Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:27 - ಕನ್ನಡ ಸತ್ಯವೇದವು J.V. (BSI)

27 ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ನನ್ನ ತಂದೆ ನನಗೆ ಎಲ್ಲವನ್ನು ಕೊಟ್ಟಿದ್ದಾನೆ. ಯಾವನೂ ಮಗನನ್ನು ಅರಿತಿಲ್ಲ. ತಂದೆ ಮಾತ್ರ ಮಗನನ್ನು ಅರಿತಿದ್ದಾನೆ. ಯಾವನೂ ತಂದೆಯನ್ನು ಅರಿತಿಲ್ಲ. ಮಗನು ಮಾತ್ರ ತಂದೆಯನ್ನು ಅರಿತಿದ್ದಾನೆ. ಮಗನು ತಂದೆಯನ್ನು ಯಾರಿಗೆ ಪ್ರಕಟಿಸಬೇಕೆಂದು ಇಷ್ಟಪಡುತ್ತಾನೋ ಅವರು ತಂದೆಯನ್ನು ತಿಳಿದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಬೇರೆ ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾನೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 “ಮಾಜ್ಯಾ ಬಾಬಾನ್ ಮಾಕಾ ಸಗ್ಳೆ ದಿಲ್ಯಾನಾಯ್, ಬಾಬಾಕ್ ಸೊಡುನ್ ಕೊನಾಕ್ಬಿ ಲೆಕಾಚ್ಯಾ ವಿಶಯಾತ್ ಗೊತ್ತ್ ನಾ, ಅನಿ ಲೆಕಾನ್ ಬಾಬಾಚ್ಯಾ ವಿಶಯಾತ್ ಸಗ್ಳ್ಯಾಕ್ನಿ ಕಳ್ವುಕ್ ಮನುನ್ ಎಚುನ್ ಕಾಡಲ್ಯಾಕ್ನಿ ಸೊಡುನ್ ಕೊನಾಕ್‍ ಬಿ ಬಾಬಾಚ್ಯಾ ವಿಶಯಾತ್ ಗೊತ್ತ್ ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:27
21 ತಿಳಿವುಗಳ ಹೋಲಿಕೆ  

ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಇಂಥವನೆಂದು ತಂದೆಯೇ ಹೊರತು ಇನ್ಯಾವನೂ ತಿಳಿದವನಲ್ಲ; ತಂದೆ ಇಂಥವನೆಂದು ಮಗನೇ ಹೊರತು ಇನ್ನಾವನೂ ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದವನಾಗಿದ್ದಾನೆ ಅಂದನು.


ಕ್ರಿಸ್ತನ ಉಪದೇಶದಲ್ಲಿ ನೆಲೆಗೊಳ್ಳದೆ ಅದನ್ನು ಅತಿಕ್ರವಿುಸಿ ಮುಂದಕ್ಕೆ ಹೋಗುವವನಿಗೆ ದೇವರ ಅನ್ಯೋನ್ಯತೆಯಿಲ್ಲ. ಆ ಉಪದೇಶದಲ್ಲಿ ನೆಲೆಗೊಂಡಿರುವವನಿಗೆ ತಂದೆಯ ಮತ್ತು ಮಗನ ಅನ್ಯೋನ್ಯತೆ ಉಂಟು.


ತಾನು ದೇವರ ಮಗನಿಗೆ ಸೇರಿದವನಲ್ಲವೆನ್ನುವವನು ತಂದೆಗೆ ಸೇರಿದವನಲ್ಲ; ತಾನು ಮಗನಿಗೆ ಸೇರಿದವನೆಂದು ಒಪ್ಪಿಕೊಳ್ಳುವವನು ತಂದೆಗೂ ಸೇರಿದವನಾಗಿದ್ದಾನೆ.


ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.


ಯಾವನಾದರೂ ತಂದೆಯನ್ನು ನೋಡಿದ್ದಾನೆಂದು ತಿಳಿಯಬೇಡಿರಿ; ದೇವರ ಬಳಿಯಿಂದ ಬಂದವನೊಬ್ಬನೇ ತಂದೆಯನ್ನು ನೋಡಿದ್ದಾನೆ.


ದೇವರನ್ನು ಯಾರೂ ಎಂದೂ ಕಂಡಿಲ್ಲ; ಯಾವನು ಏಕಪುತ್ರನೂ ಸ್ವತಃ ದೇವರೂ ಆಗಿದ್ದು ತಂದೆಯ ಎದೆಯಲ್ಲಿದ್ದಾನೋ ಆತನೇ ತಿಳಿಯಪಡಿಸಿದನು.


ನಾನು ಆತನನ್ನು ಬಲ್ಲೆನು; ಆತನ ಕಡೆಯಿಂದ ಬಂದವನಾದದರಿಂದಲೂ ನನ್ನನ್ನು ಆತನೇ ಕಳುಹಿಸಿದ್ದರಿಂದಲೂ ಆತನನ್ನು ಬಲ್ಲೆನೆಂದು ಕೂಗಿ ಹೇಳಿದನು.


ಲೋಕದೊಳಗಿಂದ ನೀನು ನನಗೆ ಕೊಟ್ಟ ಮನುಷ್ಯರಿಗೆ ನಿನ್ನ ಹೆಸರನ್ನು ತಿಳಿಯಪಡಿಸಿದೆನು. ಇವರು ನಿನ್ನವರಾಗಿದ್ದರು, ನೀನು ಇವರನ್ನು ನನಗೆ ಕೊಟ್ಟೆ; ಮತ್ತು ಇವರು ನಿನ್ನ ವಾಕ್ಯವನ್ನು ಕೈಕೊಂಡು ನಡೆದಿದ್ದಾರೆ.


ಯೇಸು ತನ್ನ ಕೈಯಲ್ಲಿ ತಂದೆ ಎಲ್ಲವನ್ನು ಕೊಟ್ಟಿದ್ದಾನೆಂತಲೂ ತಾನು ದೇವರ ಬಳಿಯಿಂದ ಹೊರಟುಬಂದಿದ್ದು ಮತ್ತೆ ದೇವರ ಬಳಿಗೆ ಹೋಗುತ್ತೇನೆಂತಲೂ ತಿಳುಕೊಂಡವನಾಗಿ ಊಟವನ್ನು ಬಿಟ್ಟು ಎದ್ದು


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೇವದೂತರೂ ಅಧಿಕಾರಿಗಳೂ ಮಹತ್ವಗಳೂ ಆತನ ಸ್ವಾಧೀನವಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು