Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:36 - ಕನ್ನಡ ಸತ್ಯವೇದವು J.V. (BSI)

36 ಇದಲ್ಲದೆ ನಾನು ನಿಮಗೆ ಹೇಳುವದೇನಂದರೆ ಮನುಷ್ಯರು ಸುಮ್ಮನೆ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿ ನ್ಯಾಯವಿಚಾರಣೆಯ ದಿನದಲ್ಲಿ ಉತ್ತರಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಜನರು ತಾವಾಡುವ ಪ್ರತಿಯೊಂದು ಜೊಳ್ಳುಮಾತಿಗೂ ತೀರ್ಪಿನ ದಿನ ಲೆಕ್ಕಕೊಡಬೇಕಾಗುವುದು ಎಂಬುದು ನಿಮಗೆ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಜನರು ನಿರ್ಲಕ್ಷ್ಯಭಾವದಿಂದ ಆಡಿದ ಪ್ರತಿಯೊಂದು ಮಾತಿಗೂ ನ್ಯಾಯವಿಚಾರಣೆಯ ದಿನದಲ್ಲಿ ಉತ್ತರ ಕೊಡಬೇಕಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 “ತುಮ್ಕಾ ಯಾದ್ ರ್‍ಹಂವ್ದಿತ್, ಝಡ್ತಿಚ್ಯಾ ದಿಸಿ ಸಗ್ಳೆ ಜಾನಾ ಉಪೆಗಾಕ್ ಪಡಿನಸಲ್ಲ್ಯಾ ಗೊಸ್ಟಿಯಾ ಬೊಲಲ್ಲ್ಯಾಚೊ ಲೆಕ್ಕ್ ದಿತಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:36
10 ತಿಳಿವುಗಳ ಹೋಲಿಕೆ  

ಒಳ್ಳೇದಾಗಲಿ ಕೆಟ್ಟದಾಗಲಿ ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸುವ ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.


ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನವು ಬರುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದುಬರುವದು.


ಇದಲ್ಲದೆ ಸತ್ತವರಾದ ದೊಡ್ಡವರೂ ಚಿಕ್ಕವರೂ ಸಿಂಹಾಸನದ ಮುಂದೆ ನಿಂತಿರುವದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಮತ್ತು ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದಿದ್ದ ಸಂಗತಿಗಳ ಆಧಾರದಿಂದ ಅವರವರ ಕೃತ್ಯಗಳ ಪ್ರಕಾರ ಸತ್ತವರಿಗೆ ನ್ಯಾಯತೀರ್ಪಾಯಿತು.


ನ್ಯಾಯವಿಚಾರಣೆಯ ದಿವಸದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಆದರೆ ನ್ಯಾಯವಿಚಾರಣೆಯ ದಿನದಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವದು ಎಂದು ನಿಮಗೆ ಹೇಳುತ್ತೇನೆ.


ನಿನ್ನ ಮಾತುಗಳಿಂದಲೇ ನೀತಿವಂತನೆಂದು ತೀರ್ಪು ಹೊಂದುವಿ; ನಿನ್ನ ಮಾತುಗಳಿಂದಲೇ ಅಪರಾಧಿಯೆಂದು ತೀರ್ಪುಹೊಂದುವಿ ಅಂದನು.


ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.


ಎಷ್ಟು ಕೊಂಚ ಕಿಚ್ಚು ಎಷ್ಟು ದೊಡ್ಡ ಕಾಡನ್ನು ಉರಿಸುತ್ತದೆ ನೋಡಿರಿ. ನಾಲಿಗೆಯೂ ಕಿಚ್ಚೇ. ನಾಲಿಗೆಯು ಅಧರ್ಮಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಟ್ಟದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕದಿಂದ ಬೆಂಕಿಹತ್ತಿಸಿಕೊಳ್ಳುತ್ತಾ ಪ್ರಪಂಚವೆಂಬ ಚಕ್ರಕ್ಕೆ ಬೆಂಕಿಹಚ್ಚುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು