Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:22 - ಕನ್ನಡ ಸತ್ಯವೇದವು J.V. (BSI)

22 ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವದು ಎಂದು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ಸಹನೀಯವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಮೇಲಾಗಿರುವುದೆಂದು ಒತ್ತಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ನ್ಯಾಯತೀರ್ಪಿನ ದಿನದಲ್ಲಿ ಟೈರ್, ಸೀದೋನ್‌ಗಳಿಗಿಂತಲೂ ನಿಮ್ಮ ಸ್ಥಿತಿಯು ಬಹಳ ದುಸ್ಥಿತಿಗೆ ಒಳಗಾಗುವುದೆಂದು ನಾನು ನಿಮಗೆ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೂ ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ಟೈರ್ ಮತ್ತು ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ತಾಳಬಹುದಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಝಡ್ತಿಚ್ಯಾ ದಿಸಿ ದೆವ್ ತುಮ್ಚೆನ್ಕಿ ಜಾಸ್ತಿ ತಿರ್ ಅನಿ ಶಿದೊನಾಕ್ ಲೈ ದಯಾ ದಾಕ್ವುತಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:22
22 ತಿಳಿವುಗಳ ಹೋಲಿಕೆ  

ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿನ್ನ ಗತಿಗಿಂತಲೂ ಸೊದೋಮ್ ಸೀಮೆಯ ಗತಿಯು ಮೇಲಾಗಿರುವದು ಎಂದು ನಿಮಗೆ ಹೇಳುತ್ತೇನೆ ಅಂದನು.


ನ್ಯಾಯವಿಚಾರಣೆಯ ದಿವಸದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನ್ಯಾಯತೀರ್ಪಿನ ದಿನದಲ್ಲಿ ನಮಗಿರುವ ಧೈರ್ಯದಲ್ಲಿಯೇ ಆತನ ಪ್ರೀತಿಯು ನಮ್ಮೊಳಗೆ ಸಿದ್ಧಿಗೆ ಬಂತು. ಯಾಕಂದರೆ ಕ್ರಿಸ್ತನು ಎಂಥವನಾಗಿದ್ದಾನೋ ನಾವು ಅಂಥವರಾಗಿಯೇ ಈ ಲೋಕದಲ್ಲಿದ್ದೇವೆ.


ಇದಲ್ಲದೆ ನಾನು ನಿಮಗೆ ಹೇಳುವದೇನಂದರೆ ಮನುಷ್ಯರು ಸುಮ್ಮನೆ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿ ನ್ಯಾಯವಿಚಾರಣೆಯ ದಿನದಲ್ಲಿ ಉತ್ತರಕೊಡಬೇಕು.


ಆದರೆ ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವದು.


ನರಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆಹಾಕಿ ತನ್ನ ಸೈನಿಕರಿಂದ ಬಹುಶ್ರಮದ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲು ಕಾಯಿಕಟ್ಟಿದೆ; ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ ಅವನ ಸೈನಿಕರಿಗಾಗಲಿ ತೂರಿನಿಂದ ಸಂಬಳವೇನೂ ಸಿಕ್ಕಲಿಲ್ಲ.


ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇವಿುನಲ್ಲಿ ಬಂದಿರುವ ರಾಯಭಾರಿಗಳ ಮೂಲಕ ಅವುಗಳನ್ನು ಎದೋವಿುನ ರಾಜ, ಮೋವಾಬಿನ ರಾಜ, ಅಮ್ಮೋನ್ಯರ ರಾಜ, ತೂರಿನ ರಾಜ, ಚೀದೋನಿನ ರಾಜ, ಇವರಿಗೆ ಕಳುಹಿಸು;


ಅಮ್ಮೋನ್ಯರು, ತೂರಿನ ಎಲ್ಲಾ ಅರಸರು, ಚೀದೋನಿನ ಎಲ್ಲಾ ಅರಸರು,


ಆದರೆ ಈಗಿರುವ ಭೂಮ್ಯಾಕಾಶಗಳು ಅದೇ ವಾಕ್ಯದ ಬಲದಿಂದ ಬೆಂಕಿಯ ಮೂಲಕ ನಾಶವಾಗುವದಕ್ಕೆ ಇಡಲ್ಪಟ್ಟಿವೆ; ಮತ್ತು ಭಕ್ತಿಹೀನರ ಶಿಕ್ಷಾವಿಧಿಯೂ ನಾಶವೂ ಉಂಟಾಗುವ ದಿನಕ್ಕಾಗಿ ಆ ಬೆಂಕಿ ಸಿದ್ಧವಾಗಿದೆ.


ಕರ್ತನು ಭಕ್ತರನ್ನು ಕಷ್ಟಗಳೊಳಗಿಂದ ತಪ್ಪಿಸುವದಕ್ಕೂ ದುರ್ಮಾರ್ಗಿಗಳನ್ನು ನ್ಯಾಯತೀರ್ಪಿನ ದಿನದ ತನಕ ಶಿಕ್ಷಾನುಭವದಲ್ಲಿ ಇಡುವದಕ್ಕೂ ಬಲ್ಲವನಾಗಿದ್ದಾನೆ.


ಈ ಅತ್ಯಂತ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು; ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು;


ತೂರೇ, ಚೀದೋನೇ, ಫಿಲಿಷ್ಟಿಯ ರಾಷ್ಟ್ರಗಳೇ, ನನ್ನ ಗೊಡವೆ ನಿಮಗೇಕೆ? ನನಗೆ ಪ್ರತೀಕಾರಮಾಡುವಿರೋ? ಸುಮ್ಮನೆ ತಂಟೆಮಾಡುವಿರೋ? ನೀವು ಮಾಡುವ ಕೇಡನ್ನು ತ್ವರೆಯಾಗಿ, ಶೀಘ್ರವಾಗಿ ನಿಮ್ಮ ತಲೆಗೇ ತರುವೆನು.


ಹೇಗಂದರೆ - ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣೀತಟ್ಟು ಹೊದ್ದುಕೊಂಡು ಬೂದಿಯಲ್ಲಿ [ಕೂತುಕೊಂಡು] ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು.


ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಇನ್ನು ಕಾಣಿಸದ ಹಾಗಾದವು.


ಇದಲ್ಲದೆ ಸತ್ತವರಾದ ದೊಡ್ಡವರೂ ಚಿಕ್ಕವರೂ ಸಿಂಹಾಸನದ ಮುಂದೆ ನಿಂತಿರುವದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಮತ್ತು ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದಿದ್ದ ಸಂಗತಿಗಳ ಆಧಾರದಿಂದ ಅವರವರ ಕೃತ್ಯಗಳ ಪ್ರಕಾರ ಸತ್ತವರಿಗೆ ನ್ಯಾಯತೀರ್ಪಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು