ಮತ್ತಾಯ 12:41 - ಕನ್ನಡ ಸತ್ಯವೇದವು J.V. (BSI)41 ನ್ಯಾಯವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ನಿಂತು ಇವರನ್ನು ಅಪರಾಧಿಗಳೆಂದು ಹೇಳುವರು; ಅವರು ಯೋನನು ಸಾರಿದ ವಾಕ್ಯವನ್ನು ಕೇಳಿ ದೇವರಕಡೆಗೆ ತಿರುಗಿಕೊಂಡರು; ಆದರೆ ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ನಿನೆವೆ ಪಟ್ಟಣದವರು ಯೋನನು ಸಾರಿದ ವಾಕ್ಯವನ್ನು ಕೇಳಿ ಮಾನಸಾಂತರಪಟ್ಟರು. ಇಗೋ, ಇಲ್ಲಿ ಯೋನನಿಗಿಂತಲೂ ಹೆಚ್ಚಿನವನಿದ್ದಾನೆ. ನ್ಯಾಯ ವಿಚಾರಣೆಯಲ್ಲಿ ನಿನೆವೆ ಪಟ್ಟಣದವರು ಈ ಸಂತತಿಯವರೊಂದಿಗೆ ಎದ್ದು ನಿಂತು ಇವರನ್ನು ಖಂಡಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಅವರು ಪಾಪಕ್ಕೆ ವಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ನ್ಯಾಯವಿಚಾರಣೆಯ ದಿನದಂದು ನಿನೆವೆ ಪಟ್ಟಣದ ಜನರು ಇಂದು ಜೀವಿಸುತ್ತಿರುವ ನಿಮ್ಮೊಂದಿಗೆ ನಿಂತುಕೊಂಡು ನಿಮ್ಮನ್ನು ಅಪರಾಧಿಗಳೆಂದು ಘೋಷಿಸುವರು. ಏಕೆಂದರೆ ಯೋನನು ಬೋಧಿಸಿದಾಗ ಅವರು ತಮ್ಮ ಜೀವಿತವನ್ನು ಬದಲಾವಣೆ ಮಾಡಿಕೊಂಡರು. ಆದರೆ ನಾನು ನಿಮಗೆ ಹೇಳುವುದೇನೆಂದರೆ ನಾನು ಯೋನನಿಗಿಂತಲೂ ಹೆಚ್ಚಿನವನಾಗಿರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ನಿನೆವೆ ಪಟ್ಟಣದವರು ನ್ಯಾಯತೀರ್ಪಿನಲ್ಲಿ ಈ ಸಂತತಿಗೆ ಎದುರಾಗಿ ಎದ್ದು ನಿಂತು ಇದನ್ನು ಅಪರಾಧ ಎಂದು ತೀರ್ಪುಮಾಡುವರು, ಏಕೆಂದರೆ ಯೋನನು ಸಾರಿದ್ದನ್ನು ಕೇಳಿ ಅವರು ದೇವರ ಕಡೆಗೆ ತಿರುಗಿಕೊಂಡರು; ಇಗೋ, ಇಲ್ಲಿ ಯೋನನಿಗಿಂತಲೂ ತುಂಬಾ ದೊಡ್ಡವನು ಇದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 ಝಡ್ತಿಚ್ಯಾ ದಿಸಿ ನಿನಿವೆಚಿ ಲೊಕಾ ಇಬೆ ರ್‍ಹಾವ್ನ್ ಹಿ ಪಿಳ್ಗಿ ಚುಕಿದಾರ್ ಮನುನ್ ದಾಕ್ವುನ್ ದಿತ್ಯಾತ್, ಕಶ್ಯಾಕ್ ಮಟ್ಲ್ಯಾರ್, ಜೊನಾನ್ ಸಾಂಗಟಲ್ಲೆ ತೆನಿ ಆಯಿಕ್ಲ್ಯಾನಿ, ಅನಿ ಪಾಪಾನಿತ್ನಾ ದೆವಾಕ್ಡೆ ಪರತ್ಲ್ಯಾನಿ, ಖರೆ ಮಿಯಾ ತುಮ್ಕಾ ಸಾಂಗ್ತಾ, ಹಿತ್ತೆ ಜೊನಾಚ್ಯಾನ್ಕಿ ಮೊಟೊ ಹಾಯ್!” ಅಧ್ಯಾಯವನ್ನು ನೋಡಿ |