Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:7 - ಕನ್ನಡ ಸತ್ಯವೇದವು J.V. (BSI)

7 ಕರುಣೆಯೇಬೇಕು ಎಂಬದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪು ಮಾಡುತ್ತಿದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ ನಿರಪರಾಧಿಗಳನ್ನು ಅಪರಾಧಿಗಳೆಂದು ತೀರ್ಪುಮಾಡುತ್ತಿರಲಿಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ‘ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂಬ ವಾಕ್ಯದ ಅರ್ಥ ನಿಮಗೆ ತಿಳಿದಿದ್ದರೆ, ನಿರ್ದೋಷಿಗಳನ್ನು ನೀವು ಖಂಡಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ‘ಪಶುಯಜ್ಞಗಳು ನನಗೆ ಬೇಡ, ಕರುಣೆಯೇ ನನಗೆ ಬೇಕು’ ಎಂದು ಪವಿತ್ರಗ್ರಂಥವು ಹೇಳುತ್ತದೆ. ಅದರ ಅರ್ಥವನ್ನು ನೀವು ನಿಜವಾಗಿಯೂ ಅರಿತಿಲ್ಲ. ನೀವು ಅದರ ಅರ್ಥವನ್ನು ತಿಳಿದುಕೊಂಡರೆ ತಪ್ಪನ್ನೇನೂ ಮಾಡದ ಇವರಿಗೆ ತಪ್ಪಿತಸ್ಥರೆಂದು ತೀರ್ಪು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ, ನಿರಪರಾಧಿಗಳನ್ನು ಖಂಡಿಸುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಪವಿತ್ರ್ ಪುಸ್ತಕ್ ಸಾಂಗ್ತಾ, ಮಾಕಾ ದಯಾ ಪಾಜೆ, ಜನಾವರಾಂಚಿ ಬಲಿ ಮಾಕಾ ನಕ್ಕೊ, ಹೆಚೊ ಅರ್ತ್‍ ತುಮ್ಕಾ ಗೊತ್ತ್ ರ್‍ಹಾಲ್ಯಾರ್, ತುಮಿ ಚುಕ್ ಕರುನಸಲ್ಲ್ಯಾ ಲೊಕಾಕ್ನಿ ಬೊಟ್ ಕರುನ್ ದಾಕ್ವಿನಶಿ ಹೊತ್ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:7
14 ತಿಳಿವುಗಳ ಹೋಲಿಕೆ  

ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.


ನೀವು ಹೋಗಿ - ನನಗೆ ಯಜ್ಞವು ಬೇಡ, ಕರುಣೆಯೇಬೇಕು ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು.


ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.


ಯೆರೂಸಲೇವಿುನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿಗಳೂ ಆತನನ್ನಾಗಲಿ ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲಿ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.


ಅದಕ್ಕೆ ಯೇಸು ಉತ್ತರವಾಗಿ ಅವರಿಗೆ - ನೀವು ಶಾಸ್ತ್ರವನ್ನಾದರೂ ದೇವರ ಶಕ್ತಿಯನ್ನಾದರೂ ತಿಳಿಯದೆ ತಪ್ಪುವವರಾಗಿದ್ದೀರಿ;


ಜೀವತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ; ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ.


ನೀತಿವಂತನಿಗೆ ಮರಣದಂಡನೆಯನ್ನು ವಿಧಿಸಿ ಅವನನ್ನು ಕೊಂದುಹಾಕಿದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.


ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.


ಇದಲ್ಲದೆ ಅವನ ಮೂವರು ಸ್ನೇಹಿತರು ಯೋಬನನ್ನು ಖಂಡಿಸತಕ್ಕ ಉತ್ತರವನ್ನು ಹೇಳಲಾರದೆ ಹೋದದರಿಂದ ಅವನು ಅವರ ಮೇಲೆಯೂ ಕೋಪಿಸಿಕೊಂಡನು.


ಅದಕ್ಕೆ ಸಮುವೇಲನು - ಯೆಹೋವನು ವಿಧೇಯತ್ವಕ್ಕೆ ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವದಕ್ಕಿಂತ ಮಾತು ಕೇಳುವದು ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತ್ವವು ವಿಶೇಷವಾಗಿದೆ.


ಆತನನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಬುದ್ಧಿಯಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸುವದು ಮತ್ತು ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಹೆಚ್ಚಿನವು ಅಂದನು.


ಅಲ್ಲಿಂದ ಬಂದ ಜನರಿಗೆಲ್ಲಾ ಸುನ್ನತಿಯಾಗಿತ್ತು. ಐಗುಪ್ತವನ್ನು ಬಿಟ್ಟನಂತರ ಅರಣ್ಯ ಪ್ರಯಾಣದಲ್ಲಿ ಹುಟ್ಟಿದವರಿಗೆ ಸುನ್ನತಿಯಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು