ಮತ್ತಾಯ 12:25 - ಕನ್ನಡ ಸತ್ಯವೇದವು J.V. (BSI)25 ಆತನು ಅವರ ಆಲೋಚನೆಗಳನ್ನು ತಿಳುಕೊಂಡು ಅವರಿಗೆ ಹೇಳಿದ್ದೇನಂದರೆ - ಯಾವ ರಾಜ್ಯವಾದರೂ ತನ್ನಲ್ಲಿ ಭೇದಹುಟ್ಟಿದರೆ ಹಾಳಾಗುವದು; ತನ್ನಲ್ಲಿ ಭೇದ ಹುಟ್ಟಿದ ಯಾವ ಪಟ್ಟಣವಾದರೂ ಮನೆಯಾದರೂ ನಿಲ್ಲದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನೆಂದರೆ, “ಯಾವ ರಾಜ್ಯವಾದರೂ ತನ್ನಲ್ಲಿ ಭೇದ ಹುಟ್ಟಿದರೆ ವಿಭಜನೆಯಾಗಿ ಹಾಳಾಗುವುದು. ತನ್ನಲ್ಲಿ ಭೇದ ಉಂಟಾಗಿ ವಿಭಜನೆಯಾದ ಯಾವ ಪಟ್ಟಣವಾದರೂ ಮನೆಯಾದರೂ ನೆಲೆಯಾಗಿ ನಿಲ್ಲದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅವರ ಆಲೋಚನೆಗಳನ್ನು ಅರಿತುಕೊಂಡ ಯೇಸು ಇಂತೆಂದರು: “ಅಂತಃಕಲಹದಿಂದ ಒಡೆದುಹೋಗಿರುವ ಪ್ರತಿಯೊಂದು ರಾಜ್ಯವೂ ನಾಶವಾಗುವುದು; ಅದರಂತೆಯೇ ತಮ್ಮತಮ್ಮೊಳಗೆ ಕಾದಾಡುವ ಊರುಗಳೂ ಕುಟುಂಬಗಳೂ ಹಾಳಾಗುವುವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಫರಿಸಾಯರು ಆಲೋಚಿಸುತ್ತಿದ್ದ ಸಂಗತಿಗಳು ಯೇಸುವಿಗೆ ತಿಳಿದಿದ್ದವು. ಆದ್ದರಿಂದ ಯೇಸು ಅವರಿಗೆ, “ತನಗೆ ವಿರೋಧವಾಗಿ ತಾನೇ ಹೋರಾಡುವ ರಾಜ್ಯವು ನಾಶವಾಗುವುದು. ಅಂತಃಕಲಹದಿಂದ ಒಡೆದುಹೋಗಿರುವ ಪ್ರತಿಯೊಂದು ರಾಜ್ಯವು ಸ್ಥಿರವಾಗಿರುವುದಿಲ್ಲ. ಭೇದಭಾವ ಹೊಂದಿರುವ ಪ್ರತಿಯೊಂದು ಕುಟುಂಬವು ಅಭಿವೃದ್ಧಿಯಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಯೇಸು ಅವರ ಆಲೋಚನೆಗಳನ್ನು ತಿಳಿದು ಅವರಿಗೆ, “ತನಗೆ ವಿರೋಧವಾಗಿ ವಿಭಜಿಸಿಕೊಳ್ಳುವ ಪ್ರತಿಯೊಂದು ರಾಜ್ಯವು ನಾಶವಾಗುವುದು ಮತ್ತು ತನಗೆ ವಿರೋಧವಾಗಿ ವಿಭಾಗವಾಗಿರುವ ಪ್ರತಿಯೊಂದು ಪಟ್ಟಣವಾಗಲಿ ಮನೆಯಾಗಲಿ ನಿಲ್ಲುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಜೆಜುಕ್ ತೆನಿ ಯವಜ್ತಲೆ ಕಳ್ಳೆ. ತಸೆಮನುನ್ ತೆನಿ ತೆಂಕಾ,“ಖಲೊಬಿ ಎಕ್ ದೆಸ್ ದೊನ್ ಭಾಗ್ ಹೊವ್ನ್ ಎಕಾಮೆಕಾ ಮದ್ದಿ ಝಗ್ಡುನ್ಗೆತ್ ರ್‍ಹಾಲ್ಯಾರ್, ತೊ ದೆಸ್ ಲೈ ದಿಸ್ ಠಿಕಿನಾ. ಅನಿ ಎಕ್ ಮೊಟೆ ಗಾಂವ್ ನಾಹೊಲ್ಯಾರ್ ಎಕ್ ಕುಟುಮ್ ದೊನ್ ಭಾಗ್ ಹೊವ್ನ್ ಝಗ್ಡುನ್ಗೆತ್ ರ್‍ಹಾಲ್ಯಾರ್, ತೆ ನಾಸುಚ್ ಹೊವ್ನ್ ಜಾತಾ”. ಅಧ್ಯಾಯವನ್ನು ನೋಡಿ |
ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.