Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:31 - ಕನ್ನಡ ಸತ್ಯವೇದವು J.V. (BSI)

31 ಆದಕಾರಣ ನಿಮಗೆ ಹೇಳುತ್ತೇನೆ, ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವದು; ಆದರೆ ಪವಿತ್ರಾತ್ಮ ದೂಷಣೆಗೆ ಕ್ಷಮಾಪಣೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದಕಾರಣ ನಿಮಗೆ ಹೇಳುತ್ತೇನೆ ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವುದು. ಆದರೆ ಪವಿತ್ರಾತ್ಮನಿಗೆ ವಿರುದ್ಧವಾಗಿ ನುಡಿಯುವ ದೂಷಣೆಗೆ ಕ್ಷಮಾಪಣೆಯಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ಮಾನವರು ಮಾಡುವ ಪ್ರತಿಯೊಂದು ಪಾಪಕ್ಕೂ ಆಡುವ ದೇವದೂಷಣೆಗೂ ಕ್ಷಮೆ ಉಂಟು. ಆದರೆ ಪವಿತ್ರಾತ್ಮನ ವಿರುದ್ಧ ಆಡುವ ದೂಷಣೆಗೆ ಕ್ಷಮೆಯೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಜನರು ಮಾಡುವ ಪ್ರತಿಯೊಂದು ಪಾಪಕ್ಕೂ ಹೇಳುವ ಪ್ರತಿಯೊಂದು ದೂಷಣೆ ಮಾತಿಗೂ ಕ್ಷಮಾಪಣೆ ಉಂಟು. ಆದರೆ ಪವಿತ್ರಾತ್ಮ ದೂಷಣೆಗೆ ಕ್ಷಮಾಪಣೆ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆದಕಾರಣ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಕ್ಕೂ ದೂಷಣೆಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮರಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದಕ್ಕೆ ಕ್ಷಮಾಪಣೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ತಸೆಮನುನ್ ಮಿಯಾ ತುಮ್ಕಾ ಸಾಂಗ್ತಾ, ಕೊನ್ಬಿ ಬುರ್ಶೆ ಬೊಲ್ಲ್ಯಾರ್ ನಾಹೊಲ್ಯಾರ್ ಪಾಪಾ ಕರಲ್ಲ್ಯಾಕ್ನಿ ಮಾಪಿ ಗಾವ್ತಾ, ಖರೆ ಪವಿತ್ರ್ ಆತ್ಮ್ಯಾಚ್ಯಾ ವಿರೊದ್ ಬುರ್ಶೆ ಬೊಲ್ತಾ ತೆಕಾ ಕನ್ನಾಚ್ ಮಾಪಿ ಗಾವಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:31
15 ತಿಳಿವುಗಳ ಹೋಲಿಕೆ  

ಮನುಷ್ಯಕುಮಾರನ ಮೇಲೆ ಏನಾದರೂ ಮಾತಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವದು; ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ.


ಯಾವನು ದೇವಕುಮಾರನನ್ನು ತುಳಿದು ಒಡಂಬಡಿಕೆಯನ್ನು ಸ್ಥಿರಪಡಿಸಿದಂಥ ತನ್ನನ್ನು ಪವಿತ್ರಮಾಡಿದಂಥ ರಕ್ತವನ್ನು ಅಶುದ್ಧವೆಂದೆಣಿಸಿ ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬದನ್ನು ಯೋಚಿಸಿರಿ.


ಯಾಕಂದರೆ ಸತ್ಯದ ಪರಿಜ್ಞಾನವನ್ನು ನಾವು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಇರುವದಿಲ್ಲ;


ಚಂಡಿಗಳೇ, ಮನಶ್ಶುದ್ಧಿಯೂ ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.


ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ; ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುವದಿಲ್ಲ.


ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷವಿುಸಿಬಿಟ್ಟು ಸಕಲ ಅನೀತಿಯನ್ನು ಪರಿಹರಿಸಿ ನಮ್ಮನ್ನು ಶುದ್ಧಿಮಾಡುವನು.


ಒಂದು ಸಾರಿ ಜ್ಞಾನಪ್ರಕಾಶದಲ್ಲಿ ಸೇರಿ ಪರಲೋಕದಿಂದಾದ ದಾನದ ಅನುಭವವನ್ನು ಹೊಂದಿ


ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾ ಕೃಪೆಯಿಂದ ಕ್ಷವಿುಸುವನು.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲೇಶವಾದರೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವದೇ ನನಗೆ ಸಂತೋಷ. ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿರಿ, ಬಿಟ್ಟುಬಿಡಿರಿ; ನೀವು ಸಾಯಲೇಕೆ? ಇದು ಕರ್ತನಾದ ಯೇಹೋವನ ನುಡಿ.


ಬನ್ನಿರಿ ವಾದಿಸುವ ಎಂದು ಯೆಹೋವನು ಅನ್ನುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದ ಹಾಗೆ ಬಿಳುಪಾಗುವವು; ಕಿರಮಂಜಿಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.


ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇಯಾಗಲಿ ಸ್ವದೇಶಸ್ಥನೇಯಾಗಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು