Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:30 - ಕನ್ನಡ ಸತ್ಯವೇದವು J.V. (BSI)

30 ನನ್ನ ಪಕ್ಷ ಹಿಡಿಯದವನು ನನಗೆ ವಿರೋಧಿ; ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನನ್ನ ಸಂಗಡ ಇರದವನು ನನಗೆ ವಿರೋಧಿ. ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದುರಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನನ್ನ ಪರವಾಗಿ ಇಲ್ಲದವನು ನನಗೆ ವಿರೋಧಿಯೇ ಸರಿ. ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನನ್ನೊಂದಿಗೆ ಇಲ್ಲದವನು ನನಗೆ ವಿರೋಧಿಯಾಗಿದ್ದಾನೆ. ನನ್ನೊಂದಿಗೆ ಶೇಖರಿಸದವನು ಚದರಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 “ನನ್ನ ಪರವಾಗಿ ಇರದವನು ನನಗೆ ವಿರೋಧಿಯಾಗಿದ್ದಾನೆ, ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಜೊ ಕೊನ್ ಮಾಜೆ ವಾಂಗ್ಡಾ ನಾ, ತೊ ಮಾಜ್ಯಾ ವಿರೊದುಚ್; ಜೊ ಕೊನ್ ಮಾಕಾ ಗೊಳಾ ಕರುಕ್ ಮಜತ್ ಕರಿನಾ ತೊ ಮಾಳ್ಬರ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:30
16 ತಿಳಿವುಗಳ ಹೋಲಿಕೆ  

ನಮ್ಮನ್ನು ಎದುರಿಸದವನು ನಮ್ಮ ಪಕ್ಷದವನೇ.


ನನ್ನ ಪಕ್ಷ ಹಿಡಿಯದವನು ನನಗೆ ವಿರೋಧಿ; ನನ್ನ ಜೊತೆಯಲ್ಲಿ ಒಟ್ಟುಗೂಡಿಸದವನು ಚದರಿಸುವವನಾಗುತ್ತಾನೆ.


ಯೇಸು ಅವನಿಗೆ - ಅಡ್ಡಿಮಾಡಬೇಡಿರಿ; ನಿಮ್ಮನ್ನು ಎದುರಿಸದವನು ನಿಮ್ಮ ಪಕ್ಷದವನೇ ಎಂದು ಹೇಳಿದನು.


ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ.


ಯೆಹೋವನನ್ನು ಸೇವಿಸುವದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು [ಯೂಫ್ರೇಟೀಸ್] ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳೋ, ಹೇಳಿರಿ. ನಾನೂ ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು ಅಂದನು.


ಅವರು ನಮ್ಮನ್ನು ಬಿಟ್ಟು ಹೊರಟುಹೋದರು, ಆದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು, ಆದರೆ ಅವರು ನಮ್ಮನ್ನು ಬಿಟ್ಟುಹೋದದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲವೆಂಬದು ಸ್ಪಷ್ಟವಾಗಿ ತೋರಬಂತು.


ಯೆಹೋಶುವನು ಯೆರಿಕೋವಿನ ಹತ್ತಿರದಲ್ಲಿದ್ದಾಗ ಒಂದಾನೊಂದು ದಿನ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ತನ್ನೆದುರಿನಲ್ಲಿ ನಿಂತಿರುವದನ್ನು ಕಂಡನು. ಅವನು ಅವನ ಬಳಿಗೆ ಹೋಗಿ - ನೀನು ನಮ್ಮವನೋ ಅಥವಾ ಶತ್ರುಪಕ್ಷದವನೋ ಎಂದು ಕೇಳಲು


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ಯೇಸು ಆ ಜನಕ್ಕೋಸ್ಕರ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಒಟ್ಟುಗೂಡಿಸುವದಕ್ಕೆ ಸಹ ಸಾಯುವದಕ್ಕಿದ್ದನು.


ಯೆಹೂದ್ಯರೂ ಇಸ್ರಾಯೇಲ್ಯರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು.


ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ; ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.


ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಅ ಬಲಿಷ್ಠನ ಮನೆಯನ್ನು ಹೊಕ್ಕು ಅವನ ಸೊತ್ತನ್ನು ಸುಲುಕೊಳ್ಳುವದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.


ದುಷ್ಟರಿಗೆ ವಿರೋಧವಾಗಿ ನನಗೋಸ್ಕರ ಏಳುವವರು ಯಾರು? ಕೆಡುಕರಿಗೆ ವಿರೋಧವಾಗಿ ನನಗೋಸ್ಕರ ಎದ್ದು ನಿಲ್ಲುವವರು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು