Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:2 - ಕನ್ನಡ ಸತ್ಯವೇದವು J.V. (BSI)

2 ಯೋಹಾನನು ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿ ಕೇಳಿ ಆತನ ಬಳಿಗೆ ಶಿಷ್ಯರನ್ನು ಕಳುಹಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿದಾಗ, ಆತನ ಬಳಿಗೆ ತನ್ನ ಶಿಷ್ಯರನ್ನು ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸ್ವಾಮಿಯ ಕಾರ್ಯಕಲಾಪಗಳ ಸುದ್ದಿ ಸೆರೆಯಲ್ಲಿದ್ದ ಸ್ನಾನಿಕ ಯೊವಾನ್ನನ ಕಿವಿಗೆ ಬಿದ್ದಿತು. ಆತನು ತನ್ನ ಶಿಷ್ಯರಲ್ಲಿ ಕೆಲವರನ್ನು ಅವರ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸ್ನಾನಿಕನಾದ ಯೋಹಾನನು ಸೆರೆಯಲ್ಲಿದ್ದನು. ಕ್ರಿಸ್ತನು ಮಾಡುತ್ತಿದ್ದ ಸಂಗತಿಗಳು ಅವನಿಗೆ ತಿಳಿಯಿತು. ಆದ್ದರಿಂದ ಯೋಹಾನನು ತನ್ನ ಕೆಲವು ಶಿಷ್ಯರನ್ನು ಯೇಸುವಿನ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಸೆರೆಮನೆಯಲ್ಲಿ ಯೋಹಾನನು ಕ್ರಿಸ್ತನ ಕಾರ್ಯಗಳನ್ನು ಕೇಳಿ, ತನ್ನ ಶಿಷ್ಯರನ್ನು ಕಳುಹಿಸಿ ಯೇಸುವಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಬಂಧಿಖಾನ್ಯಾತ್ ಹೊತ್ತ್ಯಾ ಜುವಾಂವ್ ಬಾವ್ತಿಸಾನ್, ಕ್ರಿಸ್ತ್ ಕಸ್ಲಿ-ಕಸ್ಲಿ ಕಾಮಾ ಕರುಕ್ ಲಾಗ್ಲಾ ಮನುನ್ ಮನ್ತಲೆ ಆಯಿಕ್ಲ್ಯಾನ್, ತಸೆಮನುನ್ ತೆನಿ ಅಪ್ನಾಚ್ಯಾ ಶಿಸಾಕ್ನಿ ತೆಚೆಕ್ಡೆ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:2
11 ತಿಳಿವುಗಳ ಹೋಲಿಕೆ  

ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದ್ಯಳ ನಿವಿುತ್ತ ಯೋಹಾನನನ್ನು ಹಿಡಿತರಿಸಿ ಸೆರೆಯಲ್ಲಿ ಕಟ್ಟಿ ಹಾಕಿಸಿದ್ದನು. ಆ ಹೆರೋದ್ಯಳು ಹೆರೋದನ ಅಣ್ಣನಾದ ಫಿಲಿಪ್ಪನ ಹೆಂಡತಿ.


ಹೆರೋದನು ಹೆರೋದ್ಯಳ ನಿವಿುತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಯಲ್ಲಿ ಹಾಕಿಸಿದ್ದನು. ಆ ಹೆರೋದ್ಯಳು ಹೆರೋದನ ಅಣ್ಣನಾದ ಫಿಲಿಪ್ಪನ ಹೆಂಡತಿ.


ಯೋಹಾನನು ಸೆರೆಗೆ ಬಿದ್ದನೆಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟುಹೋದನು.


ಆಮೇಲೆ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು - ಫರಿಸಾಯರೂ ನಾವೂ ಉಪವಾಸಮಾಡುತ್ತೇವಲ್ಲ; ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವದಿಲ್ಲ ಎಂದು ಕೇಳಲು


ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ


ಆದರೆ ಉಪರಾಜನಾದ ಹೆರೋದನು ತನ್ನ ಅಣ್ಣನ ಹೆಂಡತಿಯಾದ ಹೆರೋದ್ಯಳ ನಿವಿುತ್ತವಾಗಿಯೂ ತಾನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳ ನಿವಿುತ್ತವಾಗಿಯೂ


ಹೀಗೆ ಅಬ್ರಹಾಮನಿಂದ ದಾವೀದನವರೆಗೂ ಒಟ್ಟು ಹದಿನಾಲ್ಕು ತಲೆಗಳು. ದಾವೀದ ಮೊದಲುಗೊಂಡು ಬಾಬೆಲಿಗೆ ಸೆರೆಹೋಗುವವರೆಗೂ ಹದಿನಾಲ್ಕು ತಲೆಗಳು. ಬಾಬೆಲಿಗೆ ಸೆರೆಹೋದಂದಿನಿಂದ ಕ್ರಿಸ್ತನವರೆಗೂ ಹದಿನಾಲ್ಕು ತಲೆಗಳು.


ಹೀಗಿರಲಾಗಿ ಉಪರಾಜನಾದ ಹೆರೋದನು ನಡೆದ ಸಂಗತಿಗಳನ್ನೆಲ್ಲಾ ಕೇಳಿ ಬಹಳವಾಗಿ ಕಳವಳಪಡುವವನಾದನು. ಯಾಕಂದರೆ ಸತ್ತಿದ್ದ ಯೋಹಾನನು ತಿರಿಗಿ ಬದುಕಿಬಂದಿದ್ದಾನೆಂದು ಕೆಲವರೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು