Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:12 - ಕನ್ನಡ ಸತ್ಯವೇದವು J.V. (BSI)

12 ಯಾಕಂದರೆ ಇದ್ದವನಿಗೆ ಕೊಡಲ್ಪಡುವದು, ಅವನಿಗೆ ಮತ್ತೂ ಹೆಚ್ಚಾಗುವದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು ಅವನಿಗೆ ಇನ್ನೂ ಹೆಚ್ಚು ಸಮೃದ್ಧಿಯಾಗುವುದು ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸ್ವಲ್ಪ ಜ್ಞಾನವನ್ನು ಹೊಂದಿರುವವನು ಇನ್ನೂ ಹೆಚ್ಚು ಜ್ಞಾನವನ್ನು ಪಡೆದುಕೊಂಡು ಸಾಕಷ್ಟು ಜ್ಞಾನವಂತನಾಗುವನು. ಆದರೆ ಜ್ಞಾನವನ್ನು ಹೊಂದಿಲ್ಲದವನು ತನಗಿರುವ ಸ್ವಲ್ಪ ಜ್ಞಾನವನ್ನೂ ಕಳೆದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು, ಅವರಿಗೆ ಹೆಚ್ಚು ಸಮೃದ್ಧಿಯಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜ್ಯಾ ಮಾನ್ಸಾಕ್ಡೆ ಉಲ್ಲೆಸೆಬಿ ಶಾನ್ಪಾನ್ ಹಾಯ್ ತೆಕಾ ಜಾಸ್ತಿಚೆ ಶಾನ್ಪಾನ್ ದಿವ್ನ್ ಹೊತಾ, ತೆಚೆಸಾಟ್ನಿ ತೆಚೆಕ್ಡೆ ತೆಕಾ ಫಿರೆ ಹೊವ್ನ್ ಜಾಸ್ತಿಚೆ ಶಾನ್ಪಾನ್ ರ್‍ಹಾತಾ; ಖರೆ ಜೆ ಖಲ್ಯಾ ಮಾನ್ಸಾಕ್ಡೆ ಉಲ್ಲೆಬಿ ಶಾನ್ಪಾನ್ ನಾ ತೆಚೆಕ್ಡೆ ಹೊತ್ತೆಬಿ ಉಲ್ಲೆಸೆ ಕಾಡುನ್ ಘೆವ್ನ್ ಜಾವ್ನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:12
17 ತಿಳಿವುಗಳ ಹೋಲಿಕೆ  

ಇದ್ದವರಿಗೆಲ್ಲಾ ಕೊಡಲ್ಪಡುವದು, ಅವರಿಗೆ ಮತ್ತೂ ಹೆಚ್ಚಾಗುವದು; ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು.


ಆದದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ; ಯಾಕಂದರೆ ಇದ್ದವನಿಗೆ ಕೊಡಲ್ಪಡುವದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವದು ಅಂದನು.


ಆದದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ದೇವರ ಕಡೆಗೆ ತಿರುಗಿಕೋ. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ದೇವರ ಕಡಗೆ ತಿರುಗಿಕೊಳ್ಳದೆ ಹೋದರೆ ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು.


ಆದರೆ ಅಬ್ರಹಾಮನು - ಕಂದಾ, ನೀನು ಆಶಿಸಿದ ಸುಖವನ್ನು ನಿನ್ನ ಜೀವಮಾನದಲ್ಲಿ ಹೊಂದಿದಿ; ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.


ಆದದರಿಂದ ದೇವರರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಕ್ಕೆ ಕೊಡಲಾಗುವದು.


ಯಜಮಾನನು ಅವನನ್ನು ಕರೆದು - ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಮನೆವಾರ್ತೆಯ ಲೆಕ್ಕವನ್ನು ಒಪ್ಪಿಸು; ನೀನು ಇನ್ನು ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಎಂದು ಹೇಳಿದನು.


ಕೆಲವು ಮಾತ್ರ ಬೇಕಾದದ್ದು, ಅಥವಾ ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ; ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಎಂದು ಉತ್ತರಕೊಟ್ಟನು.


ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಪ್ರಭಾವದೊಡನೆ ಬರುವಾಗ ನಾಚಿಕೊಳ್ಳುವನು.


ಹಾಗಾದರೆ ದ್ರಾಕ್ಷೆಯ ತೋಟದ ಧಣಿಯು ಏನು ಮಾಡುವನು? ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವದಕ್ಕೆ ಕೊಡುವನು.


ತಿಳಿಯದೆ ಪೆಟ್ಟುಗಳಿಗೆ ಯೋಗ್ಯವಾದದ್ದನ್ನು ನಡಿಸಿದವನು ಸ್ವಲ್ಪ ಪೆಟ್ಟು ತಿನ್ನುವನು. ಯಾವನಿಗೆ ಬಹಳವಾಗಿ ಕೊಟ್ಟದೆಯೋ ಅವನ ಕಡೆಯಿಂದ ಬಹಳವಾಗಿ ನಿರೀಕ್ಷಿಸಲ್ಪಡುವದು; ಇದಲ್ಲದೆ ಯಾವನ ವಶಕ್ಕೆ ಬಹಳವಾಗಿ ಒಪ್ಪಿಸಿದೆಯೋ ಅವನ ಕಡೆಯಿಂದ ಇನ್ನೂ ಹೆಚ್ಚಾಗಿ ಕೇಳುವರು.


ಆತನು ನಮ್ಮ ಮೇಲೆ ಅತಿಶಯವಾದ ಕೃಪೆಯನ್ನು ಇಡುತ್ತಾನೆ. ಆದುದರಿಂದ - ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ ಎಂದು ಶಾಸ್ತ್ರವು ಹೇಳುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು