Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:33 - ಕನ್ನಡ ಸತ್ಯವೇದವು J.V. (BSI)

33 ಮರ ಒಳ್ಳೇದಂದರೆ ಅದರ ಫಲವೂ ಒಳ್ಳೇದನ್ನಿರಿ. ಮರ ಹುಳುಕು ಅಂದರೆ ಅದರ ಫಲವೂ ಹುಳುಕು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 “ಮರ ಒಳ್ಳೆಯದಾದರೆ ಅದರ ಫಲವು ಒಳ್ಳೆಯದೆನ್ನಿರಿ. ಮರ ಕೆಟ್ಟದಾದರೆ ಅದರ ಫಲವು ಕೆಟ್ಟದು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 “ಒಳ್ಳೆಯ ಹಣ್ಣು ಬೇಕಾದರೆ ಮರ ಒಳ್ಳೆಯದಿರಬೇಕು. ಹುಳುಕು ಮರವಾದರೆ ಸಿಗುವುದು ಹುಳುಕು ಹಣ್ಣೇ. ಹಣ್ಣಿನ ರುಚಿಯಿಂದ ಮರವನ್ನು ಗುರುತಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 “ನಿಮಗೆ ಒಳ್ಳೆಯ ಫಲ ಬೇಕಾಗಿದ್ದರೆ ನೀವು ಒಳ್ಳೆಯ ಮರ ಹೊಂದಿರಬೇಕು. ನಿಮ್ಮ ಮರ ಒಳ್ಳೆಯದಾಗಿಲ್ಲದಿದ್ದರೆ ಅದು ಕೆಟ್ಟ ಫಲವನ್ನೇ ಬಿಡುವುದು. ಮರವನ್ನು ಅದರಲ್ಲಿ ಬಿಡುವ ಫಲದಿಂದಲೇ ತಿಳಿದುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 “ಮರವು ಒಳ್ಳೆಯದಾಗಿದ್ದರೆ, ಅದರ ಫಲವು ಒಳ್ಳೆಯದಾಗಿರುವುದು; ಮರವು ಕೆಟ್ಟದ್ದಾಗಿದ್ದರೆ, ಅದರ ಫಲವು ಕೆಟ್ಟದ್ದಾಗಿರುವುದು. ಏಕೆಂದರೆ ಮರವನ್ನು ಅದರ ಫಲದಿಂದಲೇ ಗುರುತಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 “ಬರಿ ಫಳಾ ಗಾವುಚಿ ತರ್, ಬರೆ ಝಾಡ್ ರ್‍ಹಾವ್ಕ್ ಪಾಜೆ , ಜರ್ ಝಾಡ್ ರೊಗೆಸಿ ಹಾಯ್, ತರ್ ತುಕಾ ಬರಿ ಫಳಾ ಗಾವಿನ್ಯಾತ್. ಫಳಾಂಚ್ಯಾ ವೈನಾಚ್ ಎಕ್ ಝಾಡ್ ಕಸ್ಲೆ ಮನುನ್ ವಳ್ಕುಕ್ ಹೊತಾ,”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:33
11 ತಿಳಿವುಗಳ ಹೋಲಿಕೆ  

ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೇದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೇನಾಧೀಶ್ವರದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದಾನು.


ಈಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಒಳ್ಳೇ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು ಎಂದು ಹೇಳಿದನು.


ನನ್ನ ಸಹೋದರರೇ, ಅಂಜೂರದ ಮರವು ಎಣ್ಣೇ ಮರದ ಕಾಯಿ ಬಿಡುವದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಹಾಗೆಯೇ ಉಪ್ಪುನೀರಿನ ಬಾವಿಯಿಂದ ಸಿಹಿನೀರು ಬರುವದಿಲ್ಲ.


ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನಮಾಡಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಲೇಕೆ?


ಕುರುಡನಾದ ಫರಿಸಾಯನೇ, ಮೊದಲು ಪಂಚಪಾತ್ರೆ ಬಟ್ಟಲುಗಳ ಒಳಭಾಗವನ್ನು ಶುಚಿಮಾಡು. ಆಗ ಅವುಗಳ ಹೊರಭಾಗವೂ ಶುಚಿಯಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು