ಮತ್ತಾಯ 13:11 - ಕನ್ನಡ ಸತ್ಯವೇದವು J.V. (BSI)11 ಅದಕ್ಕಾತನು ಅವರಿಗೆ - ಪರಲೋಕರಾಜ್ಯದ ಗುಟ್ಟುಗಳನ್ನು ತಿಳಿಯುವ ವರವು ನಿಮಗೇ ಕೊಟ್ಟದೆ; ಅವರಿಗೆ ಕೊಟ್ಟಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, “ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೇಸು, “ಪರಲೋಕರಾಜ್ಯದ ರಹಸ್ಯವಾದ ಸತ್ಯಗಳನ್ನು ನೀವು ಮಾತ್ರ ತಿಳಿದುಕೊಳ್ಳಬಲ್ಲಿರಿ. ಈ ಸತ್ಯಗಳ ರಹಸ್ಯವು ಬೇರೆ ಜನರಿಗೆ ತಿಳಿಯಲಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೇಸು ಅದಕ್ಕೆ ಉತ್ತರವಾಗಿ ಹೇಳಿದ್ದು: “ಪರಲೋಕ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವ ಜ್ಞಾನವು ನಿಮಗೆ ಕೊಡಲಾಗಿದೆ, ಆದರೆ ಅವರಿಗಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತನ್ನಾ ಜೆಜುನ್ ತೆಂಕಾ, “ಸರ್‍ಗಾಚ್ಯಾ ರಾಜಾಚ್ಯಾ ವಿಶಯಾತ್ ಹೊತ್ತ್ಯಾ ಘುಟಾಚಿ ಬುದ್ವಂತ್ಕಿ, ತುಮ್ಕಾ ಎವ್ಡಿಚ್ ದಿಲ್ಲಿ ಹಾಯ್, ತೆಂಕಾ ದಿಲ್ಲಿ ನಾ. ಅಧ್ಯಾಯವನ್ನು ನೋಡಿ |
ಅನಾದಿಯಾಗಿ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪ್ರಕಾಶಕ್ಕೆ ಬಂದಿರುವ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿಸುವದಕ್ಕೆ ಶಕ್ತನಾಗಿರುವ