Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:13 - ಕನ್ನಡ ಸತ್ಯವೇದವು J.V. (BSI)

13 ಪ್ರವಾದಿಗಳೆಲ್ಲರೂ ಧರ್ಮಶಾಸ್ತ್ರವೂ ಪ್ರವಾದಿಸುವದು ಯೋಹಾನನ ತನಕ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಎಲ್ಲಾ ಪ್ರವಾದಿಗಳೂ, ಧರ್ಮಶಾಸ್ತ್ರವು ಯೋಹಾನನ ತನಕ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಯೊವಾನ್ನನ ಕಾಲದ ತನಕ ಧರ್ಮಶಾಸ್ತ್ರ ಹಾಗು ಎಲ್ಲ ಪ್ರವಾದಿಗಳು ದೇವರ ಸಾಮ್ರಾಜ್ಯವನ್ನು ಕುರಿತು ಪ್ರವಾದನೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಎಲ್ಲಾ ಪ್ರವಾದನೆಗಳು ಮತ್ತು ಮೋಶೆಯ ಧರ್ಮಶಾಸ್ತ್ರವು ಯೋಹಾನನು ಬರುವ ತನಕ ಪರಲೋಕರಾಜ್ಯದ ಕುರಿತಾಗಿ ಮುಂತಿಳಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೋಹಾನನ ಕಾಲದ ತನಕ ಮೋಶೆಯ ನಿಯಮ ಹಾಗು ಎಲ್ಲ ಪ್ರವಾದಿಗಳು ದೇವರ ರಾಜ್ಯವನ್ನು ಕುರಿತು ಪ್ರವಾದನೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜುವಾಂವಾಚ್ಯಾ ಕಾಲಾಪತರ್ ಸಗ್ಳ್ಯಾ ಪ್ರವಾದ್ಯಾನಿ ಅನಿ ಮೊಯ್ಜೆಚ್ಯಾ ಖಾಯ್ದ್ಯಾನಿ ದೆವಾಚ್ಯಾ ರಾಜಾಚ್ಯಾ ವಿಶಯಾತುಚ್ ಬೊಲ್ಲ್ಯಾನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:13
10 ತಿಳಿವುಗಳ ಹೋಲಿಕೆ  

ಈಗಲಾದರೋ ದೇವರಿಂದ ದೊರಕುವ ನೀತಿಯು ಧರ್ಮಶಾಸ್ತ್ರನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತದೆ.


ಯೆರೂಸಲೇವಿುನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿಗಳೂ ಆತನನ್ನಾಗಲಿ ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲಿ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.


ತರುವಾಯ ಆತನು - ನಾನು ಇನ್ನೂ ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಗ್ರಂಥಗಳಲ್ಲಿಯೂ ಕೀರ್ತನೆಗಳಲ್ಲಿಯೂ ಬರೆದಿರುವದೆಲ್ಲಾ ನೆರವೇರುವದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ ಅಂದನು.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.


ಅವನು ತಂದೆಗಳ ಮನಸ್ಸನ್ನು ಮಕ್ಕಳ ಕಡೆಗೂ ಮಕ್ಕಳ ಮನಸ್ಸನ್ನು ತಂದೆಗಳ ಕಡೆಗೂ ತಿರುಗಿಸುವನು.


ಇದಲ್ಲದೆ ಸ್ನಾನಿಕನಾದ ಯೋಹಾನನ ಕಾಲದಿಂದ ಈವರೆಗೂ ಪರಲೋಕರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿರುತ್ತದೆ; ಬಲಾತ್ಕಾರಿಗಳು ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳುತ್ತಾರೆ.


ನಿಮಗೆ ಗ್ರಹಿಸುವದಕ್ಕೆ ಮನಸ್ಸಿದ್ದರೆ ಬರತಕ್ಕ ಎಲೀಯನು ಇವನೇ ಎಂದು ತಿಳುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು