಾ ರ್‍ಹಾತಲೊ ಮನುನ್ ಗೊತ್ತ್ ರ್‍ಹವ್ನಬಿ ತೆಕಾ ಫಿವ್ಕ್ ಎಕ್ ಘುಟುಕ್‍ ಬರ್ ಸೈತ್ ಪಾನಿ ದಿಲ್ಯಾರ್, ತೆಕಾ ತೆಚೊ ಭೊಮಾನ್ ಗಾವುನುಚ್ ಗಾವ್ತಾ”. ಮನುನ್ ಸಾಂಗಟ್ಲ್ಯಾನ್, ಅನಿ ತೆಂಕಾ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:42
21 ತಿಳಿವುಗಳ ಹೋಲಿಕೆ  

ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ.


ಅದಕ್ಕೆ ಅರಸನು - ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅನ್ನುವನು.


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡಬಾರದು ನೋಡಿರಿ; ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಲಿದ್ದಾರೆ ಎಂದು ನಿಮಗೆ ಹೇಳುತ್ತೇನೆ.


ಒಬ್ಬನು ಕೊಡುವದಕ್ಕೆ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನಲ್ಲಿ ಇರುವದಕ್ಕೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವದು; ಅವನಿಗೆ ಇಲ್ಲದ್ದನ್ನು ದೇವರು ಕೇಳಿಕೊಳ್ಳುವದಿಲ್ಲ.


ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಧೈರ್ಯವನ್ನು ಬಿಡದೆ ಸಾಲಕೊಡಿರಿ; ಹೀಗೆ ಮಾಡಿದರೆ, ನಿಮಗೆ ಬಹಳ ಫಲ ಸಿಕ್ಕುವದು, ಮತ್ತು ನೀವು ಪರಾತ್ಪರನ ಮಕ್ಕಳಾಗುವಿರಿ. ಆತನಂತೂ ಉಪಕಾರ ನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.


ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವದೆಂದು ತಿಳಿದುಕೋ; ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವದು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ಅವನು ಈ ಚಿಕ್ಕವರಲ್ಲಿ ಒಬ್ಬನಿಗೆ ತೊಡಕನ್ನೊಡ್ಡುವದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವದೇ ಲೇಸು.


ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ಕೆಟ್ಟುಹೋಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.


ಆದದರಿಂದ ನಾವು ಅವನಿಗೋಸ್ಕರ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸಿ ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ, ಇವುಗಳನ್ನು ಇಡೋಣ; ಅವನು ಇಲ್ಲಿ ಬಂದಾಗೆಲ್ಲಾ ಅದರಲ್ಲಿ ವಾಸಮಾಡಲಿ ಎಂದು ಹೇಳಿದಳು.


ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು; ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, ಬಹು ದಿನದ ಮೇಲೆ ಅದು ನಿನಗೆ ಸಿಕ್ಕುವದು.


ಆಕೆಯು ಹೋಗುತ್ತಿರುವಾಗ ತಿರಿಗಿ ಆಕೆಯನ್ನು ಕರೆದು - ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು