Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:25 - ಕನ್ನಡ ಸತ್ಯವೇದವು J.V. (BSI)

25 ಆ ಸಮಯದಲ್ಲಿ ಯೇಸು ಹೇಳಿದ್ದೇನಂದರೆ - ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಮಾತುಗಳನ್ನು ಮರೆಮಾಡಿ ಬಾಲಕರಿಗೆ ಪ್ರಕಟಮಾಡಿದ್ದೀ ಎಂದು ನಿನ್ನನ್ನು ಕೊಂಡಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅದೇ ಸಮಯದಲ್ಲಿ ಯೇಸು ಹೇಳಿದ್ದೇನೆಂದರೆ, “ತಂದೆಯೇ! ಪರಲೋಕದ ಭೂಲೋಕದ ಒಡೆಯನೇ, ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ವಿಷಯಗಳನ್ನು ಮರೆಮಾಡಿ ಚಿಕ್ಕ ಮಕ್ಕಳಿಗೆ ಅದನ್ನು ಪ್ರಕಟಪಡಿಸಿರುವಿ ಎಂದು ನಿನ್ನನ್ನು ಕೊಂಡಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಬಳಿಕ ಯೇಸು, “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಿನಗೆ ನಾನು ವಂದನೆ ಸಲ್ಲಿಸುತ್ತೇನೆ. ನಾನು ನಿನ್ನನ್ನು ಕೊಂಡಾಡುತ್ತೇನೆ. ಏಕೆಂದರೆ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಸೂಕ್ಷ್ಮಬುದ್ದಿಯುಳ್ಳವರಿಗೂ ಮರೆಮಾಡಿರುವೆ. ಆದರೆ ಚಿಕ್ಕ ಮಕ್ಕಳಂತಿರುವ ಈ ಜನರಿಗೆ ನೀನು ಗೋಚರಪಡಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತ್ಯಾ ಎಳಾರ್ ಜೆಜುನ್,“ಬಾಬಾ, ಸರ್‍ಗಾ ಅನಿ ಜಿಮ್ನಿಚ್ಯಾ ಧನಿಯಾ; ಮಿಯಾ ತುಕಾ ಧನ್ಯವಾದ್ ದಿತಾ, ಕಶ್ಯಾಕ್ ಮಟ್ಲ್ಯಾರ್ ಬುದ್ವಂತಾ ಅನಿ ಶಾನ್ಯಾ ಲೊಕಾನಿಕ್ನಾ ನಿಪ್ವುನ್ ಥವಲ್ಲೆ, ಬಾರಿಕ್ ಪೊರಾಂಚ್ಯಾ ಸರ್ಕಿ ಹೊತ್ತ್ಯಾ ಲೊಕಾಕ್ನಿ ತಿಯಾ ದಾಕ್ವುಲೆಯ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:25
40 ತಿಳಿವುಗಳ ಹೋಲಿಕೆ  

ಆತನಿಗೆ - ಇವರು ಹೇಳುವದನ್ನು ಕೇಳುತ್ತೀಯಾ ಎಂದು ಹೇಳಲು ಯೇಸು - ಹೌದು, ಕೇಳುತ್ತೇನೆ, ಸಣ್ಣ ಮಕ್ಕಳ ಬಾಯಿಂದಲೂ ಮೊಲೇಕೂಸುಗಳ ಬಾಯಿಂದಲೂ ಸ್ತೋತ್ರವನ್ನು ಸಿದ್ಧಿಗೆ ತಂದಿ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ? ಅಂದನು.


ನಿನಗೆ ವಿರೋಧವಾಗಿ ನಿಂತು ಮುಯ್ಯಿತೀರಿಸುವ ವೈರಿಗಳ ಬಾಯನ್ನು ಕಟ್ಟುವದಕ್ಕೋಸ್ಕರ ನೀನು ಬಾಲಕರ ಮತ್ತು ಮೊಲೆಕೂಸುಗಳ ಬಾಯಿಂದ ಬಲವಾದ ಸಾಕ್ಷಿ ಉಂಟಾಗುವಂತೆ ಮಾಡಿದ್ದೀ.


ಅದಕ್ಕೆ ಯೇಸು - ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಈ ಗುಟ್ಟು ನಿನಗೆ ತಿಳಿಸಿದವನು ನರಮನುಷ್ಯನಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ತಿಳಿಸಿದನು.


ಆದರೆ ಅವರ ಬುದ್ಧಿ ಮಂದವಾಯಿತು; ಈ ದಿನದವರೆಗೂ ಹಳೇ ಒಡಂಬಡಿಕೆಯು ಪಾರಾಯಣವಾಗುವಾಗ ಅದು ಕ್ರಿಸ್ತನಲ್ಲಿ ಗತಿಸಿಹೋಗುತ್ತದೆಂಬದು ಅವರಿಗೆ ಪ್ರಕಟವಾಗದೆ ಇರುವದರಿಂದ ಅದೇ ಮುಸುಕು ಎತ್ತಲ್ಪಡದೆ ಇರುತ್ತದೆ.


ಜಗತ್ತನ್ನೂ ಅದರಲ್ಲಿರುವ ಎಲ್ಲಾ ವಸ್ತುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯನಾಗಿರುವದರಿಂದ ಆತನು ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವವನಲ್ಲ;


ಆಗ ಕಲ್ಲನ್ನು ತೆಗೆದುಹಾಕಿದರು. ಮತ್ತು ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ - ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಿನ್ನನ್ನು ಕೊಂಡಾಡುತ್ತೇನೆ;


ನನ್ನ ಪಿತೃಗಳ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ವ್ಯಕ್ತಗೊಳಿಸಿದಿ.


ಯೆಹೋವನು ಹೀಗನ್ನುತ್ತಾನೆ - ಆಕಾಶವು ನನಗೆ ಸಿಂಹಾಸನ, ಭೂವಿುಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?


ಮೊಣಕಾಲೂರಿ - ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತವೇ ಆಗಲಿ ಅಂದನು.


ಭೂನಿವಾಸಿಗಳೆಲ್ಲರೂ [ಆತನ ದೃಷ್ಟಿಯಲ್ಲಿ] ಏನೂ ಅಲ್ಲದಂತಿದ್ದಾರೆ, ಪರಲೋಕಸೈನ್ಯದವರಲ್ಲಿಯೂ ಭೂಲೋಕದವರಲ್ಲಿಯೂ ತನ್ನ ಇಚ್ಫಾನುಸಾರ ನಡೆಯುತ್ತಾನೆ; ಯಾರೂ ಆತನ ಕೈಯನ್ನು ಹಿಂದಕ್ಕೆ ತಳ್ಳಲಾರರು, ನೀನು ಏನು ಮಾಡುತ್ತೀ ಎಂದು ಯಾರೂ ಕೇಳಲಾರರು.


ಅಯ್ಯೋ, ತಮ್ಮಲ್ಲಿ ತಾವೇ ಜ್ಞಾನಿಗಳೆಂದೂ ಸ್ವಂತ ಗಣನೆಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಪಾಡು ಏನು ಹೇಳಲಿ!


ಆದದರಿಂದ ನಮ್ಮ ದೇವರೇ, ನಾವು ನಿನಗೆ ಕೃತಜ್ಞತಾಸ್ತುತಿಮಾಡುತ್ತಾ ನಿನ್ನ ಪ್ರಭಾವವುಳ್ಳ ನಾಮವನ್ನು ಕೀರ್ತಿಸುತ್ತೇವೆ.


ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್‍ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ; ಪರಲೋಕ ಭೂಲೋಕಗಳನ್ನುಂಟು ಮಾಡಿದವನು ನೀನೇ.


ಬಾಲಕನಾದ ಸಮುವೇಲನು ಏಫೋದೆಂಬ ನಾರುಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸಾನ್ನಿಧ್ಯಸೇವೆಯನ್ನು ಮಾಡುತ್ತಿದ್ದನು.


ಆಸ್ತಿಯನ್ನು ನೀನೇ ತಕ್ಕೋ ಎಂದು ಹೇಳಲು ಅಬ್ರಾಮನು ಅವನಿಗೆ - ಒಂದು ದಾರವನ್ನಾಗಲಿ ಕೆರದ ಬಾರನ್ನಾಗಲಿ ನಿನ್ನದರಲ್ಲಿ ಯಾವದನ್ನೂ ತೆಗೆದುಕೊಳ್ಳುವದಿಲ್ಲವೆಂದು ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರದೇವರಾಗಿರುವ ಯೆಹೋವನ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ. ಅಬ್ರಾಮನು ನನ್ನ ಸೊತ್ತಿನಿಂದಲೇ ಐಶ್ವರ್ಯವಂತನಾದನೆಂದು ಹೇಳಿಕೊಳ್ಳುವದಕ್ಕೆ ನಿನಗೆ ಆಸ್ಪದವಾಗಬಾರದು, ನನಗೆ ಏನೂ ಬೇಡ.


ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ಆಗಲಿ;


ಆದಕಾರಣ ಮನುಷ್ಯರು ಆತನಿಗೆ ಭಯಪಡುವರು, ಜ್ಞಾನಿಗಳೆಂದು ಎಣಿಸಿಕೊಳ್ಳುವವರನ್ನು ಆತನು ಲಕ್ಷಿಸುವದೇ ಇಲ್ಲ.


ಆಗ ಯೇಸು - ತಂದೆಯೇ, ಅವರಿಗೆ ಕ್ಷವಿುಸು; ತಾವು ಏನು ಮಾಡುತ್ತೇವೆಂಬದನ್ನು ಅರಿಯರು ಅಂದನು. ಆಮೇಲೆ ಆತನ ಬಟ್ಟೆಗಳನ್ನು ಪಾಲುಮಾಡಿ ಚೀಟು ಹಾಕಿದರು.


ಈಗ ನನ್ನ ಪ್ರಾಣವು ತತ್ತರಿಸುತ್ತದೆ; ಮತ್ತು ನಾನೇನು ಹೇಳಲಿ? ತಂದೆಯೇ, ಈ ಕಾಲದೊಳಗಿಂದ ನನ್ನನ್ನು ತಪ್ಪಿಸು. ಆದರೆ ಇದಕ್ಕಾಗಿಯೇ ಈ ಕಾಲ ಸೇರಿದೆನು.


ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಅದಕ್ಕೆ - ಮಹಿಮೆಪಡಿಸಿದ್ದೇನೆ, ತಿರಿಗಿ ಮಹಿಮೆಪಡಿಸುವೆನು ಎಂದು ಆಕಾಶವಾಣಿಯಾಯಿತು.


ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅದನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸುವವನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು