Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:40 - ಕನ್ನಡ ಸತ್ಯವೇದವು J.V. (BSI)

40 ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿಹಗಲು ಭೂಗರ್ಭದೊಳಗೆ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಅಂದರೆ ಯೋನನು ಹೇಗೆ ಮೂರು ದಿನ ರಾತ್ರಿ ಹಗಲು ದೊಡ್ಡ ಮೀನಿನ ಹೊಟ್ಟೆಯೊಳಗೆ ಇದ್ದನೋ, ಹಾಗೆಯೇ ಮನುಷ್ಯಕುಮಾರನು ಮೂರು ದಿನ ರಾತ್ರಿ ಹಗಲು ಭೂಗರ್ಭದೊಳಗೆ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಯೋನನು ಮೂರುದಿನ ಹಗಲು ರಾತ್ರಿ ದೊಡ್ಡ ಮೀನಿನ ಉದರದಲ್ಲಿದ್ದನು. ಅದರಂತೆಯೇ ನರಪುತ್ರನು ಮೂರುದಿನ ಹಗಲು ರಾತ್ರಿ ಭೂಗರ್ಭದಲ್ಲಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಪ್ರವಾದಿಯಾದ ಯೋನನು ಮೂರು ದಿವಸ ಹಗಲಿರುಳು ಒಂದು ದೊಡ್ಡ ಮೀನಿನ ಹೊಟ್ಟೆಯಲ್ಲಿ ಹೇಗಿದ್ದನೋ ಅದೇ ರೀತಿಯಲ್ಲಿ ಮನುಷ್ಯಕುಮಾರನು ಸಮಾಧಿಯಲ್ಲಿ ಮೂರು ದಿನ ಹಗಲಿರುಳು ಇರುವನು. ಇದಲ್ಲದೆ ಬೇರೆ ಯಾವ ಸೂಚಕಕಾರ್ಯವನ್ನು ಅವರಿಗೆ ತೋರಿಸಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ದೊಡ್ಡ ಮೀನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಪುತ್ರನಾದ ನಾನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭದಲ್ಲಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಜೊನಾ ತಿನ್ ದಿಸ್ ಅನಿ ತಿನ್ ರಾತ್ ಕಶೆ ಮಾಸೊಳಿಚ್ಯಾ ಪೊಟಾತ್ ರ್‍ಹಾಲೊ, ತಸೆಚ್ ಮಾನ್ಸಾಚೊ ಲೆಕ್‍ಬಿ ತಿನ್ ದಿಸ್ ಅನಿ ತಿನ್ ರಾತ್ ಜಿಮ್ನಿಚ್ಯಾ ಭುತ್ತುರ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:40
12 ತಿಳಿವುಗಳ ಹೋಲಿಕೆ  

ಇತ್ತ ಯೋನನನ್ನು ನುಂಗಲು ಯೆಹೋವನು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನ ಹಗಲಿರುಳು ಆ ಮೀನಿನ ಹೊಟ್ಟೆಯೊಳಗೆ ಇದ್ದನು.


ಯೇಸು - ಈ ದೇವಾಲಯವನ್ನು ಕೆಡವಿರಿ; ನಾನು ಮೂರು ದಿನದಲ್ಲಿ ಅದನ್ನು ಎಬ್ಬಿಸುವೆನು ಅಂದನು.


ಅವರು ಆತನನ್ನು ಕೊಲ್ಲುವರು; ಸತ್ತ ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.


ದೇವಾಲಯವನ್ನು ಕೆಡವಿ ಮೂರು ದಿನದಲ್ಲಿ ಕಟ್ಟುವವನೇ, ನಿನ್ನನ್ನು ರಕ್ಷಿಸಿಕೋ; ದೇವರಮಗನು ಆಗಿದ್ದರೆ ಶಿಲುಬೆಯಿಂದ ಇಳಿದು ಬಾ ಎಂದು ಆತನನ್ನು ಹಂಗಿಸುತ್ತಿದ್ದರು.


ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇವಿುಗೆ ಹೋಗಿ ಅಲ್ಲಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕೆಂದು ತನ್ನ ಶಿಷ್ಯರಿಗೆ ತಿಳಿಸುವದಕ್ಕೆ ಪ್ರಾರಂಭಮಾಡಿದನು.


ನನ್ನ ಜೀವಕ್ಕೆ ಕೇಡುಬಗೆಯುವವರೋ ಅಧೋಲೋಕಕ್ಕೆ ಇಳಿದುಹೋಗುವರು.


ಯೇಸು ಅವನಿಗೆ - ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ ಎಂದು ಹೇಳಿದನು.


ಇಸ್ರಾಯೇಲ್‍ದೇವರಾದ ಯೆಹೋವನು ತನ್ನ ಸೇವಕನೂ ಗತ್‍ಹೇಫೆರಿನವನಾದ ಅವಿುತ್ತೈಯ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರವಾಗಿ ಮುಂತಿಳಿಸಿದಂತೆ ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಾಯೇಲ್ಯರ ಮೇರೆಯನ್ನು ತಿರಿಗಿ ತೆಗೆದುಕೊಂಡವನು ಇವನೇ.


ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದಾನೆ ಎಂದು ಹೇಳಿದನು.


ತಾನು ಹೇಳಿದಂತೆ ಎದ್ದಿದ್ದಾನೆ; ಬನ್ನಿ, ಆತನು ಮಲಗಿದ್ದ ಸ್ಥಳವನ್ನು ನೋಡಿರಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು